< ಯೋಹಾನನು ಬರೆದ ಮೊದಲನೆಯ ಪತ್ರಿಕೆ 3 >

1 ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
Glejte, kakšno vrsto ljubezni nam je podelil Oče, da naj bi bili imenovani Božji sinovi; zato nas svet ne spoznava, ker ni spoznal njega.
2 ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
Ljubljeni, sedaj smo Božji sinovi, ni pa se še pokazalo, kaj bomo; toda vemo, da ko se bo prikazal, bomo podobni njemu, kajti videli ga bomo, kakršen je.
3 ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.
In vsak človek, ki ima to upanje vanj, se očiščuje, celó kakor je on čist.
4 ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.
Kdorkoli zagreši greh, prestopa tudi postavo, kajti greh je prekršitev postave.
5 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
In vi veste, da je bil jasno pokazan, da odvzame naše grehe; in v njem ni greha.
6 ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ;
Kdorkoli ostaja v njem, ne greši. Kdorkoli pa greši, ga ni videl niti ga ni spoznal.
7 ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
Majhni otroci, naj vas noben človek ne zavede. Kdor ravna pravično, je pravičen, celó kakor je pravičen on.
8 ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
Kdor zagreši greh, je od hudiča, kajti hudič greši od začetka. Zaradi tega namena je bil jasno pokazan Božji Sin, da bi lahko uničil hudičeva dela.
9 ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.
Kdorkoli je rojen iz Boga, ne stori greha, kajti njegovo seme ostaja v njem; in ne more grešiti, ker je rojen iz Boga.
10 ೧೦ ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
V tem so prikazani Božji otroci in hudičevi otroci: kdorkoli ne dela pravičnosti, ni od Boga niti kdor ne ljubi svojega brata.
11 ೧೧ ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.
Kajti to je sporočilo, ki ste ga slišali od začetka, da naj ljubimo drug drugega.
12 ೧೨ ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.
Ne kakor Kajn, ki je bil od tega zlobnega in je usmrtil svojega brata. In zakaj ga je usmrtil? Ker so bila njegova lastna dela hudobna, njegovega brata pa pravična.
13 ೧೩ ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
Ne čudite se, moji bratje, če vas svet sovraži.
14 ೧೪ ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
Mi vemo, da smo iz smrti prešli v življenje, ker ljubimo brate. Kdor svojega brata ne ljubi, ostaja v smrti.
15 ೧೫ ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. (aiōnios g166)
Kdorkoli sovraži svojega brata, je morilec; in veste, da noben morilec nima večnega življenja, ki [bi] ostajalo v njem. (aiōnios g166)
16 ೧೬ ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
S tem zaznavamo Božjo ljubezen, ker je svoje življenje dal za nas, in mi moramo svoja življenja dati za brate.
17 ೧೭ ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
Toda kdorkoli ima dobrine tega sveta in vidi svojega brata v potrebi in pred njim zapre svoja čustva sočutja, kako v njem prebiva Božja ljubezen?
18 ೧೮ ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.
Moji majhni otroci, ne ljubimo z besedo niti z jezikom; temveč v dejanju in v resnici.
19 ೧೯ ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.
In s tem vemo, da smo iz resnice in bomo svoja srca potrdili pred njim.
20 ೨೦ ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.
Kajti če nas naše srce obsoja, je Bog večji kakor naše srce in pozna vse stvari.
21 ೨೧ ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ.
Ljubljeni, če nas naše srce ne obsoja, potem imamo zaupanje do Boga.
22 ೨೨ ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
In karkoli prosimo, od njega prejmemo, ker se ravnamo po njegovih zapovedih in delamo te stvari, ki so všečne v njegovih očeh.
23 ೨೩ ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.
In to je njegova zapoved: »Da naj verujemo v ime njegovega Sina Jezusa Kristusa in ljubimo drug drugega, « kakor nam je dal zapoved.
24 ೨೪ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.
In kdor se ravna po njegovih zapovedih, prebiva v njem in on v njem. In zaradi tega vemo, da on ostaja v nas, po Duhu, ki nam ga je dal.

< ಯೋಹಾನನು ಬರೆದ ಮೊದಲನೆಯ ಪತ್ರಿಕೆ 3 >