< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 1 >
1 ೧ ದೇವರ ಚಿತ್ತದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ಸೊಸ್ಥೆನನೂ,
Pauro, akadanwa nokuda kwaMwari, kuti ave mupostori waKristu Jesu, naSositeni hama yedu,
2 ೨ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
kukereke yaMwari iri muKorinde, kuna vaya vakaitwa vatsvene muna Kristu Jesu uye vakadanwa kuti vave vatsvene pamwe chete navose vari kwose kwose vanodana kuzita raIshe wedu Jesu Kristu, Ishe wavo nowedu:
3 ೩ ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.
Nyasha norugare ngazvive nemi zvinobva kuna Mwari Baba vedu naShe Jesu Kristu.
4 ೪ ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.
Ndinogara ndichivonga Mwari nguva dzose nokuda kwenyasha dzake pamusoro penyu muna Kristu Jesu.
5 ೫ ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
Nokuti maari makapfumiswa pazvinhu zvose, mukutaura kwenyu kwose uye nomuruzivo rwenyu rwose,
6 ೬ ಕ್ರಿಸ್ತನ ಕುರಿತಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿರುವ ಹಾಗೆಯೇ ಆತನು ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
nokuti uchapupu hwedu pamusoro paKristu hwakasimbiswa mamuri.
7 ೭ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,
Naizvozvo hapana kana chipo chomweya chamunoshayiwa pamunomirira nomwoyo wose kuratidzwa kwaIshe wedu Jesu Kristu.
8 ೮ ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.
Achakusimbisai kusvikira kumagumo, kuti murege kuva nechamungapomerwa pazuva raIshe wedu Jesu Kristu.
9 ೯ ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.
Mwari, iye akakudanai kuti muwadzane noMwanakomana wake Jesu Kristu Ishe wedu, akatendeka.
10 ೧೦ ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
Ndinokukumbirai zvikuru, hama, muzita raIshe wedu Jesu Kristu, kuti imi mose mutaure chinhu chimwe, kuti pakati penyu parege kuva nokupesana uye kuti mubatanidzwe zvakanaka pamurangariro mumwe nomukufunga.
11 ೧೧ ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.
Hama dzangu, vamwe venyu vokwaKirowe vakandiudza kuti pane gakava pakati penyu.
12 ೧೨ ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
Zvandinoreva ndezvokuti: Mumwe wenyu anoti, “Ini ndiri waPauro,” mumwe oti, “Ini ndiri waAporosi,” mumwewo oti, “Ini ndiri waKefasi,” mumwe zvakare oti, “Ini ndiri waKristu.”
13 ೧೩ ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?
Kristu akaparadzaniswa here? Pauro akarovererwa pamuchinjikwa nokuda kwenyu here? Makabhabhatidzwa muzita raPauro here?
14 ೧೪ ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ.
Ndinovonga Mwari kuti handina kubhabhatidza kana mumwe wenyu, kunze kwaKrispo naGayo,
15 ೧೫ ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ.
kuti kurege kuva nomumwe wenyu anoti akabhabhatidzwa muzita rangu.
16 ೧೬ ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ.
Hongu, ndakabhabhatidzawo veimba yaStefanasi; kunze kwaivavo, handirangariri kana ndakabhabhatidzazve mumwe munhu.
17 ೧೭ ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
Nokuti Kristu haana kundituma kuti ndinobhabhatidza asi kuti ndinoparidza vhangeri, kwete namashoko ouchenjeri hwavanhu, kuti muchinjikwa waKristu urege kupedzwa simba rawo.
18 ೧೮ ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.
Nokuti shoko romuchinjikwa upenzi kuna vari kuparara, asi kwatiri isu vanoponeswa isimba raMwari.
19 ೧೯ “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.
Nokuti kwakanyorwa kuchinzi: “Ndichaparadza uchenjeri hwavakachenjera; ndichakonesa kuziva kwavanoziva.”
20 ೨೦ ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? (aiōn )
Akachenjera aripiko? Akadzidza aripiko? Muiti wenharo wenguva ino aripiko? Ko, Mwari haana kuita uchenjeri hwenyika ino upenzi here? (aiōn )
21 ೨೧ ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
Nokuti muuchenjeri hwaMwari, nyika kubudikidza nouchenjeri hwayo, haina kumuziva, Mwari akafadzwa nazvo kuti vanotenda avaponese kubudikidza noupenzi hwezvakaparidzwa.
22 ೨೨ ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
VaJudha vanoda zviratidzo uye vaGiriki vanotsvaka uchenjeri,
23 ೨೩ ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
asi isu tinoparidza Kristu akarovererwa pamuchinjikwa, chigumbuso kuvaJudha noupenzi kune veDzimwe Ndudzi.
24 ೨೪ ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.
Asi kuna avo vakadanwa naMwari, zvose vaJudha navaGiriki, Kristu isimba raMwari nouchenjeri hwaMwari.
25 ೨೫ ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.
Nokuti upenzi hwaMwari hwakachenjera kupfuura uchenjeri hwomunhu, uye utera hwaMwari hwakasimba kupfuura simba romunhu.
26 ೨೬ ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.
Hama dzangu, rangarirai zvamakanga muri pamakadanwa. Havazi vazhinji venyu vaiva namasimba; havasi vazhinji vaikudzwa pakuzvarwa kwavo.
27 ೨೭ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
Asi Mwari akasarudza zvinhu zvoupenzi zvenyika ino kuti anyadzise vakachenjera; Mwari akasarudza zvisina simba zvenyika ino kuti anyadzise vane simba.
28 ೨೮ ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.
Akasarudza zvinhu zvepasi pasi zvenyika ino uye zvakazvidzwa, nezvinhu zvisipo, kuti ashayise simba zvinhu zviripo,
29 ೨೯ ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
kuti kurege kuva nomunhu angazvikudza pamberi pake.
30 ೩೦ ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
Nokuda kwake, imi muri muna Kristu Jesu, uyo akava kwatiri uchenjeri hunobva kuna Mwari, iko kururama, noutsvene uye norudzikinuro rwedu.
31 ೩೧ “ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.
Naizvozvo, sezvazvakanyorwa zvichinzi, “Anozvikudza ngaazvikudze muna She.”