< ಅರಸುಗಳು - ಪ್ರಥಮ ಭಾಗ 5 >

1 ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.
Esi Tiro fia, Hiram se be wosi ami na Solomo heɖoe fiae ɖe fofoa, David teƒe la, eɖo eƒe ame dɔdɔwo ɖe Solomo elabena eya kple David wonye xɔlɔ̃ veviwo.
2 ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ,
Solomo hã ɖo du sia ɖe Hiram:
3 “ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.
“Ènya be le aʋa siwo futɔwo tso afi sia afi wɔ kple fofonye, David ta la, fofonye mete ŋu tu gbedoxɔ na Yehowa, eƒe Mawu ƒe ŋkɔ o, va se ɖe esime Yehowa tsɔ eƒe futɔwo de eƒe afɔ te.”
4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.
Fia Solomo yi edzi be, “Ke azɔ la, Yehowa, nye Mawu na ŋutifafa Israel le goawo katã me, dukɔ bubuwo meganye futɔwo nam o,
5 ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,
eya ta mele ɖoɖo wɔm be matu gbedoxɔ na Yehowa, nye Mawu, abe ale si wòɖo na fofonye be nyee atui na ye ene. Yehowa gblɔ na fofonye be, ‘Viwò si matsɔ aɖo wò fiazikpui dzi lae atu gbedoxɔ nam.’
6 ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.
“Meɖe kuku na wò be nàkpe ɖe ŋunye le dɔ sia wɔwɔ me. Ɖo wò atitsolawo ɖe Lebanon towo dzi be woatso sedatiwo nam. Maɖo nye amewo ɖa woawɔ dɔ kple tɔwòwo. Maxe fe ɖe sia ɖe si nàbia la na wò amewo. Wò ŋutɔ ènya be ame aɖeke mele Israel si ate ŋu adze ati abe Sidontɔwo ene o!”
7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.
Hiram kpɔ dzidzɔ le Solomo ƒe nya siawo ŋu. Egblɔ be, “Woakafu Yehowa be wòna vi nyanu aɖe David be wòaɖu fia ɖe Israel dukɔ gã la dzi.”
8 ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.
Egblɔ ɖo ɖe Solomo be, “Mese wò nyawo eye mawɔ nu si nèbia. Mate ŋu ana sedati kple sesewuti siaa wò hena xɔa tutu.
9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.
Nye amewo atsɔ atiawo tso Lebanon towo dzi ava da ɖe domeƒu la nu. Woakpe wo ale be míada wo ɖe atsiaƒua dzi, woato ƒugo la ŋu ayi afi si nàhiã wo le. Ekema míakaka wo atsɔ wo na wò ɖekaɖekae. Fetu si nàxe lae nye be nàdi nuɖuɖu na nye amewo.”
10 ೧೦ ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.
Ale Hiram tsɔ sedati kple sesewuti ƒe agbɔsɔsɔ si Solomo ahiã la nɛ
11 ೧೧ ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.
eye abe fetu ene la, Solomo ɖoa lu dzidzenu akpe alafa ɖeka blaeve vɔ atɔ̃ kple ami galɔn blasiekɛ-vɔ-ade ɖe Hiram ƒe sia ƒe.
12 ೧೨ ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು.
Ale Yehowa na nunya Solomo abe ale si wòdo ŋugbe nɛ ene. Hiram kple Solomo bla nu kple wo nɔewo hena ŋutifafa.
13 ೧೩ ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.
Solomo ƒo dɔwɔla akpe blaetɔ̃ nu ƒu tso Israelnyigba blibo la dzi.
14 ೧೪ ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.
Eɖoa ame akpe ewo ɖe Lebanon wonɔa afi ma ɣleti ɖeka ale ame sia ame nɔa Lebanon ɣleti ɖeka eye wònɔa aƒe ɣleti eve. Dɔwɔlawo dzikpɔlae nye Adoniram.
15 ೧೫ ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.
Dɔwɔla bubu akpe blaadre kple kpekpala akpe blaenyi hã nɔ Solomo si le tonyigba la dzi,
16 ೧೬ ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.
hekpe ɖe dɔdzikpɔla akpe etɔ̃ alafa etɔ̃ ŋu.
17 ೧೭ ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.
Kpekpalawo ku kpe gãwo le kpekuƒewo eye wokpa wo wozu gbedoxɔ la ƒe gɔmeɖokpewo.
18 ೧೮ ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.
Wogblẽ ga geɖe le dɔ sia wɔwɔ me. Amewo tso Gebal va kpe ɖe Solomo kple Hiram ƒe xɔtulawo ŋu le atidzedze kple kpekpakpa na gbedoxɔ la me.

< ಅರಸುಗಳು - ಪ್ರಥಮ ಭಾಗ 5 >