< ಅರಸುಗಳು - ಪ್ರಥಮ ಭಾಗ 13 >
1 ೧ ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು
১ধূপ জ্বালাবার জন্য যারবিয়াম যখন বেদির কাছে দাঁড়িয়ে ছিলেন তখন সদাপ্রভুর কথামত ঈশ্বরের একজন লোক যিহূদা থেকে বৈথেলে উপস্থিত হলেন।
2 ೨ ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.
২তিনি সদাপ্রভুর কথামত বেদির বিরুদ্ধে ঘোষণা করলেন, “ওহে বেদী, ওহে বেদী, সদাপ্রভু এই কথা বলছেন, ‘দায়ূদের বংশে যোশিয় নামে একটি ছেলের জন্ম হবে। উঁচু স্থানগুলোর যে যাজকেরা এখন তোমার উপর ধূপ জ্বালিয়েছে সেই যাজকদের সে তোমার উপরেই উৎসর্গ করবে এবং মানুষের হাড়ও পোড়াবে।’”
3 ೩ ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.
৩ঐ একই দিনের ঈশ্বরের লোকটি একটা চিহ্নের কথা বললেন। তিনি বললেন, “সদাপ্রভু এই চিহ্নের কথা ঘোষণা করেছেন যে, এই বেদীটা ফেটে যাবে এবং তার উপরকার ছাই সব পড়ে যাবে।”
4 ೪ ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.
৪বৈথেলে বেদির বিরুদ্ধে ঈশ্বরের লোকটী কথা শুনে রাজা যারবিয়াম বেদির উপর থেকে হাত বাড়িয়ে বললেন, “ওকে ধর।” কিন্তু যে হাতটি তিনি লোকটী দিকে বাড়িয়ে দিয়েছিলেন, সেটা শুকিয়ে গেল। তিনি আর সেটা কাছে টেনে নিতে পারলেন না।
5 ೫ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.
৫তাছাড়া বেদীটা ফেটে গেল এবং তার ছাই ছড়িয়ে পড়ল, যেমন সদাপ্রভু ঈশ্বরের লোকটী মাধ্যমে চিহ্নের বিষয়ে বর্ণনা করেছিলেন।
6 ೬ ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.
৬তখন রাজা ঈশ্বরের লোকটিকে বললেন, “আপনি আপনার ঈশ্বর সদাপ্রভুকে অনুরোধ করুন এবং আমার জন্য প্রার্থনা করুন যাতে আমার হাত আবার ভাল হয়ে যায়।” তাতে ঈশ্বরের লোকটি সদাপ্রভুকে অনুরোধ করলেন আর রাজার হাতটা আবার ভাল হয়ে আগের মত হয়ে গেল।
7 ೭ ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.
৭রাজা ঈশ্বরের লোকটিকে বললেন, “আপনি আমার বাড়িতে এসে আরাম করুন আর আমি আপনাকে একটা উপহার দেব।”
8 ೮ ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
৮কিন্তু ঈশ্বরের লোকটি উত্তরে রাজাকে বললেন, “আপনার সম্পত্তির অর্ধেকটা দিলেও আমি আপনার সঙ্গে যাব না কিম্বা কোনো খাবার বা জলও এখানে খাব না।
9 ೯ ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.
৯এর কারণ হল, সদাপ্রভুর কথামত আমি এই আদেশ পেয়েছি যে, তুমি কোনো খাবার খেয় না বা জল পান কর না এবং যে পথ দিয়ে যাবে, সেই পথ দিয়ে এস না।”
10 ೧೦ ಆ ದೇವರ ಮನುಷ್ಯನು ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟು ಹೋದನು.
১০কাজেই তিনি যে পথে বৈথেলে এসেছিলেন সেই পথে ফিরে না গিয়ে অন্য পথ ধরলেন।
11 ೧೧ ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು.
১১বৈথেলে একজন বয়ষ্ক ভাববাদী বাস করতেন। ঈশ্বরের লোকটি সেই দিন সেখানে যা করেছিলেন তাঁর ছেলেরা গিয়ে তাঁকে তা সবই জানাল। রাজাকে তিনি যা বলেছিলেন তাও তারা তাদের বাবাকে বলল।
12 ೧೨ ತಂದೆಯು ಅವರನ್ನು, “ಅವನು ಯಾವ ದಾರಿಯಿಂದ ಹೋದನು?” ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು.
