< ಅರಸುಗಳು - ಪ್ರಥಮ ಭಾಗ 15 >
1 ೧ ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.
नेबाथ के पुत्र यरोबोअम के शासनकाल के अठारहवें साल में अबीयाम ने यहूदिया पर शासन करना शुरू किया.
2 ೨ ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
उसने येरूशलेम में तीन साल शासन किया. उसकी माता का नाम माकाह था. वह अबीशालोम की पुत्री थी.
3 ೩ ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.
उसने अपने पिता के जैसा ही चालचलन रखा, और वे ही वे सारे पाप किए जो अपने पिता ने किए. याहवेह, अपने परमेश्वर के प्रति उसका हृदय पूरी तरह समर्पित न था, जैसा उसके पूर्वज दावीद का था.
4 ೪ ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.
यह सब होने पर भी, दावीद के कारण याहवेह, उसके परमेश्वर ने उसके लिए एक पुत्र पैदा कर उसके हित में येरूशलेम में एक दीप जला रखा, और येरूशलेम को स्थिरता दी.
5 ೫ ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.
क्योंकि दावीद ने वही किया था, जो याहवेह की दृष्टि में सही था. दावीद आजीवन याहवेह द्वारा दिए गए आदेशों से नहीं हटे—सिर्फ हित्ती उरियाह से संबंधित घटना के सिवाय.
6 ೬ ರೆಹಬ್ಬಾಮನಿಗೂ ಮತ್ತು ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
पूरे जीवन भर रिहोबोयाम और यरोबोअम के बीच युद्ध होता रहा.
7 ೭ ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
अबीयाम द्वारा किए गए बाकी काम और वह सब, जो उसने किया, यहूदिया के राजाओं की इतिहास नामक पुस्तक में लिखी हैं. अबीयाम और यरोबोअम में युद्ध होता रहा.
8 ೮ ಅಬೀಯಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು.
अबीयाम अपने पूर्वजों के साथ हमेशा के लिए सो गया, और उसे उसके पूर्वजों के साथ दावीद के नगर की कब्र में रखा गया. उसके स्थान पर आसा राजा बना.
9 ೯ ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ಅರಸನಾದನು.
राजा यरोबोअम के शासनकाल के बीसवें साल में आसा ने यहूदिया पर शासन करना शुरू किया.
10 ೧೦ ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
उसने येरूशलेम में रहकर एकतालीस साल तक शासन किया. उसकी दादी का नाम था माकाह जो अबीशालोम की पुत्री थी.
11 ೧೧ ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
आसा ने वह किया, जो याहवेह की दृष्टि में सही था—जैसा उसके मूल पुरुष दावीद ने किया था.
12 ೧೨ ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು.
उसने मंदिरों में से पुरुष वेश्याओं को देश से निकाल दिया और अपने पिता द्वारा गढ़ी गई सारी मूर्तियों को हटवा दिया.
13 ೧೩ ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.
उसने अपनी दादी माकाह को राजमाता पद से हटा दिया, क्योंकि उसने अशेरा की घृणित मूर्ति बनाकर रखी थी. आसा ने इस मूर्ति को काटकर उसे किद्रोन नदी तट पर राख बना डाला.
14 ೧೪ ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.
मगर पूजा-गिरियों को हटाया नहीं गया. फिर भी आसा का मन जीवन भर याहवेह के लिए पूरी तरह सच्चा बना रहा.
15 ೧೫ ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನು ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು.
उसने याहवेह के भवन में वे सारी पवित्र वस्तुएं लाकर रख दीं, सोना, चांदी और बर्तन, जो उसके पिता और खुद उसके पास थे.
16 ೧೬ ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು
आसा और इस्राएल के राजा बाशा के बीच उनके पूरे जीवन भर युद्ध चलता रहा.
17 ೧೭ ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.
इस्राएल के राजा बाशा ने यहूदिया पर हमला कर दिया, और उसने रामाह नगर के चारों ओर किला बनवाया, ताकि इस्राएल का कोई भी व्यक्ति इस्राएल की सीमा से बाहर न जाए और यहूदिया के राजा आसा इस तरफ न पहुंच सके.
18 ೧೮ ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.
इसके बाद आसा ने याहवेह के भवन में बाकी रह गए सोने और चांदी और राजा के भंडार में बचे हुए सोने और चांदी को लेकर अपने सेवकों को दिया, और उन्हें दमेशेक निवासी हेज़ीऑन के पोते, ताब्रिम्मन के पुत्र बेन-हदद के लिए यह कहते हुए भेज दिया,
19 ೧೯ ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.
“आपके और मेरे बीच एक वाचा बांधी जाए—ठीक जैसी मेरे और आपके पिताओं के बीच थी. मैं उपहार के रूप में आपके लिए सोना और चांदी भेज रहा हूं. आप इस्राएल के राजा बाशा से अपनी वाचा तोड़ दीजिए, कि वह यहां से अपनी सेनाएं हटा ले.”
