< ಯೋಹಾನನು ಬರೆದ ಮೊದಲನೆಯ ಪತ್ರಿಕೆ 2 >

1 ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
Ta nayto, nagara hintte oothonna mela taani hayssa hinttew xaafays. Shin oonikka nagara oothiko Aawa matan nuus gaannatiya Xilloy, Yesuus Kiristtoosi, de7ees.
2 ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
Nu nagaray Kiristtoosa baggara atto geetettees. I nu nagaraa xalaalas gidonnashin, asa ubbaa nagaraas yarshshettis.
3 ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.
Nuuni Xoossaa kiitaa naagikko, sidhey baynnashin, tuma nu iya eroos.
4 ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.
Oonikka, “Taani iya erays” yaagishe, iya kiitaa naagonna ixxiko he uray worddanchcho; tumatethi iyan baawa.
5 ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
Shin iya qaalas nu kiitettiyabaa gidikko he uray Xoossaa siiqiya siiqoy polo gidees. Nuuni Xoossan de7eyssas hessi baw tuma markka.
6 ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.
Taani, “Xoossan de7ays” giya oonikka Kiristtoosi de7idayssada daanaw bessees.
7 ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.
Ta siiqo ishato, taani hinttew koyroppe de7iya gal77a kiitaa xaafaysippe attin ooratha kiita xaafikke. Ikka hintte si7ida he gal77a kiitaa.
8 ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
Gidikkoka, Kiristtoosaninne hinttenan tuma gididi de7iya, ooratha kiitaa xaafays. Dhumay kichchin, ha77i tuma poo7oy poo7ees.
9 ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
“Poo7on de7ays” gishe ba ishaa ixxiya oonikka, ha77ika dhuman de7ees.
10 ೧೦ ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.
Ba ishaa dosiya oonikka poo7on de7ees. He uran hara asi dhubbiyabay baawa.
11 ೧೧ ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.
Shin ba ishaa ixxiya oonikka dhuman de7ees; dhuman hamuttees. Dhumay iya ayfiyaa qooqisida gisho aw biyakko erenna.
12 ೧೨ ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
Ta nayto, Kiristtoosa sunthaa baggara hintte nagaray atto geetettida gisho taani hinttew xaafays.
13 ೧೩ ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
Aawato, koyroppe de7iya, iya hintte erida gisho hinttew xaafays. Yalagato, Xalahiya hintte xoonida gisho hinttew xaafays.
14 ೧೪ ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.
Guutha nayto, Xoossaa hintte erida gisho hinttew xaafays. Aawato, koyroppe de7iya iya hintte erida gisho hinttew xaafays. Yalagato, hintte mino gidiya gisho, Xoossaa qaalay hinttenan de7iya gishonne Xalahiya hintte xoonida gisho hinttew xaafays.
15 ೧೫ ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
Alame woykko alamen de7iyabaa dosoppite. Alamiya dosiya oonikka Xoossaa dosenna.
16 ೧೬ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
Alamen de7iya ubbabay, asho amotethi, ayfen be7idi amottiyabaynne miishen ceeqetethi alamebaappe attin Xoossaafe gidenna.
17 ೧೭ ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು. (aiōn g165)
Alameynne alamen asi amottiya ubbay aadhdhana, shin Xoossaa sheniya poliya oonikka merinaw daana. (aiōn g165)
18 ೧೮ ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
Ta nayto, wodiya wurssethay matattis. Kiristtoosa morkkey sinthafe yaanayssa hintte si7idayssada hari attoshin, ha77ika iya morkketi daroti denddidosona. Hessa gisho, wodiya wurssethay matattidayssa nuuni hessan eroos.
19 ೧೯ ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
He morkketi nu bagga gidonna gisho nu giddofe keyidosona. Entti nu bagga gidiyakko nu giddon de7ana, shin enttafe oonikka nu bagga gidonnayssi erettana mela nu giddofe keyidosona.
20 ೨೦ ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.
Shin Kiristtoosi hintte bolla Geeshsha Ayyaana gussis; qassi hintte ubbay tumaa ereeta.
21 ೨೧ ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.
Tumaa hintte eriya gishonne tuman aybi worddoy baynnayssa hintte eriya gisho, taani hinttew xaafaysippe attin tumaa hintte eronna gisho gidenna.
22 ೨೨ ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ.
Yesuusi, Xoossay dooridayssa gidenna gidi kaddiya asappe hari worddanchchoy oonee? Hessa mela asi Kiristtoosa morkke. I na7aa kaddiko Aawakka kaddees.
23 ೨೩ ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.
Na7aa kaddiya oodeskka Aaway baawa; qassi Na7aas markkattiya oodeskka Aaway de7ees.
24 ೨೪ ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.
Hessa gisho, koyro hintte si7ida qaala hintte wozanan minthidi naagite. Koyro si7idayssa hintte naagikko hinttew Na7aaranne Aawara issifetethi daana.
25 ೨೫ ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ. (aiōnios g166)
Na7ay nuus merinaa de7uwa immana gidi qaala gelis. (aiōnios g166)
26 ೨೬ ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.
Hinttena balethiya asaa gisho taani hayssa hinttew xaafas.
27 ೨೭ ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
Shin Kiristtoosi hintte bolla ba Geeshsha Ayyaana gussis. Geeshsha Ayyaanay hinttenan de7iya gisho oonikka hinttena tamaarsso koshshenna. Iya Geeshsha Ayyaanay hinttena tumaa tamaarsseesippe attin worddo gidenna. Geeshsha Ayyaanay hinttena tamaarssidayssada Kiristtoosan de7ite.
28 ೨೮ ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.
Hiza, ta nayto, I qoncciya wode nuuni yashshi baynnanne iya yuussaa gallas iya sinthan nu yeellan qosettona mela iyan de7ite.
29 ೨೯ ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.
Kiristtoosi xillo gideyssa hintte erikko xillo oothiya ubbay Xoossaa na7a gideyssa erite.

< ಯೋಹಾನನು ಬರೆದ ಮೊದಲನೆಯ ಪತ್ರಿಕೆ 2 >