< ಅರಸುಗಳು - ಪ್ರಥಮ ಭಾಗ 16 >
1 ೧ ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,
Sai maganar Ubangiji ta zo wa Yehu ɗan Hanani game da Ba’asha,
2 ೨ “ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ.
“Na ɗaga ka daga ƙura na mai da kai shugaban mutanena Isra’ila, amma ka yi tafiya a hanyoyin Yerobowam, ka kuma sa mutanena Isra’ila suka yi zunubi, ka tsokane ni na yi fushi ta wurin zunubansu.
3 ೩ ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.
Saboda haka ina gab da cinye Ba’asha da gidansa, zan kuma mai da gidanka kamar na Yerobowam ɗan Nebat.
4 ೪ ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು” ಎಂಬುದೇ.
Karnuka za su cinye waɗanda suke na Ba’asha da suka mutu a birni, tsuntsaye kuma za su cinye waɗanda suka mutu a jeji.”
5 ೫ ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Game da sauran ayyukan mulkin Ba’asha, abin da ya yi, da kuma nasarorinsa, an rubuta su cikin littafin tarihin sarakunan Isra’ila.
6 ೬ ಅವನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಏಲನು ಅರಸನಾದನು.
Ba’asha ya huta tare da kakanninsa, aka kuma binne shi a Tirza. Sai Ela ɗansa ya gāje shi a matsayin sarki.
7 ೭ ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.
Ban da haka, maganar Ubangiji ta zo ta wurin annabi Yehu ɗan Hanani wa Ba’asha da gidansa, saboda dukan muguntar da ya aikata a gaban Ubangiji, ya tsokane shi yă yi fushi ta wurin abubuwan da ya yi, da kuma zama kamar gidan Yerobowam, da kuma domin ya hallaka gidan Yerobowam.
8 ೮ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
A shekara ta ashirin da shida ta Asa sarkin Yahuda, Ela ɗan Ba’asha ya zama sarkin Isra’ila, ya kuma yi mulki a Tirza shekaru biyu.
9 ೯ ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.
Zimri, ɗaya daga cikin shugabanni, wanda ya shugabanci rabin kekunan yaƙin Ela, ya yi maƙarƙashiya a kansa. Ela yana a Tirza a lokacin, ya bugu a gidan Arza, sarkin fada a Tirza.
10 ೧೦ ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.
Zimri ya shiga, ya buge shi ya kashe a shekara ta ashirin da bakwai na Asa sarkin Yahuda. Sa’an nan ya gāje shi a matsayin sarki.
11 ೧೧ ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.
Nan da nan sai ya fara mulki ya kuwa zauna a kujerar sarauta, ya kashe dukan iyalin Ba’asha. Bai bar namiji guda ɗaya ba, ko dangi, ko aboki.
12 ೧೨ ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.
Ta haka Zimri ya hallaka dukan iyalin Ba’asha, bisa ga maganar da Ubangiji ya yi game da Ba’asha ta wurin annabi Yehu.
13 ೧೩ ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.
Wannan ya faru saboda dukan zunuban Ba’asha da waɗanda ɗansa Ela ya yi, da ya sa Isra’ila suka yi, har suka tsokane Ubangiji, Allah na Isra’ila, yă yi fushi ta wurin gumakansu marasa amfani.
14 ೧೪ ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Game da sauran ayyukan mulkin Ela, da dukan abin da ya yi, duk a rubuce suke a cikin littafin tarihin sarakunan Isra’ila.
15 ೧೫ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಆ ಸಮಯದಲ್ಲಿ ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.
A shekara ta ashirin da bakwai na Asa sarkin Yahuda, Zimri ya yi mulki a Tirza kwana bakwai. Mayaƙa suka yi sansani kusa da Gibbeton, wani garin Filistiyawa.
16 ೧೬ ಜಿಮ್ರಿಯು ಅರಸನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲರಿಗೆ ಮುಟ್ಟಿತು. ಅವರು ಅದೇ ದಿನ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.
Sa’ad da Isra’ilawa a cikin sansani suka ji cewa Zimri ya yi maƙarƙashiya a kan sarki, ya kuma kashe shi, sai suka yi shela, suka naɗa Omri, shugaban mayaƙa ya zama sarki a bisa Isra’ila, a wannan rana a cikin sansani.
