< ಅರಸುಗಳು - ಪ್ರಥಮ ಭಾಗ 19 >
1 ೧ ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.
၁ဧလိယပြုသော အမှုနှင့် ပရောဖက်အပေါင်းတို့ကို ထားနှင့် ကွပ်မျက်သောအမှုကို၊ အာဟပ်သည် ယေဇဗေလအား အကုန်အစင်ကြားပြော၏။
2 ೨ ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.
၂ယေဇဗေလက၊ နက်ဖြန်နေ့ယခုအချိန်ရောက်မှ၊ သင့်အသက်သည် ထိုပရောဖက်တို့၏ အသက်ကဲ့သို့ ငါမဖြစ်စေလျှင်၊ ဘုရားတို့သည် ငါ၌ထိုမျှမကပြုပါစေ သောဟု တမန်ကို ဧလိယထံသို့စေလွှတ်၍ ကြား လိုက်၏။
3 ೩ ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
၃ထိုအခါ ဧလိယသည်ကြောက်သဖြင့်၊ ထ၍ အသက်လွတ်အောင် ယုဒခရိုင် ဗေရရှေဘမြို့သို့သွား၏။ ထိုမြို့၌ ကျွန်ကို ထားခဲ့၍၊
4 ೪ ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
၄သူ့ကိုယ်တိုင်သည် တောသို့ တနေ့ခရီးသွားပြီးလျှင်၊ ရသမ်ပင်အောက်သို့ရောက်၍ ထိုင်လေ၏။ ထိုအခါကိုယ်အသက် သေရမည်အကြောင်း ဆုတောင်းလျက်၊ အိုထာဝရဘုရား၊ ယခုတန်ပါ၏။ အကျွန်ုပ် အသက်ကို သိမ်းယူတော်မူပါ။ အကျွန်ုပ်သည် ဘိုးဘေးတို့ ထက်သာ၍ မကောင်းပါဟု မြည်တမ်းပြီးလျှင်၊
5 ೫ ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.
၅ရသမ်ပင်အောက်မှာ အိပ်ပျော်၏။ ထိုအခါ ကောင်းကင်တမန်က၊ ထ၍စားလော့ဟု သူ့ကို တို့လျက် ဆို၏။
6 ೬ ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.
၆ဧလိယသည် မျှော်ကြည့်သောအခါ၊ မီးနှင့်ဖုတ်သော မုန့်ပြားနှင့် ခေါင်းရင်း၌ ရေဘူးရှိသည်ကို မြင်၍ စားသောက်ပြီးမှ တဖန်အိပ်ပျော်၏။
7 ೭ ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.
၇ထာဝရဘုရား၏ ကောင်းကင်တမန်သည် ဒုတိယအကြိမ်လာ၍ သူ့ကိုတို့လျက်၊ သွားရမည့်ခရီးသည် အလွန်ဝေးသောကြောင့်၊ ထ၍စားဦးလော့ဟုဆိုသည် အတိုင်း၊
8 ೮ ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ
၈ဧလိယသည်ထ၍ စားသောက်ပြန်၏။ ထိုအစာအာဟာရကို အမှီပြုလျက်၊ အရက်လေးဆယ်ခရီးသွား၍ ဘုရားသခင်နှင့်ဆိုင်သော ဟောရပ်တောင်သို့ ရောက် သဖြင့်၊
9 ೯ ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
၉ဥမင်ထဲသို့ဝင်၍ နေ၏။ ထာဝရဘုရား၏ နှုတ်ကပတ်တော် ရောက်လာသည်ကား၊ ဧလိယ၊ သင်သည် ဤအရပ်၌ အဘယ်သို့ပြုလျက်နေသနည်းဟု မေးတော်မူ၏။
10 ೧೦ ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
၁၀ဧလိယကလည်း၊ အကျွန်ုပ်သည် ကောင်းကင် ဗိုလ်ခြေအရှင် ဘုရားသခင်ထာဝရဘုရားဘက်၌ အလွန် စိတ်အားကြီးပါပြီ။ အကြောင်းမူကား၊ ဣသရေလအမျိုးသားတို့သည် ကိုယ်တော်၏ပဋိညာဉ်တရားကို စွန့်ပြီးလျှင်၊ ကိုယ်တော်၏ယဇ်ပလ္လင်များကို ဖြိုဖျက်၍ ကိုယ်တော်၏ပရောဖက်များကို ထားနှင့်သတ်ကြပါပြီ။ အကျွန်ုပ်တယောက်တည်း ကျန်ရစ်၍၊ အကျွန်ုပ်တယောက်တည်းကျန်ရစ်၍၊ အကျွန်ုပ်အသက်ကို ပင်သတ်ခြင်းငှါ ရှာကြပါသည်ဟု လျှောက်လေ၏။
11 ೧೧ ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.
