< ಯೋಹಾನನು ಬರೆದ ಮೊದಲನೆಯ ಪತ್ರಿಕೆ 4 >
1 ೧ ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
Ka it te awng, thaa theampo um siat heak vun, ahihang Pathian kung pan ahile ahi ngawl thaa te sittel vun: banghangziam cile leitung ah leilot kamsang tampi hong piang zo hi.
2 ೨ ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.
Jesus Christ sia cilesa taw hongpai hi, ci in a pualak thaa peuma sia Pathian Thaa ci na he uh hi:
3 ೩ ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.
Taciang Jesus Christ sia cilesa taw hongpai hi, ci a pualak ngawl thaa peuma Pathian neisa hi ngawl hi: taciang hisia sia Christ ngalpa i thaa a hihi, tasia hongpai tu hi, ci in na zaksa uh hi a, tu in leitung ah hong om zo hi.
4 ೪ ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
Tano te awng, note sia Pathian neisa na hi uh hi, amate zong na zo zo uh hi: banghangziam cile leitung ah a ompa sang in note sung ah a ompa sia lianzaw hi.
5 ೫ ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
Amate sia leitung mi ahi uhkom; leitung thu son uh hi, taciang leitung mite in ngai uh hi.
6 ೬ ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.
Eite sia Pathian neisa i hihi: Pathian a he peuma in i thuhil hong ngai hi; Pathian neisa ahi ngawl peuma in i thuhil hong ngai ngawl hi. Hibang in thuman thaa le a maan ngawl thaa te i he hi.
7 ೭ ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
Ka it te awng, khat le khat ki it tawng; banghangziam cile itna sia Pathian neisa a hihi; taciang Pathian a it peuma sia Pathian ta a hihi, Pathian zong a he uh hi.
8 ೮ ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.
Ngual a it ngawl peuma Pathian a he bua hi; banghangziam cile Pathian sia itna a hihi.
9 ೯ ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.
Tapa tungtawn in i nuntak thei natu in, Pathian in a neisun Tapa hi leitung ah hongpaisak hu in Pathian itna sia eite tung ah hong kilang hi.
10 ೧೦ ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.
Eite in Pathian it phot hi ngawl in, Pathian in hong it a, a Tapa sia eite mawna theampo atu, thin-ukna dapsak tu in hongpaisak hi zaw hi.
11 ೧೧ ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
Ka itte awng, Pathian in hizata hong it hu in eite zong khat le khat i ki it tu a hihi.
12 ೧೨ ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.
Pathian sia kuama in mu ngei ngawl hi. Khat le khat i ki it le, Pathian sia eite sung ah hong om a, a itna eite sung ah hong kicing hi.
13 ೧೩ ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.
Pathian in a Thaa hongpia ahikom eite sia Pathian sung ah om i hihi, cile Ama sia eite sung ah om hi, ci i he hi.
14 ೧೪ ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.
Pa in Tapa sia leitung Ngum tu in hongpaisak hi, ci sia eite in mu in tetti i pang hi.
15 ೧೫ ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
Akua mapo in Jesus sia Pathian Tapa hi, ci a pualak te sung ah Pathian om a, ama zong Pathian sung ah om hi.
16 ೧೬ ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
Pathian i hong itna he in i um hi. Pathian sia itna a hihi; taciang itna sung ah a om peuma Pathian sung ah om a, Pathian zong ama sung ah om hi.
17 ೧೭ ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.
Eite itna in hong cialcingsak ahikom, thukhenna ni ciang in hangsanna i nei tu hi: banghangziam cile Ama ahi bangma in eite zong leitung ah i hi tu hi.
18 ೧೮ ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
Itna sung ah launa om ngawl hi; ahihang a cialcing itna in launa bosak hi: banghangziam cile launa in vawtsiatna nei hi. A lau peuma itna sung ah cialcing ngawl lai hi.
19 ೧೯ ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
Pathian in hong it masa ahikom eite zong Ama i it hi.
20 ೨೦ ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
Khat po in Pathian ka it hi, ci napi, a suapui a ensan le, ama sia leilot thuson a hihi: banghangziam cile a mu thei a suapui a it bua ahile a mu ngawl Pathian sia bangbang in it thei tu ziam?
21 ೨೧ ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.
Pathian a it peuma in a suapui zong it hi, ci hi thupiak sia Jesus tung pan in i sang hi.