< ಅರಸುಗಳು - ಪ್ರಥಮ ಭಾಗ 10 >

1 ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.
וּמַֽלְכַּת־שְׁבָ֗א שֹׁמַ֛עַת אֶת־שֵׁ֥מַע שְׁלֹמֹ֖ה לְשֵׁ֣ם יְהוָ֑ה וַתָּבֹ֥א לְנַסֹּת֖וֹ בְּחִידֽוֹת׃
2 ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
וַתָּבֹ֣א יְרוּשָׁלְַ֗מָה בְּחַיִל֮ כָּבֵ֣ד מְאֹד֒ גְּ֠מַלִּים נֹשְׂאִ֨ים בְּשָׂמִ֧ים וְזָהָ֛ב רַב־מְאֹ֖ד וְאֶ֣בֶן יְקָרָ֑ה וַתָּבֹא֙ אֶל־שְׁלֹמֹ֔ה וַתְּדַבֵּ֣ר אֵלָ֔יו אֵ֛ת כָּל־אֲשֶׁ֥ר הָיָ֖ה עִם־לְבָבָֽהּ׃
3 ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.
וַיַּגֶּד־לָ֥הּ שְׁלֹמֹ֖ה אֶת־כָּל־דְּבָרֶ֑יהָ לֹֽא־הָיָ֤ה דָּבָר֙ נֶעְלָ֣ם מִן־הַמֶּ֔לֶךְ אֲשֶׁ֧ר לֹ֦א הִגִּ֖יד לָֽהּ׃
4 ಶೆಬೆದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ,
וַתֵּ֙רֶא֙ מַֽלְכַּת־שְׁבָ֔א אֵ֖ת כָּל־חָכְמַ֣ת שְׁלֹמֹ֑ה וְהַבַּ֖יִת אֲשֶׁ֥ר בָּנָֽה׃
5 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.
וּמַאֲכַ֣ל שֻׁלְחָנ֡וֹ וּמוֹשַׁ֣ב עֲבָדָיו֩ וּמַעֲמַ֨ד משרתו וּמַלְבֻּֽשֵׁיהֶם֙ וּמַשְׁקָ֔יו וְעֹ֣לָת֔וֹ אֲשֶׁ֥ר יַעֲלֶ֖ה בֵּ֣ית יְהוָ֑ה וְלֹא־הָ֥יָה בָ֛הּ ע֖וֹד רֽוּחַ׃
6 ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು, ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
וַתֹּ֙אמֶר֙ אֶל־הַמֶּ֔לֶךְ אֱמֶת֙ הָיָ֣ה הַדָּבָ֔ר אֲשֶׁ֥ר שָׁמַ֖עְתִּי בְּאַרְצִ֑י עַל־דְּבָרֶ֖יךָ וְעַל־חָכְמָתֶֽךָ׃
7 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.
וְלֹֽא־הֶאֱמַ֣נְתִּי לַדְּבָרִ֗ים עַ֤ד אֲשֶׁר־בָּ֙אתִי֙ וַתִּרְאֶ֣ינָה עֵינַ֔י וְהִנֵּ֥ה לֹֽא־הֻגַּד־לִ֖י הַחֵ֑צִי הוֹסַ֤פְתָּ חָכְמָה֙ וָט֔וֹב אֶל־הַשְּׁמוּעָ֖ה אֲשֶׁ֥ר שָׁמָֽעְתִּי׃
8 ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.
אַשְׁרֵ֣י אֲנָשֶׁ֔יךָ אַשְׁרֵ֖י עֲבָדֶ֣יךָ אֵ֑לֶּה הָֽעֹמְדִ֤ים לְפָנֶ֙יךָ֙ תָּמִ֔יד הַשֹּׁמְעִ֖ים אֶת־חָכְמָתֶֽךָ׃
9 ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.
יְהִ֨י יְהוָ֤ה אֱלֹהֶ֙יךָ֙ בָּר֔וּךְ אֲשֶׁר֙ חָפֵ֣ץ בְּךָ֔ לְתִתְּךָ֖ עַל־כִּסֵּ֣א יִשְׂרָאֵ֑ל בְּאַהֲבַ֨ת יְהוָ֤ה אֶת־יִשְׂרָאֵל֙ לְעֹלָ֔ם וַיְשִֽׂימְךָ֣ לְמֶ֔לֶךְ לַעֲשׂ֥וֹת מִשְׁפָּ֖ט וּצְדָקָֽה׃
10 ೧೦ ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.
וַתִּתֵּ֨ן לַמֶּ֜לֶךְ מֵאָ֥ה וְעֶשְׂרִ֣ים ׀ כִּכַּ֣ר זָהָ֗ב וּבְשָׂמִ֛ים הַרְבֵּ֥ה מְאֹ֖ד וְאֶ֣בֶן יְקָרָ֑ה לֹא־בָא֩ כַבֹּ֨שֶׂם הַה֥וּא עוֹד֙ לָרֹ֔ב אֲשֶׁר־נָתְנָ֥ה מַֽלְכַּת־שְׁבָ֖א לַמֶּ֥לֶךְ שְׁלֹמֹֽה׃
11 ೧೧ ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.