၁၁နှုတ်ကပတ်တော်ကလည်း ထွက်လော့။ ထာဝရဘုရား ရှေ့တောင်ပေါ်မှာရပ်နေလော့။ ထာဝရဘုရား ရှောက်သွားမည်ဟုမိန့်တော်မူ၏။ ထိုအခါ အားကြီးသော လေပြင်းသည် တောင်ထိပ်တို့ကိုခွဲ၍၊ ထာဝရဘုရားရှေ့တော်၌ ကျောက်တို့ကိုချိုးဖဲ့၏။ သို့ရာတွင်ထာဝရဘုရားသည် လေ၌ရှိတော်မမူ။ လေနောက်မှာ မြေလှုပ်ခြင်းရှိ၏။ သို့ရာတွင် ထာဝရဘုရား သည် မြေလှုပ်ရှားခြင်း၌လည်းရှိတော်မမူ။
12 ೧೨ ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,
၁၂မြေလှုပ်ခြင်းနောက်မှာမီးရှိ၏။ သို့ရာတွင် ထာဝရဘုရားသည် မီး၌လည်းရှိတော်မမူ၊ မီးနောက်မှာ ဖြည်းညှင်းသော အသံရှိ၏။
13 ೧೩ ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
၁၃ထိုအသံကို ဧလိယသည်ကြားလျှင်၊ မျက်နှာကို ဝတ်လုံနှင့် ဖုံးအုပ်လျက် ထွက်၍ဥမင်ဝ၌ရပ်နေ၏။ ထိုအခါ ဧလိယ၊ သင်သည်ဤအရပ်၌ အဘယ်သို့ပြုလျက် နေသနည်းဟု အသံလာ၏။
14 ೧೪ ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
၁၄ဧလိယကလည်း၊ အကျွန်ုပ်သည် ကောင်းကင် ဗိုလ်ခြေအရှင် ဘုရားသခင်ထာဝရဘုရားဘက်၌ အလွန် စိတ်အားကြီးပါပြီ။ အကြောင်းမူကား၊ ဣသရေလအမျိုးသားတို့သည် ကိုယ်တော်၏ပဋိညာဉ်တရားကို စွန့်ပြီးလျှင်၊ ကိုယ်တော်၏ယဇ်ပလ္လင်များကို ဖြိုဖျက်၍၊ ကိုယ်တော်၏ ပရောဖက် များကို ထားနှင့်သတ်ကြပါပြီ။ အကျွန်ုပ်တယောက် တည်းကျန်ရစ်၍၊ အကျွန်ုပ်အသက်ကိုပင် သတ်ခြင်းငှါ ရှာကြပါသည်ဟု လျှောက်လေသော်၊
15 ೧೫ ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.
၁၅ထာဝရဘုရားက၊ ဒမာသက်တောသို့ ပြန်၍ ခရီးသွားလော့။ ရောက်သောအခါ ဟာဇေလကို ရှုရိရှင်ဘုရင်အရာ၌ ခန့်ထား၍ ဘိသိက်ပေးလော့။
16 ೧೬ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.
၁၆နိမ်ရှိသား ယေဟုကို ဣသရေလရှင်ဘုရင်အရာ၌ ခန့်ထား၍ ဘိသိက်ပေးလော့။ အာဗေလ မဟောလမြို့နေ၊ ရှာဖတ်သားဧလိရှဲကို သင့်ကိုယ်စား ပရောဖက်အရာ၌ ခန့်ထား၍ ဘိသိက်ပေးလော့။
17 ೧೭ ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.
၁၇သို့ဖြစ်၍ ဟာဇေလထားနှင့်လွတ်သောသူကို ယေဟုသတ်လိမ့်မည်။ ယေဟုထားနှင့်လွတ်သောသူကို ဧလိရှဲသတ်လိမ့်မည်။
18 ೧೮ ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.
၁၈သို့ရာတွင် ဗာလရှေ့၌ ဒူထောက်ခြင်း၊ နမ်းခြင်း ကို မပြုသောသူအပေါင်းတည်းဟူသော ဣသရေလ အမျိုးသားခုနစ်ထောင်တို့ကို ငါ့အဘို့ ငါကျန်ကြွင်းစေပြီ ဟု မိန့်တော်မူ၏။
19 ೧೯ ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
၁၉ထိုအရပ်မှ ဧလိယသည် သွားပြီးလျှင်၊ နွား ငါးယှဉ်းနှင့်လယ်ထွန်လျက်၊ နောက်ဆုံးနွားယှဉ်း၌ ကိုယ်တိုင်လိုက်သော ရှာဖတ်သားဧလိရှဲကို တွေ့၍အနား၌ ရှောက်စဉ်တွင်၊ မိမိဝတ်လုံကို သူ့အပေါ်မှာ တင်လေ၏။
20 ೨೦ ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
၂၀ဧလိရှဲသည် နွားတို့ကို ပစ်ထား၍ ဧလိယ နောက်သို့လိုက်လျက်၊ အကျွန်ုပ်သည်မိဘကိုနမ်ပါးရစေ။ သို့ပြီးမှ ကိုယ်တော်နောက်သို့ လိုက်ပါမည်ဟု အခွင့် တောင်းလျှင်၊ ဧလိယကပြန်သွားလော့။ ငါသည် သင်၌ အဘယ်သို့ပြုဘိသနည်းဟုဆိုသော်၊
21 ೨೧ ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.
၂၁ဧလိရှဲသည်ပြန်သွား၍ နွားယှဉ်းကိုသတ်ပြီးမှ၊ နွားသားကို လယ်ထွန်သော တန်ဆာနှင့် ပြုတ်၍ လူများ တို့အား ကျွေးလေ၏။ သို့ပြီးမှထ၍ ဧလိယနောက်သို့ လိုက်လျက် လက်ထောက်ဖြစ်လေ၏။