১২তাদের বাবা তাদের জিজ্ঞাসা করলেন, “তিনি কোন পথে গেছেন?” যিহূদার সেই ঈশ্বরের লোকটি যে পথ ধরে চলে গিয়েছিলেন তাঁর ছেলেরা তা তার পথ তার পিতা কে দেখিয়েছিল।
13 ೧೩ ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ” ಎಂದು ಆಜ್ಞಾಪಿಸಿಲು ಅವರು ತಡಿಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಹೊರಟನು.
১৩তখন তিনি তাঁর ছেলেদের বললেন, “আমার জন্য গাধার উপরে গদি চাপাও।” তারা তা করলে পর তিনি তাতে চড়লেন।
14 ೧೪ ದೇವರ ಮನುಷ್ಯನ ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, “ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.
১৪তারপর তিনি ঈশ্বরের লোকটী খোঁজে গেলেন। তিনি তাঁকে একটা এলোন গাছের তলায় বসে থাকতে দেখে জিজ্ঞাসা করলেন, “আপনিই কি ঈশ্বরের সেই লোক যিনি যিহূদা দেশ থেকে এসেছেন?” উত্তরে তিনি বললেন, “হ্যাঁ, আমিই সেই লোক।”
15 ೧೫ ಆಗ ಆ ಮುದುಕನು ಅವನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡು” ಎಂದು ಹೇಳಿದನು.
১৫তখন ভাববাদী তাঁকে বললেন, “আমার সঙ্গে বাড়ি চলুন, খাওয়া দাওয়া করুন।”
16 ೧೬ ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
১৬ঈশ্বরের লোকটি বললেন, “আমি আপনার সঙ্গে ফিরে যেতে পারি না কিম্বা আপনার সঙ্গে এই জায়গায় খাবার বা জল খেতেও পারি না।
17 ೧೭ ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಉತ್ತರಕೊಟ್ಟನು.
১৭কারণ ঈশ্বর আমাকে আদেশ দিয়ে বলেছেন যে, তুমি যেন সেখানে খাবার খেও না বা জল পান করো না কিম্বা যে পথে এসেছ সেই পথে ফিরে যেও না।”
18 ೧೮ ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.
১৮উত্তরে সেই ভাববাদী বললেন, “আমি আপনার মতই একজন ভাববাদী। সদাপ্রভুর কথামত একজন স্বর্গদূত আমাকে বলেছেন যেন আমি আপনাকে আমার বাড়িতে ফিরিয়ে নিয়ে যাই যাতে আপনি খাবার ও জল খেতে পারেন।” কিন্তু তিনি তাঁকে মিথ্যা কথা বললেন।
19 ೧೯ ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.
১৯ঈশ্বরের লোকটি তখন তাঁর সঙ্গে ফিরে গেলেন এবং তাঁর বাড়িতে খাওয়া দাওয়া করলেন।
20 ೨೦ ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.
২০তাঁরা তখনও টেবিলের কাছে বসে আছেন, এমন দিন যিনি ঈশ্বরের লোকটিকে ফিরিয়ে এনেছিলেন সেই ভাববাদীর কাছে সদাপ্রভুর বাক্য প্রকাশিত হল।
21 ೨೧ ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ,
২১যিহূদা থেকে আসা ঈশ্বরের লোকটিকে সেই ভাববাদী চিৎকার করে বললেন, “সদাপ্রভু এই কথা বলছেন যে, আপনি সদাপ্রভুর কথা অমান্য করেছেন এবং আপনাকে দেওয়া আপনার ঈশ্বর সদাপ্রভুর আদেশ আপনি পালন করেন নি।
22 ೨೨ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.
২২যে জায়গায় তিনি আপনাকে খাওয়া দাওয়া করতে নিষেধ করেছিলেন আপনি সেখানে ফিরে গিয়ে খাবার ও জল খেয়েছেন। কাজেই আপনার পূর্বপুরুষদের কবরে আপনার দেহ রাখা হবে না।”
23 ೨೩ ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.
