< ಅರಸುಗಳು - ಪ್ರಥಮ ಭಾಗ 21 >

1 ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.
וַיְהִי אַחַר הַדְּבָרִים הָאֵלֶּה כֶּרֶם הָיָה לְנָבוֹת הַיִּזְרְעֵאלִי אֲשֶׁר בְּיִזְרְעֶאל אֵצֶל הֵיכַל אַחְאָב מֶלֶךְ שֹׁמְרֽוֹן׃
2 ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು.
וַיְדַבֵּר אַחְאָב אֶל־נָבוֹת ׀ לֵאמֹר ׀ תְּנָה־לִּי אֶֽת־כַּרְמְךָ וִֽיהִי־לִי לְגַן־יָרָק כִּי הוּא קָרוֹב אֵצֶל בֵּיתִי וְאֶתְּנָה לְךָ תַּחְתָּיו כֶּרֶם טוֹב מִמֶּנּוּ אִם טוֹב בְּעֵינֶיךָ אֶתְּנָה־לְךָ כֶסֶף מְחִיר זֶֽה׃
3 ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.
וַיֹּאמֶר נָבוֹת אֶל־אַחְאָב חָלִילָה לִּי מֵֽיהוָה מִתִּתִּי אֶת־נַחֲלַת אֲבֹתַי לָֽךְ׃
4 “ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.
וַיָּבֹא אַחְאָב אֶל־בֵּיתוֹ סַר וְזָעֵף עַל־הַדָּבָר אֲשֶׁר־דִּבֶּר אֵלָיו נָבוֹת הַיִּזְרְעֵאלִי וַיֹּאמֶר לֹֽא־אֶתֵּן לְךָ אֶת־נַחֲלַת אֲבוֹתָי וַיִּשְׁכַּב עַל־מִטָּתוֹ וַיַּסֵּב אֶת־פָּנָיו וְלֹֽא־אָכַל לָֽחֶם׃
5 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು.
וַתָּבֹא אֵלָיו אִיזֶבֶל אִשְׁתּוֹ וַתְּדַבֵּר אֵלָיו מַה־זֶּה רוּחֲךָ סָרָה וְאֵינְךָ אֹכֵל לָֽחֶם׃
6 ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು.
וַיְדַבֵּר אֵלֶיהָ כִּֽי־אֲדַבֵּר אֶל־נָבוֹת הַיִּזְרְעֵאלִי וָאֹמַר לוֹ תְּנָה־לִּי אֶֽת־כַּרְמְךָ בְּכֶסֶף אוֹ אִם־חָפֵץ אַתָּה אֶתְּנָה־לְךָ כֶרֶם תַּחְתָּיו וַיֹּאמֶר לֹֽא־אֶתֵּן לְךָ אֶת־כַּרְמִֽי׃
7 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, “ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.
וַתֹּאמֶר אֵלָיו אִיזֶבֶל אִשְׁתּוֹ אַתָּה עַתָּה תַּעֲשֶׂה מְלוּכָה עַל־יִשְׂרָאֵל קוּם אֱכָל־לֶחֶם וְיִטַב לִבֶּךָ אֲנִי אֶתֵּן לְךָ אֶת־כֶּרֶם נָבוֹת הַיִּזְרְעֵאלִֽי׃
8 ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.
וַתִּכְתֹּב סְפָרִים בְּשֵׁם אַחְאָב וַתַּחְתֹּם בְּחֹתָמוֹ וַתִּשְׁלַח הספרים סְפָרִים אֶל־הַזְקֵנִים וְאֶל־הַֽחֹרִים אֲשֶׁר בְּעִירוֹ הַיֹּשְׁבִים אֶת־נָבֽוֹת׃
9 ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ,
וַתִּכְתֹּב בַּסְּפָרִים לֵאמֹר קִֽרְאוּ־צוֹם וְהוֹשִׁיבוּ אֶת־נָבוֹת בְּרֹאשׁ הָעָֽם׃
10 ೧೦ ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.
