< ಅರಸುಗಳು - ಪ್ರಥಮ ಭಾಗ 22 >

1 ಮೂರು ವರ್ಷಗಳ ಕಾಲ ಇಸ್ರಾಯೇಲರಿಗೂ ಅರಾಮ್ಯರಿಗೂ ಯುದ್ಧ ನಡೆಯಲಿಲ್ಲ.
Pandan twazan, pa t' gen lagè ant peyi Izrayèl ak peyi Siri.
2 ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.
Men nan twazyèm lanne a, Jozafa, wa peyi Jida a, al vizite Akab, wa peyi Izrayèl la.
3 ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.
Wa Izrayèl la di chèf li yo: -Nou konnen lavil Ramòt ki nan peyi Galarad la se pou nou li ye. Poukisa nou pa fè anyen pou nou reprann li nan men wa peyi Siri a?
4 ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
Lèfini li mande Jozafa: -Eske w'ap vin avè m' pou atake lavil Ramòt nan peyi Galarad la? Jozafa reponn li: -Mwen menm ak tout sòlda mwen yo ak kavalye mwen yo, nou avè ou ansanm ak pèp ou a: se yonn lan nou ye.
5 ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.
Apre sa, Jozafa di Akab, wa peyi Izrayèl la: -Annou mande Seyè a sa li di nan sa.
6 ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
Se konsa Akab reyini katsan (400) pwofèt li yo, li mande yo: -Eske se pou m' al atake lavil Ramòt nan peyi Galarad la, osinon èske se pou m' kite sa? Yo reponn li: -Atake l', monwa! Seyè a ap lage l' nan men ou.
7 ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.
Lè sa a, Jozafa di konsa: -Pa gen lòt pwofèt nou ta ka mande si se volonte Seyè a pou n' al fè sa vre?
8 ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.
Akab reponn: -Gen yon lòt pwofèt ankò ki ta ka fè sa pou nou. Se Miche, pitit gason Jimla a. Men, m' rayi l', paske li pa janm di anyen ki pou bon pou mwen. Li toujou wè malè pou mwen. Jozafa reponn: -Pa di sa, monchè!
9 ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
Se konsa Akab rele yonn nan nèg konfyans li yo, li di li: -Prese al chache Miche, pitit gason Jimla a, pou mwen.
10 ೧೦ ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.
Wa peyi Izrayèl la ak Jozafa, wa peyi Jida a, te chita, yo chak sou fotèy pa yo ak bèl rad wa yo sou yo, sou gwo glasi ki bò pòtay lavil Samari a sou deyò. Tout pwofèt yo te la devan yo ap bay mesaj pa yo.
11 ೧೧ ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.
Yonn ladan yo te rele Sedesyas. Se te pitit Kenana. Li fè fè de kòn an fè. Li di: -Men sa Seyè a di: Avèk kòn sa yo, ou pral atake moun Siri yo, ou pral fini ak yo.
12 ೧೨ ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
Tout lòt pwofèt yo t'ap bay menm mesaj la tou. Yo t'ap di: -Ou mèt al atake Ramòt nan peyi Galarad. W'ap bon. Seyè a ap lage lavil la nan men ou.
13 ೧೩ ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.
Mesaje ki te pati al rele Miche a di Miche konsa: -Tout lòt pwofèt yo te pale anfavè wa a. Ranje kò ou pou pale tankou yo tout. Pale anfavè wa a.
14 ೧೪ ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
Men, Miche reponn li: -Mwen pran Seyè a, Bondye vivan an, sèvi m' temwen. Sa Seyè a va di m' di se sa m'a di.
15 ೧೫ ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.
Lè Miche rive devan wa a, wa a di l' konsa: -Miche, èske se pou m' al atake lavil Ramòt nan peyi Galarad, osinon èske sè pou m' kite sa? Miche reponn: -Ou mèt al atake Ramòt nan peyi Galarad. W'ap bon. Seyè a ap lage lavil la nan men ou.
16 ೧೬ ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.
Men Akab di li: -Konbe fwa pou m' di ou lè w'ap pale avè m' nan non Seyè a se pou di m' laverite?
17 ೧೭ ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.
