< ಅರಸುಗಳು - ಪ್ರಥಮ ಭಾಗ 3 >

1 ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ, ಯೆಹೋವನ ಆಲಯವನ್ನೂ ಮತ್ತು ಯೆರೂಸಲೇಮಿನ ಸುತ್ತಣ ಗೋಡೆಯನ್ನೂ ಕಟ್ಟಿ ಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲಿ ಇರಿಸಿದನು.
Sa-lô-môn kết thân với Pha-ra-ôn, vua Ai Cập và cưới con gái của ông. Ông đưa nàng về sống tại Thành Đa-vít cho đến khi cung điện, Đền Thờ của Chúa Hằng Hữu, và tường thành chung quanh Giê-ru-sa-lem cất xong.
2 ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.
Trong thời gian chờ đợi Đền Thờ của Chúa Hằng Hữu xây cất xong, dân chúng vẫn dâng tế lễ trên những đồi cao.
3 ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.
Sa-lô-môn kính yêu Chúa Hằng Hữu và vâng theo những huấn lệnh của Đa-vít, cha mình, tuy nhiên, vua vẫn tế lễ và đốt hương tại các đồi cao.
4 ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು.
Một hôm, vua đi Ga-ba-ôn dâng sinh tế, vì tại đó có một ngọn đồi nổi tiếng. Trên bàn thờ, vua dâng 1.000 sinh vật làm lễ thiêu.
5 ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,
Đêm ấy, Chúa Hằng Hữu hiện ra với Sa-lô-môn trong giấc mộng, và Đức Chúa Trời hỏi: “Con muốn điều gì? Hãy xin, Ta sẽ ban cho con!”
6 “ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.
Sa-lô-môn thưa: “Chúa đã tỏ lòng thương xót dồi dào đối với cha con là Đa-vít, vì người đã hết lòng trung thành, công bằng, và ngay thẳng trước mặt Ngài. Chúa vẫn tiếp tục thương xót, cho người có một con trai nối ngôi.
7 ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.
Bây giờ, lạy Chúa Hằng Hữu, Đức Chúa Trời của con, Chúa đã cho con làm vua kế vị Đa-vít, cha con, dù con chỉ là một đứa trẻ chưa rõ đường đi nước bước.
8 ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ.
Con đang ở giữa tuyển dân Ngài, một dân tộc quá đông đúc!
9 ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.
Vậy, xin Chúa cho con có sự hiểu biết để cai trị dân Ngài, và để biết phân biệt tốt xấu, đúng sai. Vì ai có thể tự mình cai trị nổi một dân tộc đông đảo như thế này?”
10 ೧೦ ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು.
Nghe Sa-lô-môn xin như vậy, Chúa Hằng Hữu rất hài lòng.
11 ೧೧ ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.
Đức Chúa Trời đáp: “Vì con đã không xin sống lâu, giàu sang, hoặc sinh mạng của kẻ thù, nhưng xin sự khôn ngoan để lãnh đạo dân ta trong công lý—
12 ೧೨ ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.
Ta chấp nhận điều con xin, cho con có trí khôn ngoan sáng suốt chẳng ai bằng, kể cả người đời trước và sau con.
13 ೧೩ ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.
Ta cũng cho cả những điều con không xin là giàu có và danh vọng. Trong suốt đời con, không vua nước nào sánh nổi.
14 ೧೪ ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.
Ta sẽ gia tăng năm tháng đời con nếu con theo đường lối Ta, tuân hành điều răn và luật lệ Ta như cha con, Đa-vít, đã làm.”
15 ೧೫ ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.
Sa-lô-môn thức giấc và nhận biết đó là một giấc mộng. Vua về Giê-ru-sa-lem, đứng trước Hòm Giao Ước của Chúa Hằng Hữu dâng lễ thiêu và lễ cầu an. Sau đó, vua mở tiệc khoản đãi toàn thể quần thần.
16 ೧೬ ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.
Một hôm, có hai phụ nữ mãi dâm xin vào bệ kiến vua để được phân xử.
17 ೧೭ ಅವರಲ್ಲಿ ಒಬ್ಬಳು ಅರಸನಿಗೆ, “ನನ್ನ ಒಡೆಯಾ ಕೇಳು, ನಾನು ಮತ್ತು ಈ ಹೆಂಗಸು ಒಂದೇ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು.