17 ೧೭ ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.
Sai Omri da dukan Isra’ilawa suka janye daga Gibbeton, suka yi wa Tirza kwanto.
18 ೧೮ ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.
Da Zimri ya ga cewa an kame birnin, sai ya je ya shiga hasumiya fadan sarki ya sa wa fadan wuta wutar kuwa ta ƙone shi ya mutu.
19 ೧೯ ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.
Wannan ya faru saboda zunuban da ya yi, ya yi mugunta a gaban Ubangiji ya kuma yi tafiya a hanyoyin Yerobowam da kuma cikin zunubin da Yerobowam ya yi da ya sa Isra’ila suka yi.
20 ೨೦ ಜಿಮ್ರಿಯ ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Game da sauran ayyukan mulkin Zimri, da tawayen da ya yi, duk a rubuce suke a cikin littafin tarihin sarakunan Isra’ila.
21 ೨೧ ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.
Sai mutanen Isra’ila suka rabu kashi biyu; rabi guda sun goyi bayan Tibni ɗan Ginat yă zama sarki, ɗayan rabin kuma sun goyi bayan Omri.
22 ೨೨ ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು.
Amma mabiyan Omri suka nuna sun fi na Tibni ɗan Ginat ƙarfi. Sai Tibni ya mutu, Omri kuwa ya zama sarki.
23 ೨೩ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.
A shekara ta talatin da ɗaya na Asa sarkin Yahuda, Omri ya zama sarkin Isra’ila, ya kuma yi mulki shekara goma sha biyu, shekaru shida a Tirza.
24 ೨೪ ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.
Ya saya tudun Samariya daga Shemer, a bakin talentin biyu na azurfa, ya kuma gina birni a kan tudun, ya kira shi Samariya, bayan Shemer, sunan mai tudun a dā.
25 ೨೫ ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.
Amma Omri ya yi mugunta a gaban Ubangiji, ya kuma yi zunubi fiye da dukan waɗanda suka kasance kafin shi.
26 ೨೬ ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.
Ya yi tafiya a dukan hanyoyin Yerobowam ɗan Nebat da kuma cikin zunubinsa wanda ya sa Isra’ila suka yi, har suka tsokane Ubangiji, Allah na Isra’ila yă yi fushi ta wurin gumakansu marasa amfani.
27 ೨೭ ಅವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Game da sauran ayyukan mulkin Omri, abin da ya yi, da kuma abubuwan da ya yi, duk a rubuce suke a cikin littafin tarihin sarakunan Isra’ila.
28 ೨೮ ಒಮ್ರಿಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಹಾಬನು ಅರಸನಾದನು.
Omri ya huta tare da kakanninsa, aka kuma binne shi a Samariya. Sai Ahab ya gāje shi a matsayin sarki.
29 ೨೯ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.
A shekara ta talatin da takwas ta Asa sarkin Yahuda, Ahab ɗan Omri ya zama sarkin Isra’ila, ya kuma yi mulki a Samariya a kan Isra’ila, shekara ashirin da biyu.
30 ೩೦ ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು
Ahab ɗan Omri ya yi mugunta sosai a gaban Ubangiji fiye da wani daga cikin waɗanda suka riga shi.
31 ೩೧ ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.
Bai zama masa wani abu mai wuya ba, yă yi zunuban Yerobowam ɗan Nebat, har ma ya auri Yezebel’yar Etba’al sarkin Sidoniyawa, ya kuma fara bauta wa Ba’al, ya yi masa sujada.
32 ೩೨ ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.
Ya kafa bagade domin Ba’al a haikalin Ba’al da ya gina a Samariya.
33 ೩೩ ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.
Ahab ya gina ginshiƙin Ashera, ya kuma aikata abubuwa masu yawa don yă tsokane Ubangiji, Allah na Isra’ila yă yi fushi fiye da dukan sarakunan Isra’ila da suka riga shi.
34 ೩೪ ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.
A lokaci Ahab ne, Hiyel mutumin Betel ya sāke gina Yeriko. Ya kafa tushensa a bakin ran ɗan farinsa Abiram, ya kuma kafa ƙofofinsa a bakin ran autansa Segub, bisa ga maganar Ubangiji da ya yi ta wurin Yoshuwa ɗan Nun.