וְהוֹשִׁיבוּ שְׁנַיִם אֲנָשִׁים בְּנֵֽי־בְלִיַּעַל נֶגְדּוֹ וִיעִדֻהוּ לֵאמֹר בֵּרַכְתָּ אֱלֹהִים וָמֶלֶךְ וְהוֹצִיאֻהוּ וְסִקְלֻהוּ וְיָמֹֽת׃
11 ೧೧ ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.
וַיַּעֲשׂוּ אַנְשֵׁי עִירוֹ הַזְּקֵנִים וְהַחֹרִים אֲשֶׁר הַיֹּֽשְׁבִים בְּעִירוֹ כַּאֲשֶׁר שָׁלְחָה אֲלֵיהֶם אִיזָבֶל כַּאֲשֶׁר כָּתוּב בַּסְּפָרִים אֲשֶׁר שָׁלְחָה אֲלֵיהֶֽם׃
12 ೧೨ ಅವರು ಉಪವಾಸವನ್ನು ಪ್ರಕಟಿಸಿ, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.
קָרְאוּ צוֹם וְהֹשִׁיבוּ אֶת־נָבוֹת בְּרֹאשׁ הָעָֽם׃
13 ೧೩ ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
וַיָּבֹאוּ שְׁנֵי הָאֲנָשִׁים בְּנֵֽי־בְלִיַּעַל וַיֵּשְׁבוּ נֶגְדּוֹ וַיְעִדֻהוּ אַנְשֵׁי הַבְּלִיַּעַל אֶת־נָבוֹת נֶגֶד הָעָם לֵאמֹר בֵּרַךְ נָבוֹת אֱלֹהִים וָמֶלֶךְ וַיֹּצִאֻהוּ מִחוּץ לָעִיר וַיִּסְקְלֻהוּ בָאֲבָנִים וַיָּמֹֽת׃
14 ೧೪ ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು.
וַֽיִּשְׁלְחוּ אֶל־אִיזֶבֶל לֵאמֹר סֻקַּל נָבוֹת וַיָּמֹֽת׃
15 ೧೫ ಆಕೆಯು ಇದನ್ನು ಕೇಳಿ ಅಹಾಬನಿಗೆ, “ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು” ಎಂದು ಹೇಳಿದಳು.
וַֽיְהִי כִּשְׁמֹעַ אִיזֶבֶל כִּֽי־סֻקַּל נָבוֹת וַיָּמֹת וַתֹּאמֶר אִיזֶבֶל אֶל־אַחְאָב קוּם רֵשׁ אֶת־כֶּרֶם ׀ נָבוֹת הַיִּזְרְעֵאלִי אֲשֶׁר מֵאֵן לָתֶת־לְךָ בְכֶסֶף כִּי אֵין נָבוֹת חַי כִּי־מֵֽת׃
16 ೧೬ ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು.
וַיְהִי כִּשְׁמֹעַ אַחְאָב כִּי מֵת נָבוֹת וַיָּקָם אַחְאָב לָרֶדֶת אֶל־כֶּרֶם נָבוֹת הַיִּזְרְעֵאלִי לְרִשְׁתּֽוֹ׃
17 ೧೭ ಆಗ ತಿಷ್ಬೀಯನಾದ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು.
וַיְהִי דְּבַר־יְהוָה אֶל־אֵלִיָּהוּ הַתִּשְׁבִּי לֵאמֹֽר׃
18 ೧೮ ಆತನು ಅವನಿಗೆ, “ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.
קוּם רֵד לִקְרַאת אַחְאָב מֶֽלֶךְ־יִשְׂרָאֵל אֲשֶׁר בְּשֹׁמְרוֹן הִנֵּה בְּכֶרֶם נָבוֹת אֲשֶׁר־יָרַד שָׁם לְרִשְׁתּֽוֹ׃
19 ೧೯ ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.
וְדִבַּרְתָּ אֵלָיו לֵאמֹר כֹּה אָמַר יְהוָה הֲרָצַחְתָּ וְגַם־יָרָשְׁתָּ וְדִבַּרְתָּ אֵלָיו לֵאמֹר כֹּה אָמַר יְהוָה בִּמְקוֹם אֲשֶׁר לָקְקוּ הַכְּלָבִים אֶת־דַּם נָבוֹת יָלֹקּוּ הַכְּלָבִים אֶת־דָּמְךָ גַּם־אָֽתָּה׃
20 ೨೦ ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.
