< ಅರಸುಗಳು - ಪ್ರಥಮ ಭಾಗ 17 >
1 ೧ ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
১গিলিয়দের তিশ্বী গ্রামের এলিয় আহাবকে বললেন, “আমি যাঁর সেবা করি ইস্রায়েলীয়দের সেই জীবন্ত ঈশ্বর সদাপ্রভুর দিব্যি দিয়ে বলছি যে, আমি না বলা পর্যন্ত আগামী কয়েক বছরে শিশির পড়বে না, বৃষ্টিও হবে না।”
2 ೨ ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳ ವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವುದಿಲ್ಲ” ಅಂದನು.
২পরে সদাপ্রভু এলিয়কে বললেন,
3 ೩ ತರುವಾಯ ಯೆಹೋವನು ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.
৩“তুমি এই জায়গা ছেড়ে পূর্ব দিকে যাও এবং যর্দ্দনের পূর্ব দিকে করীৎ স্রোতের ধারে লুকিয়ে থাক।
4 ೪ ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
৪তুমি সেই স্রোতের জল খাবে আর সেখানে তোমাকে খাবার দেবার জন্য আমি দাঁড়কাকদের আদেশ দিয়েছি।”
5 ೫ ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.
৫কাজেই সদাপ্রভু এলিয়কে যা বললেন তিনি তাই করলেন। তিনি যর্দ্দনের পূর্ব দিকে করীৎ স্রোতের ধারে গিয়ে থাকতে লাগলেন।
6 ೬ ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
৬দাঁড়কাকেরা সকালে ও বিকালে তাঁর জন্য রুটি ও মাংস আনত এবং তিনি সেই স্রোতের জল খেতেন।
7 ೭ ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.
৭দেশে বৃষ্টি না হওয়াতে কিছুকাল পরে সেই স্রোতের জল শুকিয়ে গেল।
8 ೮ ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,
৮পরে তাঁর কাছে সদাপ্রভুর এই বাক্য এল,
9 ೯ ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.
৯“তুমি উঠ, এখন সীদোনের সারিফতে গিয়ে থাক। তোমাকে খাবার জোগাবার জন্য আমি সেখানকার এক বিধবাকে আজ্ঞা দিয়েছি।”
10 ೧೦ ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು.
১০তখন তিনি উঠে সারিফতে গেলেন; আর যখন সেই শহরের দরজায় আসলেন, দেখ, সেই জায়গায় এক বিধবা কাঠ কুড়াচ্ছে। তিনি তাকে ডেকে বললেন, “অনুরোধ করি, তুমি একটি পাত্রে করে সামান্য জল আন, আমি পান করব”
11 ೧೧ ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.
১১সেই স্ত্রীলোকটী যখন জল আনতে যাচ্ছিল তখন তিনি তাকে ডেকে বললেন, “অনুরোধ করি, আমার জন্য এক টুকরো রুটি হাতে করে আন।”
12 ೧೨ ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.
১২উত্তরে সেই বিধবা বলল, “আপনার ঈশ্বর জীবন্ত সদাপ্রভুর দিব্যি দিয়ে বলছি যে, আমার কাছে একটাও রুটি নেই। পাত্রে কেবল এক মুঠো ময়দা আর ভাঁড়ে একটুখানি তেল রয়েছে। বাড়ি নিয়ে যাবার জন্য আমি কতগুলো কাঠ কুড়াচ্ছি; তা দিয়ে আমার ও আমার ছেলের জন্য কিছু খাবার তৈরী করব। তারপর তা খাওয়ার পরে আমরা উপবাসে মরব।”
13 ೧೩ ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
১৩এলিয় তাকে বললেন, “ভয় কোরো না। যা বললে, তাই কর গিয়ে, কিন্তু প্রথমে তা থেকে আমার জন্য একটি ছোট রুটি তৈরী করে আনো; পরে নিজের ও ছেলেটির জন্য তৈরী কর।
14 ೧೪ ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ.
১৪কারণ ইস্রায়েলের ঈশ্বর সদাপ্রভু এই কথা বলেন, সদাপ্রভু পৃথিবীতে বৃষ্টি না দেওয়া পর্যন্ত ঐ ময়দার পাত্রটাও খালি হবে না আর তেলের ভাঁড়ও খালি হবে না।”
15 ೧೫ ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.
১৫তাতে সে গিয়ে এলিয়ের কথামত করল; আর সে ও এলিয় এবং সেই স্ত্রীলোকের আত্মীয় অনেক দিন পর্যন্ত খেল।
16 ೧೬ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
১৬এলিয়ের মধ্য দিয়ে সদাপ্রভু যে কথা বলেছিলেন সেই অনুসারে ঐ ময়দার পাত্রটাও খালি হল না, তেলের ভাঁড়ও খালি হল না।
17 ೧೭ ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.
১৭এই সব ঘটনার পরে সেই স্ত্রীলোক, যে বাড়ির মালিক তার ছেলে অসুস্থ হল এবং তার অসুখ এমন বেশি হল যে, তার শরীরে আর শ্বাসবায়ু থাকল না।
18 ೧೮ ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
১৮স্ত্রীলোকটী তখন এলিয়কে বলল, “হে ঈশ্বরের লোক, আপনার সঙ্গে আমার কি করার আছে? আপনি কি আমাকে আমার পাপের কথা মনে করিয়ে দিতে আর আমার ছেলেকে মেরে ফেলতে এসেছেন?”
19 ೧೯ ಅವನು ಆಕೆಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು.
১৯তিনি তাকে বললেন, “তোমার ছেলেকে আমার কাছে দাও।” পরে তিনি ছেলেটিকে সেই স্ত্রীলোকের কোল থেকে নিয়ে উপরের নিজের থাকবার ঘরে গিয়ে নিজের বিছানায় শুইয়ে দিলেন।
20 ೨೦ ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.
২০আর তিনি সদাপ্রভুকে ডেকে বললেন, “হে সদাপ্রভু, আমার ঈশ্বর, আমি যে বিধবার বাড়িতে থাকি তার ছেলেকে মেরে ফেলে তারও উপরে বিপদ নিয়ে আসলে?”
21 ೨೧ ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು” ಎಂಬುದಾಗಿ ಆತನಿಗೆ ಮೊರೆಯಿಟ್ಟನು.
২১তারপর তিনি তিন বার ছেলেটির উপরে লম্বা হয়ে শুয়ে সদাপ্রভুকে ডেকে বললেন, “হে সদাপ্রভু আমার ঈশ্বর, অনুরোধ করি, ছেলেটির প্রাণ তার মধ্যে ফিরে আসুক।”
22 ೨೨ ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.
২২তখন সদাপ্রভু এলিয়ের কথা শুনলেন তাতে ছেলেটির প্রাণ তার মধ্যে ফিরে আসল আর সে বেঁচে উঠল।
23 ೨೩ ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು.
২৩পরে এলিয় ছেলেটিকে তুলে নিয়ে উপরের ঘর থেকে নীচে নেমে তাকে তার মায়ের কাছে দিয়ে বললেন, “দেখ, তোমার ছেলে বেঁচে আছে।”
24 ೨೪ ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.
২৪তাতে সেই স্ত্রীলোকটী এলিয়কে বলল, “আমি এখন জানতে পারলাম আপনি ঈশ্বরের লোক এবং সদাপ্রভু আপনার মধ্য দিয়ে যা বলেন তা সত্য।”