< ಅರಸುಗಳು - ಪ್ರಥಮ ಭಾಗ 2 >

1 ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,
И когато наближи на Давида времето да умре, заръча на сина си Соломона, казвайки:
2 “ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.
Аз отивам в пътя на целия свят; ти, прочее, се крепи и бъди мъжествен.
3 ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.
Пази заръчванията на Господа твоя Бог, ходи в пътищата Му и пази повеленията Му, заповедите Му, съдбите Му и заявленията Му, според както е писано в Моисеевия закон, за да успяваш във всичко, каквото правиш и на където и да се обръщаш;
4 ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,
За да утвърди Господ думата, с който е говорил за мене, като е казал: Ако внимават чадата ти в пътя си, да ходят пред Мене в истина, от цялото си сърце и от цялата си душа, няма да липсва от тебе мъж върху Израилевия престол.
5 ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.
Освен това, ти знаеш какво и стори Иоав Саруиният син, и какво направи на двамата военачалници на Израилевите войски, - на Авенира Нировия син и на Амаса Етеровия син, - който уби, като проля боева кръв в мирно време и обагри с боева кръв пояса, който бе около кръста му, и обущата, които бяха на нозете му.
6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು. (Sheol h7585)
Постъпвай, прочее, според мъдростта си, и не оставяй белите му коси да слязат с мир в гроба. (Sheol h7585)
7 ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
Но покажи благост към синовете на галаадеца Верзелай, и нека бъдат между ония, които ядат на трапезата ти; защото така с храна те дойдоха при мене, когато бягах от брата ти Авесалома.
8 ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ’ ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು.
И ето с тебе вениаминецът Семей Гираевият син, от Ваурим, който ме прокле с горчива клетва в деня, когато отидох в Маханаим; слезе обаче да ме посрещне при Иордан, и заклех му се в Господа, като рекох: Няма да те убия с меч.
9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು. (Sheol h7585)
Сега, прочее, да го не считаш за невинен; защото си мъдър човек и ще знаеш, що трябва да му направиш за да сведеш белите му коси с кръв в гроба. (Sheol h7585)
10 ೧೦ ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.
И така, Давид заспа с бащите си, и биде погребан в Давидовия град.
11 ೧೧ ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು.
А времето, през което Давид царува над Израиля, беше четиридесет години: седем години царува в Хеврон, и тридесет и три години царува в Ерусалим.
12 ೧೨ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.
И Соломон седна на престола на баща си Давида; и царството му се закрепи твърдо.
13 ೧೩ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, “ನೀನು ಸಮಾಧಾನದಿಂದ ಬಂದಿರುವೆಯೋ?” ಎಂದು ಕೇಳಿದಳು. ಅವನು, “ಹೌದು ಸಮಾಧಾನದಿಂದ ಬಂದೆನು” ಎಂದನು.
Тогава Адония, Агитиният син, дойде при Витсавее, Соломоновата майка. А тя каза: С мир ли идеш? И рече: С мир.
14 ೧೪ ಆಮೇಲೆ ಅವನು, “ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ” ಎಂದನು. ಅದಕ್ಕೆ ಆಕೆಯು, “ಹೇಳು” ಎಂದಳು.
После рече: Имам да ти кажа една дума. И тя рече: Казвай.
15 ೧೫ ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.
Тогава той каза: Ти знаеш, че на мене принадлежеше царството, и че към мене целият Израил беше обърнал лицето си с ожидане за да царувам; обаче царството се отклони, та се падна на брата ми, защото от Господа му дойде.
16 ೧೬ ಅದನ್ನು ತಿರಸ್ಕರಿಸಬೇಡ” ಎನ್ನಲು ಆಕೆಯು, “ಅದೇನು ಹೇಳು” ಎಂದಳು.
Сега, прочее, имам една просба към тебе: не ми я отричай. И тя му рече: Казвай.
17 ೧೭ ಆಗ ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ” ಎಂದನು.
И рече: Кажи, моля, на цар Соломона (защото не ще да ти откаже това ) да ми даде за жена сунамката Ависага.
18 ೧೮ ಆಗ ಬತ್ಷೆಬೆಯು, “ಒಳ್ಳೇಯದು, ನಾನು ನಿನಗೋಸ್ಕರ ಅರಸನ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ” ಎಂದು ಹೇಳಿದಳು.
А Витсавее рече: Добре; аз ще говоря за тебе на царя.
19 ೧೯ ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
И така, Витсавее влезе при цар Соломона да му говори за Адония. И царят стана да я посрещне, и поклони й се; сетне, като седна на престола си, каза да положат престол и за царевата майка; и тя седне отдясно му.
20 ೨೦ ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು.
Тогава тя каза: Една малка просба имам към тебе; на ми я отричай. А царят й рече: Прости, майко моя, защото няма да ти откажа.
21 ೨೧ ಆಗ ಆಕೆಯು, “ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಮದುವೆ ಮಾಡಿಕೊಡು” ಎಂದಳು.
И тя рече: Нека се даде сунамката Ависага на брата ти Адония за жена.
22 ೨೨ ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.
Но цар Соломон в отговор рече на майка си: А защо искаш сунамката Ависага за Адония? искай за него и царството, (защото ми е по-голям брат); да! за него, за свещеника Авиатара и за Иоава Саруиния син.
23 ೨೩ ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.
Тогава цар Соломон се закле в Господа, казвайки: Така да ми направи Бог, да! и повече да притури, ако Адония не е изговорил тия думи против живота си.
24 ೨೪ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.
Сега, прочее, заклевам се в живота на Господа, Който ме утвърди и ме тури да седна на престола на баща ми Давида, и Който ми направи дом, според както се е обещал, днес непременно Адония ще бъде умъртвен.