২৩ঈশ্বরের লোকটি খাওয়া দাওয়া শেষ করলে পর তাঁর জন্য সেই ভাববাদী তাঁর একটা গাধার উপর গদি চাপালেন।
24 ೨೪ ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.
২৪ঈশ্বরের লোকটি রওনা হলে পর পথে একটা সিংহ তাঁকে রাস্তার উপরে পেয়ে মেরে ফেলল। তাঁর দেহটা রাস্তার উপরে পড়ে থাকল আর সেই দেহের পাশে দাঁড়িয়ে থাকল সেই গাধা আর সিংহ।
25 ೨೫ ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.
২৫কিছু লোক সেই পথ দিয়ে যাবার দিন দেখল একটি মৃতদেহ পড়ে আছে এবং দেখল তার পাশে একটা সিংহ দাঁড়িয়ে রয়েছে। তারা গিয়ে সেই বয়ষ্ক ভাববাদীর গ্রামে খবর দিল।
26 ೨೬ ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.
২৬সেই কথা শুনে যে ভাববাদী তাঁকে তাঁর পথ থেকে ফিরিয়ে এনেছিলেন তিনি বললেন, “তিনি ঈশ্বরের সেই লোক যিনি সদাপ্রভুর আদেশ অমান্য করেছিলেন। সদাপ্রভু তাঁকে যে কথা বলেছিলেন সেই অনুসারেই তিনি তাঁকে সিংহের হাতে তুলে দিয়েছেন এবং সিংহ তাঁকে ছিঁড়ে মেরে ফেলেছে।”
27 ೨೭ ಅವನು, “ಕತ್ತೆಗೆ ತಡಿಹಾಕಿರಿ” ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡಿಹಾಕಿದರು.
২৭তারপর সেই ভাববাদী তাঁর ছেলেদের বললেন, “আমার জন্য গাধার উপর গদি চাপাও।” ছেলেরা তাই করল।
28 ೨೮ ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.
২৮তারপর তিনি গিয়ে দেখলেন রাস্তার উপরে মৃতদেহটা পড়ে রয়েছে আর তার পাশে দাঁড়িয়ে রয়েছে গাধা আর সিংহটা। সিংহটা সেই মৃতদেহ খায়নি আর গাধাটাকেও আঘাত করে নি।
29 ೨೯ ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು,
২৯ঈশ্বরের লোকটিকে কবর দিতে ও তাঁর জন্য শোক প্রকাশ করতে সেই ভাববাদী তাঁর দেহটা তুলে নিয়ে গাধার উপর চাপিয়ে নিজের গ্রামে ফিরে গেলেন।
30 ೩೦ ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು.
৩০তিনি নিজের জন্য তৈরী করা কবরেই তাঁকে কবর দিলেন। তিনি ও তাঁর ছেলেরা এই বলে তাঁর জন্য শোক করতে লাগলেন, “হায়, ভাই আমার!”
31 ೩೧ ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ.
৩১তাঁকে কবর দেবার পর সেই ভাববাদী তাঁর ছেলেদের বললেন, “ঈশ্বরের লোকটিকে যেখানে কবর দেওয়া হয়েছে আমি মারা গেলে পর আমাকে সেই কবরেই কবর দিয়ো, আমার হাড় তাঁর হাড়ের পাশেই রেখো;
32 ೩೨ ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಎಂದನು.
৩২কারণ বৈথেলের বেদী ও শমরিয়ার সব গ্রামের উঁচু স্থানগুলোর মন্দিরের বিরুদ্ধে সদাপ্রভুর কথামত তিনি যে বিষয় ঘোষণা করেছেন তা নিশ্চয়ই সফল হবে।”
33 ೩೩ ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.
৩৩এর পরেও যারবিয়াম তাঁর কুপথ থেকে ফিরলেন না বরং উঁচু স্থানগুলোর জন্য সব লোকদের মধ্য থেকে যাজক নিযুক্ত করলেন। যে কেউ যাজক হতে চাইত তাকেই তিনি উঁচু স্থানের যাজক হিসাবে নিযুক্ত করতেন।
34 ೩೪ ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.
৩৪এই সব কাজ যারবিয়ামের বংশের পক্ষে পাপ হয়ে দাঁড়াল যেন তারা ধ্বংস হয় ও পৃথিবী থেকে মুছে যায়।