< ಅರಸುಗಳು - ಪ್ರಥಮ ಭಾಗ 6 >
1 ೧ ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.
१इस्राएलियों के मिस्र देश से निकलने के चार सौ अस्सीवें वर्ष के बाद जो सुलैमान के इस्राएल पर राज्य करने का चौथा वर्ष था, उसके जीव नामक दूसरे महीने में वह यहोवा का भवन बनाने लगा।
2 ೨ ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಮೂವತ್ತು ಮೊಳ.
२जो भवन राजा सुलैमान ने यहोवा के लिये बनाया उसकी लम्बाई साठ हाथ, चौड़ाई बीस हाथ और ऊँचाई तीस हाथ की थी।
3 ೩ ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ.
३और भवन के मन्दिर के सामने के ओसारे की लम्बाई बीस हाथ की थी, अर्थात् भवन की चौड़ाई के बराबर थी, और ओसारे की चौड़ाई जो भवन के सामने थी, वह दस हाथ की थी।
4 ೪ ಇದಲ್ಲದೆ ಅವನು ಆಲಯಕ್ಕೆ ತೆರೆಯಲಾರದ ಜಾಲರಿಗಳುಳ್ಳ ಕಿಟಿಕಿಗಳನ್ನಿರಿಸಿದನು.
४फिर उसने भवन में चौखट सहित जालीदार खिड़कियाँ बनाईं।
5 ೫ ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.
५और उसने भवन के आस-पास की दीवारों से सटे हुए अर्थात् मन्दिर और दर्शन-स्थान दोनों दीवारों के आस-पास उसने मंजिलें और कोठरियाँ बनाई।
6 ೬ ಕೆಳಗಿನ ಕೊಠಡಿಗಳ ಅಗಲವು ಐದು ಮೊಳ. ಮೊದಲನೆಯ ಅಂತಸ್ತುಗಳ ಕೊಠಡಿಗಳ ಅಗಲವು ಆರು ಮೊಳ. ಎರಡನೆಯ ಅಂತಸ್ತುಗಳ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಗಳಲ್ಲಿ ತೂತಾಗಬಾರದು ಎಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.
६सबसे नीचेवाली मंजिल की चौड़ाई पाँच हाथ, और बीचवाली की छः हाथ, और ऊपरवाली की सात हाथ की थी, क्योंकि उसने भवन के आस-पास दीवारों को बाहर की ओर कुर्सीदार बनाया था इसलिए कि कड़ियाँ भवन की दीवारों को पकड़े हुए न हों।
7 ೭ ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.
७बनाते समय भवन ऐसे पत्थरों का बनाया गया, जो वहाँ ले आने से पहले गढ़कर ठीक किए गए थे, और भवन के बनते समय हथौड़े, बसूली या और किसी प्रकार के लोहे के औज़ार का शब्द कभी सुनाई नहीं पड़ा।
8 ೮ ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.
८बाहर की बीचवाली कोठरियों का द्वार भवन की दाहिनी ओर था, और लोग चक्करदार सीढ़ियों पर होकर बीचवाली कोठरियों में जाते, और उनसे ऊपरवाली कोठरियों पर जाया करते थे।
9 ೯ ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.
९उसने भवन को बनाकर पूरा किया, और उसकी छत देवदार की कड़ियों और तख्तों से बनी थी।
10 ೧೦ ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.
१०और पूरे भवन से लगी हुई जो मंजिलें उसने बनाईं वह पाँच हाथ ऊँची थीं, और वे देवदार की कड़ियों के द्वारा भवन से मिलाई गई थीं।
11 ೧೧ ಯೆಹೋವನು ಸೊಲೊಮೋನನಿಗೆ ಈ ಮಾತುಗಳನ್ನು ತಿಳಿಸಿದನು.
११तब यहोवा का यह वचन सुलैमान के पास पहुँचा,
12 ೧೨ “ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
१२“यह भवन जो तू बना रहा है, यदि तू मेरी विधियों पर चलेगा, और मेरे नियमों को मानेगा, और मेरी सब आज्ञाओं पर चलता हुआ उनका पालन करता रहेगा, तो जो वचन मैंने तेरे विषय में तेरे पिता दाऊद को दिया था उसको मैं पूरा करूँगा।
13 ೧೩ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು” ಎಂದು ಹೇಳಿದನು.
१३और मैं इस्राएलियों के मध्य में निवास करूँगा, और अपनी इस्राएली प्रजा को न तजूँगा।”
14 ೧೪ ಸೊಲೊಮೋನನು ದೇವಾಲಯವನ್ನು ಕಟ್ಟಿಸಿ ಮುಗಿಸಿದನು.
१४अतः सुलैमान ने भवन को बनाकर पूरा किया।
15 ೧೫ ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.
१५उसने भवन की दीवारों पर भीतर की ओर देवदार की तख्ताबंदी की; और भवन के फर्श से छत तक दीवारों पर भीतर की ओर लकड़ी की तख्ताबंदी की, और भवन के फर्श को उसने सनोवर के तख्तो से बनाया।
16 ೧೬ ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.
१६और भवन के पीछे की ओर में भी उसने बीस हाथ की दूरी पर फर्श से ले दीवारों के ऊपर तक देवदार की तख्ताबंदी की; इस प्रकार उसने परमपवित्र स्थान के लिये भवन की एक भीतरी कोठरी बनाई।
17 ೧೭ ದೇವಾಲಯದ ಪರಿಶುದ್ಧ ಸ್ಥಳ ಎನ್ನಿಸಿಕೊಳ್ಳುವ ಮುಂದಿನ ಭಾಗವು ನಲ್ವತ್ತು ಮೊಳ ಉದ್ದವಿತ್ತು.