25 ೨೫ ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.
И тъй, цар Соломон прати да изпълни заповедта му Ванаия Иодаевият син, който го нападна и той умря.
26 ೨೬ ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.
А на свещеника Авиатара царят каза: Иди в Анатот, на нивите си, защото заслужаваш смърт; но няма сега да те умъртвя, понеже ти си носил ковчега на Господа Иеова пред баща ми Давида, и понеже си страдал всичко, което е страдал и баща ми.
27 ೨೭ ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.
Така Соломон отблъсна Авиатара да не бъде свещеник Господу, за да се изпълни словото, което Господ бе говорил в Сило за Илиевия дом.
28 ೨೮ ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
И когато за това стигна слух до Иоава, (защото Иоав клонеше след Адония, ако и да не беше клонил след Авесалома), Иоав побягна в Господния шатър и се хвана за роговете на олтара.
29 ೨೯ ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಆಜ್ಞಾಪಿಸಿದನು.
И извести се на цар Соломона: Иоав побягна в Господния шатър, и ето, той е при олтара. Тогава Соломон прати Ванаия Иодевият син, като каза: Иди, нападни го.
30 ೩೦ ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ” ಎಂದು ಹೇಳಲು ಅವನು “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
И тъй, Ванаия дойде в Господния шатър та му рече: Така казва царят: Излез. А той рече: Не, но тук ще умра. И Ванаия извести на царя, казвайки: Така каза Иоав, о такъв отговор ми даде.
31 ೩೧ ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.
А царят му рече: Направи според както е рекъл; нападни го и погреби го, за да изгладиш от мене и от бащиния ми дом невинната кръв, която Иоав е пролял.
32 ೩೨ ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.
Господ ще възвърне проляната от него кръв на неговата глава, понеже той нападна двама мъже по-праведни и по-добри от него, та ги уби с меч, без да знае баща ми Давид, - Авенира Нировия син, Израилевия военачалник, и Амаса Етеровия син, Юдовия военачалник.
33 ೩೩ ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.
Така ще се възвърне кравта им на Иоавовата глава и на главата на потомството му до века; а на Давида, на потомството му, на дома му и на престола му ще бъде мир от Господа до века.
34 ೩೪ ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.
Тогава Ванаия, Иодаевият син, влезе да го нападна и го уби; и погребан бе у дома си в пустинята.
35 ೩೫ ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.
И вместо него царят постави свещеника Садока.
36 ೩೬ ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
Тогава царят прати да повикат Семея, и рече му: Построй си къща в Ерусалим и живей там и да не излезеш от там на никъде;
37 ೩೭ ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು.
защото, знай положително, че в деня, когато излезеш и преминеш потока Кедрон, непременно ще бъдеш убит; кръвта ти ще бъде на твоята глава.
38 ೩೮ ಅದಕ್ಕೆ ಶಿಮ್ಮೀಯು, “ಒಳ್ಳೇಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು” ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು.
И Семей рече на царя: Добра е думата; според както каза господарят ми царят, така ще стори слугата ти. И Семей живя в Ерусалим доволно време.
39 ೩೯ ಮೂರು ವರ್ಷಗಳಾದನಂತರ ಶಿಮ್ಮೀಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ದಾಸರು ಗತ್ ಊರಿನಲ್ಲಿರುವುದು ಶಿಮ್ಮೀಗೆ ಗೊತ್ತಾಯಿತು.
А след три години, двама от Семеевите слуги побягнаха при гетския цар Анхуса, Мааховия син; и известиха на Семея, казвайки: Ето, слугите ти са в Гет.
40 ೪೦ ಆಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟು ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.
Тогава Семей, като стана та оседла осела си, отиде в Гет при Анхуса за да потърси слугите си; и Семей отиде та доведе слугите си от Гет.
41 ೪೧ ಶಿಮ್ಮೀಯು ಯೆರೂಸಲೇಮಿನಿಂದ ಗತ್ ಊರಿಗೆ ಬಂದ ಸಂಗತಿಯು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರೆಸಿ ಅವನಿಗೆ,
И извести се на Соломона, че Семей ходил от Ерусалим в Гет и се върнал.
42 ೪೨ “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ‘ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ’ ಎಂದು ಹೇಳಿದಿಯಲ್ಲಾ.
Тогава царят прати да повикат Семея, и му рече: Не те ли заклех в Господа и те предупредих, като рекох: Знай положително, че в деня, когато излезеш и отидеш вън, где и да е, непременно ще умреш; и ти ми рече: Добра е думата, която чух?
43 ೪೩ ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ನೀನು ಯಾಕೆ ಕೈಕೊಳ್ಳಲಿಲ್ಲ” ಎಂದನು.
Защо, прочее, не опази Господната клетва и заповедта, която ти дадох?
44 ೪೪ ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
Царят още каза на Семея: Ти знаеш всичкото зло сторено на баща ми Давида, което се таи в сърцето ти; затова, Господ ще възвърне злото ти на твоята глава;
45 ೪೫ ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವು ಸ್ಥಿರವಾಗಿಯೂ ಇರಲಿ ಎಂದು ಹೇಳಿ,
а цар Соломон ще бъде благословен, и Давидовият престол утвърден пред Господа до века.
46 ೪೬ ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.
Тогава царят заповяда на Ванаия Иодаевия син; и той излезе та го нападна; и той умря. И царството се утвърди в Соломоновата ръка.

< ಅರಸುಗಳು - ಪ್ರಥಮ ಭಾಗ 2 >