< ಯೋಹಾನನು ಬರೆದ ಮೊದಲನೆಯ ಪತ್ರಿಕೆ 1 >

1 ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.
Tunawajulisha lile lililokuwepo tangu mwanzo, lile tulilosikia, ambalo tumeliona kwa macho yetu, ambalo tumelitazama na kuligusa kwa mikono yetu, kuhusu Neno la uzima.
2 ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ. (aiōnios g166)
Uzima huo ulidhihirishwa; nasi tumeuona na kuushuhudia, nasi twawatangazia uzima wa milele, ambao ulikuwa pamoja na Baba, nao ukadhihirishwa kwetu. (aiōnios g166)
3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.
Twawatangazia lile tuliloliona na kulisikia, ili nanyi mwe na ushirika nasi. Na ushirika wetu hasa ni pamoja na Baba na Mwanawe, Yesu Kristo.
4 ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.
Tunaandika mambo haya ili furaha yetu ipate kuwa timilifu.
5 ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.
Huu ndio ujumbe tuliosikia kutoka kwake na kuwatangazia ninyi: kwamba Mungu ni nuru na ndani yake hamna giza lolote.
6 ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.
Kama tukisema kwamba twashirikiana naye huku tukienenda gizani, twasema uongo, wala hatutendi lililo kweli.
7 ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
Lakini tukienenda nuruni, kama yeye alivyo nuruni, twashirikiana sisi kwa sisi na damu yake Yesu, Mwana wake, yatusafisha dhambi yote.
8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.
Kama tukisema kwamba hatuna dhambi, twajidanganya wenyewe wala kweli haimo ndani yetu.
9 ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
Kama tukiziungama dhambi zetu, yeye ni mwaminifu na wa haki, atatusamehe dhambi zetu na kutusafisha kutoka kwenye udhalimu wote.
10 ೧೦ ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.
Kama tukisema hatukutenda dhambi, twamfanya yeye kuwa mwongo na neno lake halimo ndani yetu.

< ಯೋಹಾನನು ಬರೆದ ಮೊದಲನೆಯ ಪತ್ರಿಕೆ 1 >