< ಯೋಹಾನನು ಬರೆದ ಮೊದಲನೆಯ ಪತ್ರಿಕೆ 5 >
1 ೧ ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.
Oricine crede că Isus este Cristosul, este născut din Dumnezeu; și fiecare om care îl iubește pe cel ce l-a născut, îl iubește și pe cel care este născut din el.
2 ೨ ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
Prin aceasta știm că îi iubim pe copiii lui Dumnezeu, când îl iubim pe Dumnezeu și ținem poruncile lui.
3 ೩ ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.
Fiindcă aceasta este dragostea de Dumnezeu: Să ținem poruncile lui și poruncile lui nu sunt apăsătoare.
4 ೪ ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
Fiindcă orice este născut din Dumnezeu învinge lumea; și aceasta este victoria care învinge lumea: credința noastră.
5 ೫ ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
Cine este cel ce învinge lumea dacă nu cel ce crede că Isus este Fiul lui Dumnezeu?
6 ೬ ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.
Acesta este cel ce a venit prin apă și sânge, Isus Cristos; nu doar prin apă ci prin apă și sânge. Și Duhul este cel ce aduce mărturie pentru că Duhul este adevărul.
7 ೭ ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.
Pentru că sunt trei cei care aduc mărturie în cer: Tatăl, Cuvântul și Duhul Sfânt; și aceștia trei sunt una.
8 ೮ ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಈ ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ.
Și sunt trei care aduc mărturie pe pământ: Duhul și apa și sângele; și aceștia trei, în mărturie, sunt una.
9 ೯ ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.
Dacă primim mărturia oamenilor, mărturia lui Dumnezeu este mai mare, pentru că aceasta este mărturia lui Dumnezeu, pe care el a adus-o, mărturie despre Fiul său.
10 ೧೦ ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
Cel ce crede în Fiul lui Dumnezeu are mărturia în el însuși; cel ce nu îl crede pe Dumnezeu, l-a făcut mincinos, pentru că nu crede mărturia pe care Dumnezeu a adus-o despre Fiul său.
11 ೧೧ ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. (aiōnios )
Și aceasta este mărturia, că Dumnezeu ne-a dat viață eternă și această viață este în Fiul său. (aiōnios )
12 ೧೨ ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
Cel ce are pe Fiul are viața, cel ce nu are pe Fiul lui Dumnezeu nu are viața.
13 ೧೩ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ. (aiōnios )
V-am scris acestea, vouă, care credeți în numele Fiului lui Dumnezeu, ca să știți că aveți viață eternă și să credeți în numele Fiului lui Dumnezeu. (aiōnios )
14 ೧೪ ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
Și aceasta este cutezanța pe care o avem în el, că, dacă cerem ceva conform voii lui, ne ascultă;
15 ೧೫ ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
Și dacă știm că ne ascultă, orice îi cerem, știm că avem lucrurile cerute pe care le-am dorit de la el.
16 ೧೬ ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
Dacă vede cineva pe fratele său păcătuind un păcat, care nu duce la moarte, va cere, și el îi va da viață pentru cei ce nu păcătuiesc spre moarte. Este un păcat care duce la moarte, nu spun să se roage pentru acel păcat.
17 ೧೭ ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
Orice nedreptate este păcat; și este păcat care nu duce la moarte.
18 ೧೮ ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
Știm că oricine este născut din Dumnezeu nu păcătuiește; dar cel ce este născut din Dumnezeu se păzește [pe sine însuși] și cel rău nu îl atinge.
19 ೧೯ ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.
Știm că suntem din Dumnezeu și că toată lumea zace în răutate.
20 ೨೦ ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ. (aiōnios )
Și știm că Fiul lui Dumnezeu a venit și ne-a dat înțelegere ca să cunoaștem pe cel ce este adevărat; și suntem în cel ce este adevărat, în Fiul său Isus Cristos. Acesta este Dumnezeul cel adevărat și viața eternă. (aiōnios )
21 ೨೧ ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.
Copilașilor, păziți-vă de idoli. Amin.