Lè sa a, Miche reponn li: -Mwen wè tout sòlda pèp Izrayèl yo gaye toupatou sou mòn yo, tankou yon bann mouton san gadò. Seyè a di: Moun sa yo san chèf. Kite yo tounen lakay yo ak kè poze.
18 ೧೮ ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
Akab, wa peyi Izrayèl la, di Jozafa: -Mwen pa t' di ou li pa janm di anyen ki bon pou mwen. Li toujou wè malè pou mwen.
19 ೧೯ ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
Miche pran lapawòl ankò li di: -Bon! Koute mesaj Seyè a. Mwen te wè Seyè a chita sou fotèy li nan syèl la, avèk tout zanj li yo kanpe bò kote l', sou bò dwat ak sou bò gòch li.
20 ೨೦ ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
Seyè a t'ap mande ki moun ki vle al pran tèt Akab pou l' al fè yo touye l' lavil Ramòt. Gen zanj ki di yon bagay, gen lòt zanj ki di yon lòt bagay.
21 ೨೧ ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು.
Se lè sa a, yon lespri vanse devan Seyè a, li di: Mwen pral pran tèt li.
22 ೨೨ ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
Seyè a mande l': Ki jan? Lespri a reponn: Mwen pral mete pawòl manti nan bouch pwofèt Akab yo. Seyè a di l': W'a pran tèt li vre konsa. Ou mèt al fè jan ou di a.
23 ೨೩ ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
Koulye a, ou konnen si Seyè a te mete yon lespri mantò sou pwofèt ou yo pou yo ba ou manti, se paske li pran desizyon pou l' fini avè ou.
24 ೨೪ ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು
Lè sa a, Sedesyas, pitit Kenana a, mache sou Miche, li flanke li yon souflèt. Epi li di l': -Depi kilè lespri Bondye a kite m' pou se nan bouch ou l'ap pale a?
25 ೨೫ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.
Miche reponn li: -W'a konn sa lè w'a kouri pase soti nan yon chanm antre nan yon lòt pou al kache jouk nan fon!
26 ೨೬ ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,
Se konsa, wa Akab pase yon lòd, li di: -Pran Miche. Mennen l' bay Amon, gouvènè lavil la, ak Joas, pitit wa a.
27 ೨೭ ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
Di yo mwen bay lòd pou yo mete l' nan prizon, pou yo ba li renk pen ak dlo jouk m'a tounen soti nan lagè a san danje ni malè.
28 ೨೮ ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.
Lè sa a, Miche di: -Si ou tounen soti nan lagè a san danje ni malè vre, w'a konnen Seyè a pa t' pale nan bouch mwen. Lèfini, li di: -Nou tout pèp yo, koute sa m' di la a wi!
29 ೨೯ ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು.
Se konsa Akab, wa peyi Izrayèl la ansanm ak Jozafa, wa peyi Jida a, moute al atake lavil Ramòt nan peyi Galarad.
30 ೩೦ ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.
Akab di Jozafa konsa: -Mwen pral mete yon lòt rad sou mwen anvan m' al goumen an, pou moun pa rekonèt mwen. Ou menm, ou mèt mete rad wa ou sou ou. Se konsa wa peyi Izrayèl la chanje rad sou li pou moun pa rekonèt li. Apre sa, l' al goumen.
31 ೩೧ ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.
Men, wa peyi Siri a te bay trannde chèf ki t'ap kòmande cha lagè yo pou yo pa atake pesonn pase wa peyi Izrayèl la.
32 ೩೨ ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.
Se konsa, lè kòmandan cha lagè yo wè Jozafa, yo tout te konprann se li ki te wa peyi Izrayèl la. Yo vire sou li pou atake l'. Men, Jozafa rele anmwe.
33 ೩೩ ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
Lè mesye yo tande sa, yo wè se pa t' wa peyi Izrayèl la. Yo rete sou sa yo te vle fè a.
34 ೩೪ ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
Lè sa a, yon sòlda peyi Siri a rete konsa li voye yon flèch. Flèch la al pran Akab, wa Izrayèl la, nan fant rad lagè ki te sou li a. Wa a di sòlda ki t'ap mennen cha li a: -Kase tèt tounen. Annou kite batay la, paske mwen blese grav.