וְגַם֙ אֳנִ֣י חִירָ֔ם אֲשֶׁר־נָשָׂ֥א זָהָ֖ב מֵאוֹפִ֑יר הֵבִ֨יא מֵאֹפִ֜יר עֲצֵ֧י אַלְמֻגִּ֛ים הַרְבֵּ֥ה מְאֹ֖ד וְאֶ֥בֶן יְקָרָֽה׃
12 ೧೨ ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.
וַיַּ֣עַשׂ הַ֠מֶּלֶךְ אֶת־עֲצֵ֨י הָאַלְמֻגִּ֜ים מִסְעָ֤ד לְבֵית־יְהוָה֙ וּלְבֵ֣ית הַמֶּ֔לֶךְ וְכִנֹּר֥וֹת וּנְבָלִ֖ים לַשָּׁרִ֑ים לֹ֣א בָֽא־כֵ֞ן עֲצֵ֤י אַלְמֻגִּים֙ וְלֹ֣א נִרְאָ֔ה עַ֖ד הַיּ֥וֹם הַזֶּֽה׃
13 ೧೩ ಅರಸನಾದ ಸೊಲೊಮೋನನು ಶೆಬೆದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳೆಲ್ಲವನ್ನು ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.
וְהַמֶּ֨לֶךְ שְׁלֹמֹ֜ה נָתַ֣ן לְמַֽלְכַּת־שְׁבָ֗א אֶת־כָּל־חֶפְצָהּ֙ אֲשֶׁ֣ר שָׁאָ֔לָה מִלְּבַד֙ אֲשֶׁ֣ר נָֽתַן־לָ֔הּ כְּיַ֖ד הַמֶּ֣לֶךְ שְׁלֹמֹ֑ה וַתֵּ֛פֶן וַתֵּ֥לֶךְ לְאַרְצָ֖הּ הִ֥יא וַעֲבָדֶֽיהָ׃ ס
14 ೧೪ ಸೊಲೊಮೋನನಿಗೆ ಒಂದು ವರ್ಷದಲ್ಲಿ ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.
וַֽיְהִי֙ מִשְׁקַ֣ל הַזָּהָ֔ב אֲשֶׁר־בָּ֥א לִשְׁלֹמֹ֖ה בְּשָׁנָ֣ה אֶחָ֑ת שֵׁ֥שׁ מֵא֛וֹת שִׁשִּׁ֥ים וָשֵׁ֖שׁ כִּכַּ֥ר זָהָֽב׃
15 ೧೫ ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.
לְבַד֙ מֵאַנְשֵׁ֣י הַתָּרִ֔ים וּמִסְחַ֖ר הָרֹכְלִ֑ים וְכָל־מַלְכֵ֥י הָעֶ֖רֶב וּפַח֥וֹת הָאָֽרֶץ׃
16 ೧೬ ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರ ಹಿಡಿಯಿತು.
וַיַּ֨עַשׂ הַמֶּ֧לֶךְ שְׁלֹמֹ֛ה מָאתַ֥יִם צִנָּ֖ה זָהָ֣ב שָׁח֑וּט שֵׁשׁ־מֵא֣וֹת זָהָ֔ב יַעֲלֶ֖ה עַל־הַצִּנָּ֥ה הָאֶחָֽת׃
17 ೧೭ ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
וּשְׁלֹשׁ־מֵא֤וֹת מָֽגִנִּים֙ זָהָ֣ב שָׁח֔וּט שְׁלֹ֤שֶׁת מָנִים֙ זָהָ֔ב יַעֲלֶ֖ה עַל־הַמָּגֵ֣ן הָאֶחָ֑ת וַיִּתְּנֵ֣ם הַמֶּ֔לֶךְ בֵּ֖ית יַ֥עַר הַלְּבָנֽוֹן׃ פ
18 ೧೮ ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು
וַיַּ֧עַשׂ הַמֶּ֛לֶךְ כִּסֵּא־שֵׁ֖ן גָּד֑וֹל וַיְצַפֵּ֖הוּ זָהָ֥ב מוּפָֽז׃
19 ೧೯ ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು.
שֵׁ֧שׁ מַעֲל֣וֹת לַכִּסֵּ֗ה וְרֹאשׁ־עָגֹ֤ל לַכִּסֵּה֙ מֵאַֽחֲרָ֔יו וְיָדֹ֛ת מִזֶּ֥ה וּמִזֶּ֖ה אֶל־מְק֣וֹם הַשָּׁ֑בֶת וּשְׁנַ֣יִם אֲרָי֔וֹת עֹמְדִ֖ים אֵ֥צֶל הַיָּדֽוֹת׃
20 ೨೦ ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
וּשְׁנֵ֧ים עָשָׂ֣ר אֲרָיִ֗ים עֹמְדִ֥ים שָׁ֛ם עַל־שֵׁ֥שׁ הַֽמַּעֲל֖וֹת מִזֶּ֣ה וּמִזֶּ֑ה לֹֽא־נַעֲשָׂ֥ה כֵ֖ן לְכָל־מַמְלָכֽוֹת׃
21 ೨೧ ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.