१७उसके सामने का भवन अर्थात् मन्दिर की लम्बाई चालीस हाथ की थी।
18 ೧೮ ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.
१८भवन की दीवारों पर भीतर की ओर देवदार की लकड़ी की तख्ताबंदी थी, और उसमें कलियाँ और खिले हुए फूल खुदे थे, सब देवदार ही था: पत्थर कुछ नहीं दिखाई पड़ता था।
19 ೧೯ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.
१९भवन के भीतर उसने एक पवित्रस्थान यहोवा की वाचा का सन्दूक रखने के लिये तैयार किया।
20 ೨೦ ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.
२०और उस पवित्रस्थान की लम्बाई, चौड़ाई और ऊँचाई बीस-बीस हाथ की थी; और उसने उस पर उत्तम सोना मढ़वाया और वेदी की तख्ताबंदी देवदार से की।
21 ೨೧ ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.
२१फिर सुलैमान ने भवन को भीतर-भीतर शुद्ध सोने से मढ़वाया, और पवित्रस्थान के सामने सोने की साँकलें लगाई; और उसको भी सोने से मढ़वाया।
22 ೨೨ ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.
२२और उसने पूरे भवन को सोने से मढ़वाकर उसका काम पूरा किया। और पवित्रस्थान की पूरी वेदी को भी उसने सोने से मढ़वाया।
23 ೨೩ ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.
२३पवित्रस्थान में उसने दस-दस हाथ ऊँचे जैतून की लकड़ी के दो करूब बना रखे।
24 ೨೪ ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು.
२४एक करूब का एक पंख पाँच हाथ का था, और उसका दूसरा पंख भी पाँच हाथ का था, एक पंख के सिरे से, दूसरे पंख के सिरे तक लम्बाई दस हाथ थी।
25 ೨೫ ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳವಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು.
२५दूसरा करूब भी दस हाथ का था; दोनों करूब एक ही नाप और एक ही आकार के थे।
26 ೨೬ ಅವೆರಡು ಹತ್ತತ್ತು ಮೊಳ ಎತ್ತರವಾಗಿದ್ದವು.
२६एक करूब की ऊँचाई दस हाथ की, और दूसरे की भी इतनी ही थी।
27 ೨೭ ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.
२७उसने करूबों को भीतरवाले स्थान में रखवा दिया; और करूबों के पंख ऐसे फैले थे, कि एक करूब का एक पंख, एक दीवार से, और दूसरे का दूसरा पंख, दूसरी दीवार से लगा हुआ था, फिर उनके दूसरे दो पंख भवन के मध्य में एक दूसरे को स्पर्श करते थे।
28 ೨೮ ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು.
२८उसने करूबों को सोने से मढ़वाया।
29 ೨೯ ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.
२९उसने भवन की दीवारों पर बाहर और भीतर चारों ओर करूब, खजूर के वृक्ष और खिले हुए फूल खुदवाए।
30 ೩೦ ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.
३०भवन के भीतर और बाहरवाली कोठरी के फर्श उसने सोने से मढ़वाए।
31 ೩೧ ಗರ್ಭಗೃಹದ ಬಾಗಿಲಿಗೆ ಎಣ್ಣೇ ಮರದ ಬಾಗಿಲುಗಳನ್ನು ಇಡಿಸಿದನು. ಚೌಕಟ್ಟು ಪಂಚಕೋನಗಳಿಂದ ಕೂಡಿತ್ತು.
३१पवित्रस्थान के प्रवेश-द्वार के लिये उसने जैतून की लकड़ी के दरवाजे लगाए और चौखट के सिरहाने और बाजुओं की बनावट पंचकोणीय थी।
32 ೩೨ ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.
३२दोनों किवाड़ जैतून की लकड़ी के थे, और उसने उनमें करूब, खजूर के वृक्ष और खिले हुए फूल खुदवाए और सोने से मढ़ा और करूबों और खजूरों के ऊपर सोना मढ़वा दिया गया।
33 ೩೩ ಇದಲ್ಲದೆ ಅವನು ಪರಿಶುದ್ಧ ಸ್ಥಳದ ಬಾಗಿಲಿಗೆ ಎಣ್ಣೇ ಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ
३३इसी की रीति उसने मन्दिर के प्रवेश-द्वार के लिये भी जैतून की लकड़ी के चौखट के बाजू बनाए, ये चौकोर थे।
34 ೩೪ ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.
३४दोनों दरवाजे सनोवर की लकड़ी के थे, जिनमें से एक दरवाजे के दो पल्ले थे; और दूसरे दरवाजे के दो पल्ले थे जो पलटकर दुहर जाते थे।
35 ೩೫ ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು.
३५उन पर भी उसने करूब और खजूर के वृक्ष और खिले हुए फूल खुदवाए और खुदे हुए काम पर उसने सोना मढ़वाया।
36 ೩೬ ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.
३६उसने भीतरवाले आँगन के घेरे को गढ़े हुए पत्थरों के तीन रद्दे, और एक परत देवदार की कड़ियाँ लगाकर बनाया।
37 ೩೭ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.
३७चौथे वर्ष के जीव नामक महीने में यहोवा के भवन की नींव डाली गई।
38 ೩೮ ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.
३८और ग्यारहवें वर्ष के बूल नामक आठवें महीने में, वह भवन उस सब समेत जो उसमें उचित समझा गया बन चुका। इस रीति सुलैमान को उसके बनाने में सात वर्ष लगे।