< ಅರಸುಗಳು - ಪ್ರಥಮ ಭಾಗ 16 >

1 ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,
Alò, pawòl SENYÈ a te vini aJéhu, fis a Hanani a kont Baescha, e te di:
2 “ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ.
“Mwen te egzalte ou, Baescha, soti nan pousyè e Mwen te fè ou chèf sou pèp Mwen an, Israël. E ou te mache nan chemen Jéroboam pou te fè pèp Mwen an, Israël peche e te pwovoke M a lakòlè avèk peche pa yo.
3 ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.
Veye byen, Mwen va manje Baescha nèt avèk lakay li e Mwen va fè lakay ou tankou lakay Jéroboam, fis a Nebat la.
4 ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು” ಎಂಬುದೇ.
Nenpòt moun nan Baescha ki mouri nan vil la, li va manje pa chen e nenpòt moun nan sila ki mouri nan chan, zwazo syèl yo va manje l.”
5 ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Alò, lòt zèv a Baescha, sa li te fè ak pwisans li, èske yo pa t ekri nan Liv Kwonik a Wa Israël yo?
6 ಅವನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಏಲನು ಅರಸನಾದನು.
Epi Baescha te dòmi avèk zansèt li yo, e li te antere Thirtsa. Epi Éla, fis li a, te vin wa nan plas li.
7 ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.
Anplis, pawòl SENYÈ a, pa pwofèt la, Jéhu, fis a Hanani an, osi te vini kont Baescha avèk lakay li, akoz tout mal li te fè nan zye SENYÈ a, lè l te pwovoke Li a lakòlè avèk zèv a men li yo, lè li te vin tankou lakay Jéroboam e osi akoz li te frape li.
8 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
Nan venn-sizyèm ane Asa a, wa a Juda a, Éla, fis a Baescha a, te vin wa sou Israël nan Thirtsa e li te renye pandan dezan.
9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.
Sèvitè li, Zimri, chèf a mwatye cha li yo, te fè konplo kont li. Alò, li te lakay Thirtsa, e li t ap bwè jiskaske li te vin sou lakay Artsa, ki te chèf sou tout kay Thirtsa a.
10 ೧೦ ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.
Alò, Zimri te antre frape li e te mete l a lanmò nan venn-setyèm ane Asa a, wa a Juda a e li te devni wa nan plas li.
11 ೧೧ ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.
Li te vin rive ke lè li te devni wa a, depi li te chita sou twòn nan, ke li te touye tout manm lakay Baesche yo. Li pa t kite menm yon gason, ni pami fanmi, ni nan zanmi li yo.
12 ೧೨ ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.
Konsa, Zimri te detwi tout lakay Baesche, selon pawòl ke SENYÈ a te pale kont Baesche pa Jéhu, pwofèt la,
13 ೧೩ ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.
pou tout peche a Baesche yo ak peche a Éla, fis li a, peche ke yo te fè e avèk sila yo te fè Israël peche yo, e ki te pwovoke Li a lakòlè avèk zidòl pa yo.
14 ೧೪ ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Alò, tout lòt zèv a Éla yo avèk tout sa ke li te fè yo, èske yo pa ekri nan Liv Kwonik a Wa Israël yo?
15 ೧೫ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಆ ಸಮಯದಲ್ಲಿ ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.
Nan venn-setyèm ane Asa a, wa Juda a, Zimri, te renye pandan sèt jou nan Thirtsa. Alò, pèp la te fè kan kont Guibbethon, ki te pou Filisten yo.
16 ೧೬ ಜಿಮ್ರಿಯು ಅರಸನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲರಿಗೆ ಮುಟ್ಟಿತು. ಅವರು ಅದೇ ದಿನ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.
Moun ki te nan kan yo te tande li e te di: “Zimri te fè konplo pou vin frape wa a.” Pou sa, tout Israël te fè Omri chèf lame a wa a sou Israël menm jou sa a nan kan an.
17 ೧೭ ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.
