< ಅರಸುಗಳು - ಪ್ರಥಮ ಭಾಗ 18 >

1 ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.
Baada ya muda mrefu, katika mwaka wa tatu, neno la Bwana likamjia Eliya kusema, “Nenda ukajionyeshe kwa Ahabu na mimi nitanyesha mvua juu ya nchi.”
2 ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,
Kwa hiyo Eliya akaenda kujionyesha kwa Ahabu. Wakati huu njaa ilikuwa kali sana katika Samaria,
3 ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು.
naye Ahabu alikuwa amemwita Obadia ambaye alikuwa msimamizi wa jumba lake la kifalme. (Obadia alimcha Bwana sana.
4 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
Wakati Yezebeli alipokuwa akiwaua manabii wa Bwana, Obadia alikuwa amewachukua manabii mia moja na kuwaficha katika mapango mawili, hamsini kwenye kila moja na akawa akiwapa chakula na maji.)
5 ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.
Ahabu alikuwa amemwambia Obadia, “Nenda katika nchi yote kwenye vijito vyote na mabonde. Huenda tunaweza kupata majani ya kuwalisha farasi na nyumbu wapate kuishi ili tusilazimike kuwaua hata mmoja wa wanyama wetu.”
6 ಅವರು ಸಂಚಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಕಡೆ ತಾನೇ ಹೊರಟುಹೋದನು.
Kwa hiyo wakagawanya nchi waliyokusudia kutafuta majani, Ahabu akaenda upande mmoja na Obadia upande mwingine.
7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.
Wakati Obadia alipokuwa akitembea njiani, Eliya akakutana naye. Obadia akamtambua, akamsujudia hadi nchi na kusema, “Je, hivi kweli ni wewe, bwana wangu Eliya?”
8 ಅದಕ್ಕೆ ಅವನು, “ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆ’ ಎಂದು ಹೇಳು” ಎಂದನು.
Eliya akamjibu, “Ndiyo, nenda ukamwambie bwana wako Ahabu, ‘Eliya yuko hapa.’”
9 ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು?
Obadia akamuuliza, “Ni kosa gani nimefanya, hata ukaamua kumkabidhi mtumishi wako mkononi mwa Ahabu ili aniue?
10 ೧೦ ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.
Hakika kama Bwana Mungu wako aishivyo, hakuna taifa hata moja au ufalme ambapo bwana wangu hajamtuma mtu kukutafuta. Kila wakati taifa au ufalme walipodai kwamba haupo huko, aliwafanya waape kwamba hawakuweza kukupata.
11 ೧೧ ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬುದಾಗಿ ಆಜ್ಞಾಪಿಸುವುದೇನು?
Lakini sasa unaniambia niende kwa bwana wangu na kusema, ‘Eliya yuko hapa.’
12 ೧೨ ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?
Sijui ni wapi Roho wa Bwana ataamua kukupeleka wakati nitakapokuacha. Kama nikienda kumwambia Ahabu na asikupate, ataniua. Hata hivyo mimi mtumishi wako nimemwabudu Bwana tangu ujana wangu.
13 ೧೩ ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
Je, hukusikia, bwana wangu, nilifanya nini wakati Yezebeli alipokuwa akiua manabii wa Bwana? Niliwaficha manabii wa Bwana mia moja katika mapango mawili, hamsini katika kila moja, nami nikawapatia chakula na maji.
14 ೧೪ ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?” ಎಂದು ಉತ್ತರಕೊಟ್ಟನು.
Nawe sasa unaniambia niende kwa bwana wangu na kumwambia, ‘Eliya yuko hapa.’ Yeye ataniua!”
15 ೧೫ ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು.
Eliya akasema, “Kama Bwana Mwenye Nguvu Zote aishivyo, yeye ninayemtumikia, hakika nitajionyesha kwa Ahabu leo.”