35 ೩೫ ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.
Jou sa a, batay la te makònen anpil. Wa Akab menm te blije rete kanpe sou cha li a ap gade moun peyi Siri yo. San t'ap koule soti kote li te blese a, li sal tout anndan cha a. Rive aswè, li mouri.
36 ೩೬ ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು
Lè solèy pral kouche, yon vwa pran pale nan zòrèy sòlda pèp Izrayèl yo, li t'ap di: -Chak moun al nan peyi yo, chak moun al lakay yo,
37 ೩೭ ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.
paske wa a mouri. Apre sa, yo mennen kadav wa a lavil Samari. Se la yo antere l'.
38 ೩೮ ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.
Y' al lave cha wa a nan basen Samari a, kote jennès yo konn al benyen an. Chen vin niche san Akab la jan Seyè a te di sa t'ap rive a.
39 ೩೯ ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Tout rès istwa Akab la ansanm ak tou sa li te fè, bèl palè ivwa ak lavil li te bati yo, n'a jwenn tou sa ekri nan liv Istwa wa peyi Izrayèl yo.
40 ೪೦ ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.
Lè Akab mouri, se pitit li, Okozyas ki moute wa nan plas li.
41 ೪೧ ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
Akab te gen katran depi li t'ap gouvènen peyi Izrayèl la lè Jozafa, pitit Asa a, moute sou fotèy wa peyi Jida a.
42 ೪೨ ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ
Lè sa a, li te gen trannsenkan sou tèt li. Li pase vennsenkan ap gouvènen lavil Jerizalèm. Manman li te rele Azouba. Se te pitit fi Chilki.
43 ೪೩ ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.
Jozafa li menm te swiv Asa, papa l', pye pou pye nan tou sa l' te fè. Li te fè sa ki dwat devan Seyè a. Tansèlman, tanp zidòl yo te la toujou nan peyi a, kifè pèp la pa t' sispann fè sèvis, touye bèt pou zidòl yo.
44 ೪೪ ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.
Jozafa te siyen lapè ak wa peyi Izrayèl la.
45 ೪೫ ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
n'a jwenn rès istwa Jozafa a nan liv Istwa wa peyi Jida yo. Se la yo rakonte jan li te yon vanyan sòlda, ak tout lagè li te fè yo,
46 ೪೬ ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.
jan li disparèt rès gason ak fanm ki t'ap fè jennès nan kay zidòl yo toujou depi sou rèy Asa, papa l'.
47 ೪೭ ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.
(Lè sa a, pa t' gen wa nan peyi Edon. Se yon gouvènè wa Jida a te mete pou gouvènen yo.)
48 ೪೮ ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.
Jozafa te fè fè kèk gwo batiman, tankou batiman moun Tasis yo, pou al chache lò nan peyi Ofi. Men, batiman yo pa janm rive al fè vwayaj la, paske yo kraze bò Ezyongebè.
49 ೪೯ ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.
Lè sa a, Okozyas, pitit Akab la, ofri pou maren peyi Izrayèl yo ale ansanm ak maren peyi Jida yo sou batiman pa yo. Men, Jozafa derefize.
50 ೫೦ ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.
Lè Jozafa mouri, yo antere l' nan Lavil David, zansèt li a. Se pitit li, Joram, ki moute sou fotèy la nan plas li.
51 ೫೧ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.
Jozafa t'ap mache sou disetan depi li te wa peyi Jida a, lè Okozyas, pitit Akab, moute sou fotèy wa peyi Izrayèl la. Li pase dezan ap gouvènen peyi Izrayèl la lavil Samari.
52 ೫೨ ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Li fè sa ki mal nan je Seyè a. Li swiv egzanp papa l' ak manman l'. Li fè tankou Jewoboram, pitit gason Nebat la, ki te lakòz moun pèp Izrayèl yo fè sa ki mal.
53 ೫೩ ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.
Li sèvi Baal, li adore l' tankou papa l' te fè a. Se konsa li te fè Seyè a, Bondye pèp Izrayèl la, fache anpil.

< ಅರಸುಗಳು - ಪ್ರಥಮ ಭಾಗ 22 >