Alò, Omri ak tout Israël avèk li te monte soti nan Guibbethon pou te fè syèj kont Thirtsa.
18 ೧೮ ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.
Lè Zimri te wè vil la te tonbe, li te monte nan sitadèl lakay wa a. Li te brile lakay wa a sou pwòp tèt li avèk dife, e li te mouri.
19 ೧೯ ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.
Sa te fèt akoz peche ke li te fè yo, ak mal li te fè nan zye SENYÈ a, li te mache nan chemen Jéroboam. Nan peche li te fè yo, li te fè Israël peche.
20 ೨೦ ಜಿಮ್ರಿಯ ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Alò lòt zèv a Zimri yo avèk konplo li te fè yo, èske yo pa ekri an Liv Kwonik a Wa Israël yo?
21 ೨೧ ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.
Alò, pèp Israël yo te divize an de pati: mwatye te swiv Thibni, fis a Guinath la pou fè l devni wa; mwatye te swiv Omri.
22 ೨೨ ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು.
Men moun ki te swiv Omri yo te vin genyen sou moun ki te swiv Thibni yo, fis a Guinath la. Epi Thibni te mouri e Omri te vin wa a.
23 ೨೩ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.
Nan tranteyen ane Asa a, wa Juda a, Omri te devni wa sou Israël e li te renye pandan douz ane. Li te renye pandan sizan nan Thirtsa.
24 ೨೪ ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.
Li te achte ti mòn Samarie a nan men Schémer pou de talan ajan; epi li te bati sou ti mòn nan e li te rele vil ke li te bati a Samarie menm non a Schémer, mèt a ti mòn nan.
25 ೨೫ ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.
Omri te fè mal nan zye SENYÈ a e li te aji avèk plis mechanste pase tout moun ki te avan l yo.
26 ೨೬ ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.
Paske li te mache nan tout chemen a Jéroboam yo, fis a Nebat la ak nan peche pa li avèk sila li te fè Israël peche yo, e te pwovoke SENYÈ a, Bondye Israël la, avèk zidòl pa yo.
27 ೨೭ ಅವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Alò, tout lòt zèv ke Omri te fè yo ak pwisans ke li te montre yo, èske yo pa ekri nan Liv Kwonik a Wa Israël yo?
28 ೨೮ ಒಮ್ರಿಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಹಾಬನು ಅರಸನಾದನು.
Konsa, Omri te dòmi avèk zansèt pa li yo e li te antere Samarie; epi Achab, fis li a, te devni wa nan plas li.
29 ೨೯ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.
Alò, Achab, fis a Omri a te devni wa sou Israël pandan trann-tuit ane Asa yo, wa Juda a, e Achab, fis a Omri a te renye sou Israël nan Samarie pandan venn-dezan.
30 ೩೦ ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು
Achab, fis Omri a te fè mal nan zye a SENYÈ a plis pase tout moun ki te avan li yo.
31 ೩೧ ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.
Li te vin rive ke kòmsi li te yon ti bagay pou li te mache nan peche a Jéroboam yo, fis a Nebat la, ke li te marye ak Jézabel, fi a Ethbaal la, wa a Sidonyen yo, li te ale sèvi Baal e te adore li.
32 ೩೨ ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.
Konsa, li te fè monte yon lotèl pou Baal nan kay Baal ke li te bati Samarie a.
33 ೩೩ ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.
Achab osi te fè Astarté. Konsa, Achab te fè plis pou pwovoke SENYÈ a, Bondye Israël la, pase tout wa a Israël ki te avan li yo.
34 ೩೪ ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.
Nan jou pa li yo, Hiel, moun Béthel la te bati Jéricho. Li te poze fondasyon li yo avèk pèt Abiram, premye ne li a e li te monte pòtay li yo avèk pèt a pi piti fis li a, Segub, selon pawòl SENYÈ a te pale pa Josué, fis a Nun nan.

< ಅರಸುಗಳು - ಪ್ರಥಮ ಭಾಗ 16 >