< ಯೋಹಾನನು ಬರೆದ ಮೊದಲನೆಯ ಪತ್ರಿಕೆ 1 >
1 ೧ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.
Ми [звіщаємо вам] про те, що було від початку, що ми чули, що бачили власними очима, що оглядали й до чого торкалися нашими руками, – про Слово Життя.
2 ೨ ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ. (aiōnios )
Життя явилося, ми Його бачили, [про Нього] свідчимо й звіщаємо вам Життя вічне, яке було з Отцем і явилося нам. (aiōnios )
3 ೩ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.
Ми проголошуємо вам те, що ми бачили й чули, щоб і ви мали спільність із нами. А наша спільність – з Отцем та Його Сином Ісусом Христом.
4 ೪ ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.
Про це й пишемо вам, щоб наша радість була повною.
5 ೫ ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.
Ось звістка, яку ми чули від Нього й звіщаємо вам: Бог – це світло, і в Ньому немає ніякої темряви.
6 ೬ ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.
Якщо ми кажемо, що маємо спільність із Ним, а ходимо в темряві, то обманюємо й не перебуваємо в істині.
7 ೭ ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
А якщо ходимо у світлі, як і Він є у світлі, то маємо спільність одне з одним, і кров Ісуса, Сина Божого, очищає нас від усякого гріха.
8 ೮ ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.
Якщо ми кажемо, що не маємо гріха, то вводимо себе в оману і в нас немає істини.
9 ೯ ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
Якщо ж ми визнаємо наші гріхи, то Він простить їх та очистить нас від усякої неправедності, бо Він вірний і праведний.
10 ೧೦ ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.
А коли кажемо, що ми не згрішили, то робимо Його неправдомовцем, і Його Слова немає в нас.