20 ೨೦ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.
बेन-हदद राजा आसा के प्रस्ताव से राज़ी हो गया. उसने इस्राएल राज्य के नगरों के विरुद्ध अपने सैन्य अधिकारी भेज दिए. उन्होंने इयोन, दान, बेथ-माकाह के आबेल और पूरे किन्नेरेथ को नफताली प्रदेश सहित अपने अधीन कर लिया.
21 ೨೧ ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು.
जब बाशा को यह समाचार प्राप्त हुआ, उसने रामाह का गढ़ बनाना रोक कर सारा काम समाप्त कर दिया और वह खुद तिरज़ाह में रहता रहा.
22 ೨೨ ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
इसके बाद राजा आसा ने यहूदिया में सभी के लिए घोषणा की—किसी को छूट नहीं थी—सबने मिलकर राजा बाशा द्वारा लगाई निर्माण-सामग्री, पत्थर और लकड़ी लेकर आसा द्वारा बनाए जा रहे बिन्यामिन और मिज़पाह के गेबा में लगा दी.
23 ೨೩ ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.
आसा द्वारा किए गए बाकी काम, उनका शौर्य और उनकी सारी उपलब्धियां और उसके द्वारा बसाए गए नगरों का ब्यौरा यहूदिया के राजाओं की इतिहास नामक पुस्तक में है. उसके बुढ़ापे में उसके पैर रोगग्रस्त हो गए थे.
24 ೨೪ ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು.
आसा अपने हमेशा के लिए सो गया और उसको उसके पूर्वजों के साथ दावीद के नगर की कब्र में रख दिया गया. उसके स्थान पर उसका पुत्र यहोशाफ़ात राजा बना.
25 ೨೫ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
आसा के शासनकाल के दूसरे साल में यरोबोअम का पुत्र नादाब इस्राएल पर शासन करने लगा. इसने इस्राएल पर दो साल तक शासन किया.
26 ೨೬ ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
उसने वही किया, जो याहवेह की दृष्टि में गलत था. उसका स्वभाव उसके पिता के समान ही था. नादाब ने भी इस्राएल से वही पाप करवाए, जो उसके पिता ने उनसे करवाए थे.
27 ೨೭ ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.
इस्साखार वंश के अहीयाह के पुत्र बाशा ने नादाब के विरुद्ध साजिश रची, और बाशा ने उसे फिलिस्तीनियों की सीमा में, गिब्बथोन नामक स्थान पर, मार गिराया, क्योंकि नादाब ने सारी इस्राएली सेना लेकर गिब्बथोन को घेर रखा था.
28 ೨೮ ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
यह यहूदिया के राजा आसा के शासन का तीसरा साल था, जब बाशा ने नादाब की हत्या की, और उसकी जगह पर राजा हो गया.
29 ೨೯ ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
जैसे ही उसने राजपद संभाला, उसने यरोबोअम के सारे वंश का नाश कर दिया, ठीक वैसे ही जैसे याहवेह ने शीलोनवासी अपने सेवक अहीयाह के द्वारा भविष्यवाणी की थी. उसने यरोबोअम के परिवार में एक व्यक्ति भी जीवित न छोड़ा.
30 ೩೦ ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.
उन पापों के कारण, जो यरोबोअम ने किए और उनके लिए, जो उसने इस्राएल को करने के लिए उकसाया, उसने याहवेह, इस्राएल के परमेश्वर के क्रोध को भड़काया.
31 ೩೧ ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
नादाब द्वारा किए गए बाकी काम और जो उसके काल घटी घटनाएं इस्राएल के राजाओं की इतिहास नामक पुस्तक में लिखा है.
32 ೩೨ ಆಸನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
आसा और इस्राएल के राजा बाशा के बीच उनके पूरे जीवन भर युद्ध चलता रहा.
33 ೩೩ ಯೆಹೂದದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲರ ಅರಸನಾಗಿ ತಿರ್ಚದಲ್ಲಿದ್ದು, ಇಪ್ಪತ್ತನಾಲ್ಕು ವರ್ಷ ಆಳ್ವಿಕೆ ಮಾಡಿದನು.
यहूदिया के राजा आसा के शासन के तीसरे साल में, तिरज़ाह नगर में अहीयाह के पुत्र बाशा ने सारे इस्राएल पर शासन करना शुरू किया. उसने चौबीस साल शासन किया.
34 ೩೪ ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
उसने वह सब किया, जो याहवेह की दृष्टि में गलत था. उसका आचरण और उसके पाप यरोबोअम के समान थे, जो उसने इस्राएल को भी करने के लिए उकसाया.