Một người nói: “Thưa chúa tôi. Chị này với con ở chung một nhà. Con sinh con trong nhà đó.
18 ೧೮ ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು. ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ
Sau ba ngày, chị ta cũng sinh con. Trong nhà chỉ có hai chúng con, chẳng có người nào khác.
19 ೧೯ ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು.
Đứa con của chị này chết, vì đang đêm chị ấy nằm đè lên.
20 ೨೦ ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು.
Nửa đêm, khi con đang ngủ, chị ta dậy, lấy đứa con nằm bên cạnh con mang sang bên chị ta, và đem đứa con chết của chị ta đặt vào lòng con.
21 ೨೧ ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ” ಎಂದು ಹೇಳಿದಳು.
Sáng hôm sau, khi thức dậy cho con bú, thấy con đã chết, nhưng nhìn kỹ mới biết nó không phải là con trai con của mình.”
22 ೨೨ ಆಗ ಎರಡನೆಯವಳು, “ಹಾಗಲ್ಲ, ಬದುಕಿರುವವನು ನನ್ನ ಮಗನು ಸತ್ತಿರುವವನು ನಿನ್ನ ಮಗನು” ಎಂದು ನುಡಿದಳು. ಮೊದಲನೆಯವಳು ತಿರುಗಿ, “ಅಲ್ಲ, ಸತ್ತಿರುವವನು ನಿನ್ನ ಮಗನು, ಬದುಕಿರುವವನು ನನ್ನ ಮಗನು” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.
Người đàn bà kia cãi: “Nó đúng là con chị, còn đứa sống là con tôi.” Chị thứ nhất nói: “Không. Đứa chết là con chị, đứa sống mới là con tôi.” Họ cãi qua cãi lại trước mặt vua.
23 ೨೩ ಆಗ ಅರಸನು, “ಜೀವದಿಂದಿರುವ ಕೂಸು ನನ್ನದು. ಸತ್ತಿರುವುದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ. ಇನ್ನೊಬ್ಬಳು ಅಲ್ಲ ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು ಅನ್ನುತ್ತಾಳೆ.
Vua bảo: “Chị này nói ‘Con trai tôi là đứa sống, con trai chị là đứa chết.’ Chị kia nói ‘Không, con trai chị là đứa chết, con trai tôi là đứa sống.’
24 ೨೪ ನನಗೊಂದು ಕತ್ತಿಯನ್ನು ತಂದು ಕೊಡಿರಿ” ಎಂದು ಸೇವಕರಿಗೆ ಹೇಳಿದನು.
Hãy đem cho ta một cây gươm.” Người ta dâng gươm cho vua.
25 ೨೫ ಅವರು ಕತ್ತಿಯನ್ನು ತರಲು ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗ ಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ” ಎಂದು ಅಪ್ಪಣೆ ಮಾಡಿದನು.
Vua ra lệnh: “Hãy chặt đứa con còn sống ra làm hai và cho mỗi người một nửa.”
26 ೨೬ ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರಳು ಮರುಗಿ ಅರಸನಿಗೆ, “ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ” ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ” ಎಂದು ಕೂಗಿದಳು.
Người phụ nữ thật sự là mẹ của đứa bé còn sống xót thương con, vội nói: “Xin vua đừng giết nó! Cho chị ấy đi!” Ngược lại, chị kia đáp: “Nó không thuộc về tôi, cũng không thuộc về chị. Cứ chia đôi nó đi!”
27 ೨೭ ಕೂಡಲೇ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿರಿ. ಆ ಸ್ತ್ರೀಗೆ ಕೊಡಿರಿ. ಅವಳೇ ಅದರ ತಾಯಿ” ಎಂದು ಆಜ್ಞಾಪಿಸಿದನು.
Vua ra lệnh: “Giao đứa bé còn sống ấy cho người thứ nhất. Đừng giết đứa bé, vì chị ta đúng là mẹ nó.”
28 ೨೮ ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.
Nghe vua xử án như thế, toàn dân Ít-ra-ên đều kính sợ, vì biết rằng Đức Chúa Trời cho vua trí khôn để cầm cân công lý.

< ಅರಸುಗಳು - ಪ್ರಥಮ ಭಾಗ 3 >