וַיֹּאמֶר אַחְאָב אֶל־אֵלִיָּהוּ הַֽמְצָאתַנִי אֹיְבִי וַיֹּאמֶר מָצָאתִי יַעַן הִתְמַכֶּרְךָ לַעֲשׂוֹת הָרַע בְּעֵינֵי יְהוָֽה׃
21 ೨೧ ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.
הִנְנִי מבי מֵבִיא אֵלֶיךָ רָעָה וּבִעַרְתִּי אַחֲרֶיךָ וְהִכְרַתִּי לְאַחְאָב מַשְׁתִּין בְּקִיר וְעָצוּר וְעָזוּב בְּיִשְׂרָאֵֽל׃
22 ೨೨ ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು’ ಅನ್ನುತ್ತಾನೆ
וְנָתַתִּי אֶת־בֵּיתְךָ כְּבֵית יָרָבְעָם בֶּן־נְבָט וּכְבֵית בַּעְשָׁא בֶן־אֲחִיָּה אֶל־הַכַּעַס אֲשֶׁר הִכְעַסְתָּ וַֽתַּחֲטִא אֶת־יִשְׂרָאֵֽל׃
23 ೨೩ ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು.
וְגַם־לְאִיזֶבֶל דִּבֶּר יְהוָה לֵאמֹר הַכְּלָבִים יֹאכְלוּ אֶת־אִיזֶבֶל בְּחֵל יִזְרְעֶֽאל׃
24 ೨೪ ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು’ ಎಂದು ಹೇಳುತ್ತಾನೆ” ಅಂದನು.
הַמֵּת לְאַחְאָב בָּעִיר יֹאכְלוּ הַכְּלָבִים וְהַמֵּת בַּשָּׂדֶה יֹאכְלוּ עוֹף הַשָּׁמָֽיִם׃
25 ೨೫ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.
רַק לֹֽא־הָיָה כְאַחְאָב אֲשֶׁר הִתְמַכֵּר לַעֲשׂוֹת הָרַע בְּעֵינֵי יְהוָה אֲשֶׁר־הֵסַתָּה אֹתוֹ אִיזֶבֶל אִשְׁתּֽוֹ׃
26 ೨೬ ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.
וַיַּתְעֵב מְאֹד לָלֶכֶת אַחֲרֵי הַגִּלֻּלִים כְּכֹל אֲשֶׁר עָשׂוּ הָאֱמֹרִי אֲשֶׁר הוֹרִישׁ יְהוָה מִפְּנֵי בְּנֵי יִשְׂרָאֵֽל׃
27 ೨೭ ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.
וַיְהִי כִשְׁמֹעַ אַחְאָב אֶת־הַדְּבָרִים הָאֵלֶּה וַיִּקְרַע בְּגָדָיו וַיָּֽשֶׂם־שַׂק עַל־בְּשָׂרוֹ וַיָּצוֹם וַיִּשְׁכַּב בַּשָּׂק וַיְהַלֵּךְ אַֽט׃
28 ೨೮ ಆದುದರಿಂದ ಯೆಹೋವನು ತಿಷ್ಬೀಯನಾದ ಎಲೀಯನಿಗೆ, “ಅಹಾಬನು ನನ್ನ ಮುಂದೆ ತಗ್ಗಿಸಿಕೊಂಡಿದ್ದನ್ನು ಕಂಡಿಯಾ?
וֽ͏ַיְהִי דְּבַר־יְהוָה אֶל־אֵלִיָּהוּ הַתִּשְׁבִּי לֵאמֹֽר׃
29 ೨೯ ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.
הֲ‍ֽרָאִיתָ כִּֽי־נִכְנַע אַחְאָב מִלְּפָנָי יַעַן כִּֽי־נִכְנַע מִפָּנַי לֹֽא־אבי אָבִיא הֽ͏ָרָעָה בְּיָמָיו בִּימֵי בְנוֹ אָבִיא הָרָעָה עַל־בֵּיתֽוֹ׃

< ಅರಸುಗಳು - ಪ್ರಥಮ ಭಾಗ 21 >