16 ೧೬ ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ
Basi Obadia akaenda kukutana na Ahabu na kumwambia, naye Ahabu akaenda kukutana na Eliya.
17 ೧೭ ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.
Ahabu alipomwona Eliya, akamwambia, “Je, ni wewe, mtaabishaji wa Israeli?”
18 ೧೮ ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.
Eliya akamjibu, “Mimi sijaitaabisha Israeli. Lakini wewe na jamaa ya baba yako ndio mnaofanya hivyo. Mmeziacha amri za Bwana na mkafuata Mabaali.
19 ೧೯ ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.
Sasa waite watu kutoka Israeli yote tukutane nao juu ya Mlima Karmeli. Nawe uwalete hao manabii wa Baali mia nne na hamsini na hao manabii mia nne wa Ashera, walao chakula mezani mwa Yezebeli.”
20 ೨೦ ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.
Ndipo Ahabu akatuma ujumbe katika Israeli yote na kuwakusanya manabii hao juu ya mlima Karmeli.
21 ೨೧ ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.
Eliya akasimama mbele ya watu na kusema, “Mtasitasita katika mawazo mawili hadi lini? Ikiwa Bwana ndiye Mungu, mfuateni yeye; lakini ikiwa Baali ni Mungu, basi mfuateni yeye.” Lakini watu hawakusema kitu.
22 ೨೨ ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.
Kisha Eliya akawaambia, “Ni mimi peke yangu nabii wa Bwana aliyebaki, lakini Baali ana manabii mia nne na hamsini.
23 ೨೩ ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು
Leteni mafahali wawili. Wao na wajichagulie mmoja, wamkate vipande vipande na waweke juu ya kuni lakini wasiiwashie moto. Nitamwandaa huyo fahali mwingine na kumweka juu ya kuni lakini sitawasha moto.
24 ೨೪ ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.
Kisha mliitie jina la mungu wenu, nami nitaliitia jina la Bwana Mungu yule ambaye atajibu kwa moto, huyo ndiye Mungu.” Kisha watu wote wakasema, “Hilo unalosema ni jema.”
25 ೨೫ ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು.
Eliya akawaambia manabii wa Baali, “Chagueni mmoja kati ya hawa mafahali na mwe wa kwanza kumwandaa, kwa kuwa ninyi mko wengi sana. Liitieni jina la mungu wenu, lakini msiwashe moto.”
26 ೨೬ ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.
Kwa hiyo wakamchukua yule fahali waliyepewa, nao wakamwandaa. Kisha wakaliitia jina la Baali kutoka asubuhi hadi adhuhuri, wakapiga kelele, “Ee Baali, utujibu!” Lakini hapakuwa na jibu; hakuna aliyejibu. Nao wakacheza kuizunguka madhabahu waliyoijenga.
27 ೨೭ ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.
Wakati wa adhuhuri, Eliya akaanza kuwadhihaki, akisema, “Pigeni kelele zaidi! Hakika yeye ni mungu! Labda amezama katika mawazo mazito, au ana shughuli nyingi, au amesafiri. Labda amelala usingizi mzito, naye ni lazima aamshwe.”
28 ೨೮ ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.
Kwa hiyo wakapiga kelele zaidi na kama ilivyokuwa desturi yao wakajichanja wenyewe kwa visu na vyembe, mpaka damu ikachuruzika.
29 ೨೯ ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.
Adhuhuri ikapita, nao wakaendelea na utabiri wao wa kiwazimu mpaka wakati wa dhabihu ya jioni. Lakini hapakuwa na jibu, hakuna aliyejibu, hakuna aliyeangalia.
30 ೩೦ ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು.
Kisha Eliya akawaambia watu wote, “Sogeeni karibu nami.” Watu wote wakamkaribia, naye akakarabati madhabahu ya Bwana, ambayo ilikuwa imevunjwa.
