< ಅರಸುಗಳು - ಪ್ರಥಮ ಭಾಗ 17 >

1 ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
[厄里亞先知預言旱災]基肋阿得提市貝出身的提市貝人厄里亞對阿哈布說:「我指著我所服侍的永生上主、以色列的天主起誓:這幾年如果沒有我的命令,天決不降露或落雨! 」
2 ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳ ವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವುದಿಲ್ಲ” ಅಂದನು.
有上主的話傳於厄里亞說:「
3 ತರುವಾಯ ಯೆಹೋವನು ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.
你離開這裏,轉向東方,隱居在約但河東的革黎特校河旁。
4 ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
你要喝那小河裏的水,我已經吩咐烏鴉在那裏供給你食物。」
5 ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.
厄里亞就依照上主的話去做,去住在約但河東的革黎特小河旁。
6 ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
烏鴉早晨給他送餅和肉來,晚上也給他送餅和肉來;渴了,就喝那小河裏的水。
7 ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.
不幾天以後,那地方沒有落雨,小河也乾涸了。
8 ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,
有上主的話傳於厄里亞說:「
9 ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.
你起身往漆冬匝爾法特去,住在那裏;我已吩咐那裏的一個寡婦供養你。」
10 ೧೦ ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು.
他就起身往匝爾法特去了,來到城門時,看見一個寡婦在那裏拾木柴。厄里亞喚她說:「請你用器皿取點水來給我喝! 」
11 ೧೧ ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.
她正要去取水的時候,厄里亞又叫住她說:「請你也順便給我拿點餅來! 」
12 ೧೨ ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.
那寡婦說:「我指著永生上主你的天主起誓:我沒有餅,缸裏只有一把麵,罐裏還有一點油。你看,我正要拾兩根木柴,回去為我和我的兒子做點東西,吃了等死。」
13 ೧೩ ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
厄里亞對她說:「你不用害怕,僅管照你所說的去做;只是先為我做一個小餅,給我拿來! 然後,再為你和你的兒子做,
14 ೧೪ ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ.
因為上主以色列的天主這樣說:直到上主使雨落在在地上的那一天,缸裏的麵,決不會用完;罐裏的油,也決不會缺少。」
15 ೧೫ ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.
那個寡婦就照了厄里亞的話去做了;她和厄里亞並她的孩子吃了許多日子;
16 ೧೬ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
缸裏的麵,果然沒有用完,罐裏的油,也沒有減少,正如上主藉著厄里亞所說的話。復活寡婦的兒子
17 ೧೭ ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.
這事以後,那婦人,即那家的主母的兒子病了,病得很重,就斷了氣。
18 ೧೮ ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
婦人於是對厄里亞說:「天主的人,我與你有什麼關係﹖你到我這裏來,竟叫上主記起我的罪惡,殺死了我的兒子! 」
19 ೧೯ ಅವನು ಆಕೆಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು.
厄里亞對婦人說:「把你的兒子交給我! 」於是厄里亞從她懷裏接過孩子來,抱到他住的樓上,放在自己的床上,
20 ೨೦ ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.
呼求上主說:「上主,我的天主! 我寄居在這寡婦家中,難道你也忍心加害於她,殺死她的兒子嗎﹖」
21 ೨೧ ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು” ಎಂಬುದಾಗಿ ಆತನಿಗೆ ಮೊರೆಯಿಟ್ಟನು.
厄里亞三次伏在孩子身上,呼求上主說:「上主,我的天主,求你使這孩子的靈魂再回到他身上! 」
22 ೨೨ ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.
上主聽了厄里亞的呼求,孩子的靈魂又回到他身上,孩子就又活了。
23 ೨೩ ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು.
厄里亞將孩子曾樓上抱下來,到房間內,把孩子交給他的母親說:「看,你兒子活了! 」
24 ೨೪ ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.
那婦人對厄里亞說:「現在我知道你是天主的人,上主藉著你的口所說的話,確是真理。」

< ಅರಸುಗಳು - ಪ್ರಥಮ ಭಾಗ 17 >