וְ֠כֹל כְּלֵ֞י מַשְׁקֵ֨ה הַמֶּ֤לֶךְ שְׁלֹמֹה֙ זָהָ֔ב וְכֹ֗ל כְּלֵ֛י בֵּֽית־יַ֥עַר הַלְּבָנ֖וֹן זָהָ֣ב סָג֑וּר אֵ֣ין כֶּ֗סֶף לֹ֥א נֶחְשָׁ֛ב בִּימֵ֥י שְׁלֹמֹ֖ה לִמְאֽוּמָה׃
22 ೨೨ ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.
כִּי֩ אֳנִ֨י תַרְשִׁ֤ישׁ לַמֶּ֙לֶךְ֙ בַּיָּ֔ם עִ֖ם אֳנִ֣י חִירָ֑ם אַחַת֩ לְשָׁלֹ֨שׁ שָׁנִ֜ים תָּב֣וֹא ׀ אֳנִ֣י תַרְשִׁ֗ישׁ נֹֽשְׂאֵת֙ זָהָ֣ב וָכֶ֔סֶף שֶׁנְהַבִּ֥ים וְקֹפִ֖ים וְתֻכִּיִּֽים׃
23 ೨೩ ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
וַיִּגְדַּל֙ הַמֶּ֣לֶךְ שְׁלֹמֹ֔ה מִכֹּ֖ל מַלְכֵ֣י הָאָ֑רֶץ לְעֹ֖שֶׁר וּלְחָכְמָֽה׃
24 ೨೪ ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.
וְכָ֨ל־הָאָ֔רֶץ מְבַקְשִׁ֖ים אֶת־פְּנֵ֣י שְׁלֹמֹ֑ה לִשְׁמֹ֙עַ֙ אֶת־חָכְמָת֔וֹ אֲשֶׁר־נָתַ֥ן אֱלֹהִ֖ים בְּלִבּֽוֹ׃
25 ೨೫ ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
וְהֵ֣מָּה מְבִאִ֣ים אִ֣ישׁ מִנְחָת֡וֹ כְּלֵ֣י כֶסֶף֩ וּכְלֵ֨י זָהָ֤ב וּשְׂלָמוֹת֙ וְנֵ֣שֶׁק וּבְשָׂמִ֔ים סוּסִ֖ים וּפְרָדִ֑ים דְּבַר־שָׁנָ֖ה בְּשָׁנָֽה׃ ס
26 ೨೬ ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.
וַיֶּאֱסֹ֣ף שְׁלֹמֹה֮ רֶ֣כֶב וּפָרָשִׁים֒ וַיְהִי־ל֗וֹ אֶ֤לֶף וְאַרְבַּע־מֵאוֹת֙ רֶ֔כֶב וּשְׁנֵים־עָשָׂ֥ר אֶ֖לֶף פָּֽרָשִׁ֑ים וַיַּנְחֵם֙ בְּעָרֵ֣י הָרֶ֔כֶב וְעִם־הַמֶּ֖לֶךְ בִּירוּשָׁלִָֽם׃
27 ೨೭ ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.
וַיִּתֵּ֨ן הַמֶּ֧לֶךְ אֶת־הַכֶּ֛סֶף בִּירוּשָׁלִַ֖ם כָּאֲבָנִ֑ים וְאֵ֣ת הָאֲרָזִ֗ים נָתַ֛ן כַּשִּׁקְמִ֥ים אֲשֶׁר־בַּשְּׁפֵלָ֖ה לָרֹֽב׃
28 ೨೮ ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.
וּמוֹצָ֧א הַסּוּסִ֛ים אֲשֶׁ֥ר לִשְׁלֹמֹ֖ה מִמִּצְרָ֑יִם וּמִקְוֵ֕ה סֹחֲרֵ֣י הַמֶּ֔לֶךְ יִקְח֥וּ מִקְוֵ֖ה בִּמְחִֽיר׃
29 ೨೯ ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.
וַֽ֠תַּעֲלֶה וַתֵּצֵ֨א מֶרְכָּבָ֤ה מִמִּצְרַ֙יִם֙ בְּשֵׁ֣שׁ מֵא֣וֹת כֶּ֔סֶף וְס֖וּס בַּחֲמִשִּׁ֣ים וּמֵאָ֑ה וְ֠כֵן לְכָל־מַלְכֵ֧י הַחִתִּ֛ים וּלְמַלְכֵ֥י אֲרָ֖ם בְּיָדָ֥ם יֹצִֽאוּ׃ פ

< ಅರಸುಗಳು - ಪ್ರಥಮ ಭಾಗ 10 >