31 ೩೧ ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,
Eliya akachukua mawe kumi na mawili, moja kwa ajili ya kila kabila la wana wa Yakobo, ambaye neno la Bwana lilimjia, likisema, “Jina lako litakuwa Israeli.”
32 ೩೨ ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.
Kwa mawe hayo, akajenga madhabahu katika jina la Bwana, na akachimba handaki kuizunguka, ukubwa wa kutosha vipimo viwili vya mbegu.
33 ೩೩ ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು.
Akapanga kuni, akamkata yule fahali vipande vipande na kuvipanga juu ya kuni. Kisha akawaambia, “Jazeni mapipa manne maji na kuyamwaga juu ya sadaka ya kuteketezwa na juu ya kuni.”
34 ೩೪ ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು
Akawaambia, “Fanyeni hivyo tena.” Nao wakafanya hivyo tena. Akaagiza, “Fanyeni kwa mara ya tatu.” Nao wakafanya hivyo kwa mara ya tatu.
35 ೩೫ ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.
Maji yakatiririka kuizunguka madhabahu na hata kujaza lile handaki.
36 ೩೬ ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.
Wakati wa kutoa dhabihu ya jioni, nabii Eliya akasogea mbele na kuomba, akisema: “Ee Bwana, Mungu wa Abrahamu, na Isaki na Israeli, ijulikane leo kwamba wewe ndiye Mungu katika Israeli na ya kwamba mimi ni mtumishi wako na nimefanya mambo haya yote kwa neno lako.
37 ೩೭ ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು.
Unijibu mimi, Ee Bwana, nijibu mimi, ili watu hawa wajue kwamba wewe, Ee Bwana, ndiwe Mungu, na kwamba unaigeuza mioyo yao ikurudie tena.”
38 ೩೮ ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.
Kisha moto wa Bwana ukashuka na kuiteketeza ile dhabihu, zile kuni, yale mawe, ule udongo, na pia kuramba yale maji yaliyokuwa ndani ya handaki.
39 ೩೯ ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.
Wakati watu wote walipoona hili, wakaanguka kifudifudi na kulia, “Bwana: yeye ndiye Mungu! Bwana: yeye ndiye Mungu!”
40 ೪೦ ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
Kisha Eliya akawaamuru, “Wakamateni hao manabii wa Baali. Msimwache hata mmoja atoroke!” Wakawakamata, naye Eliya akawaleta mpaka Bonde la Kishoni na kuwachinja huko.
41 ೪೧ ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು.
Eliya akamwambia Ahabu, “Nenda, ukale na kunywa, kwa kuwa kuna sauti ya mvua kubwa.”
42 ೪೨ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.
Hivyo Ahabu akaondoka ili kula na kunywa. Lakini Eliya akapanda kileleni mwa Karmeli, akasujudu na akaweka kichwa chake katikati ya magoti yake.
43 ೪೩ ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.
Akamwambia mtumishi wake, “Nenda ukatazame kuelekea bahari.” Akaenda na kutazama. Akasema, “Hakuna kitu chochote huko.” Mara saba Eliya akasema, “Nenda tena.”
44 ೪೪ ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು.
Mara ya saba, mtumishi akaleta taarifa, “Wingu dogo kama mkono wa mwanadamu linainuka kutoka baharini.” Hivyo Eliya akasema, “Nenda ukamwambie Ahabu, ‘Tandika gari lako na ushuke kabla mvua haijakuzuia.’”
45 ೪೫ ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು.
Wakati ule ule anga likawa jeusi kwa mawingu, upepo ukainuka na mvua kubwa ikanyesha, naye Ahabu akaenda zake Yezreeli.
46 ೪೬ ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.
Nguvu za Bwana zikamjia Eliya, naye akajikaza viuno, akakimbia mbele ya Ahabu njia yote hadi maingilio ya Yezreeli.

< ಅರಸುಗಳು - ಪ್ರಥಮ ಭಾಗ 18 >