< ಅರಸುಗಳು - ಪ್ರಥಮ ಭಾಗ 9 >
1 ೧ ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,
१शलमोनाने परमेश्वराचे मंदिर आणि राजमहाल यांचे काम पूर्ण केले, व त्याच्या मनात जे होते त्याप्रमाणे त्याने केले.
2 ೨ ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.
२यापूर्वी गिबोनामध्ये परमेश्वराने शलमोनाला दर्शन दिले होते. त्याप्रमाणे पुन्हा दुसऱ्यांदा परमेश्वराने त्यास दर्शन दिले.
3 ೩ ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.
३परमेश्वर त्यास म्हणाला, “मी तुझी प्रार्थना ऐकली. तू मला केलेली विनंती ऐकली. तू हे मंदिर बांधलेस. मी आता ते स्थान पवित्र केले आहे. येथे माझा निरंतर सन्मान होत राहील. हे स्थानाकडे माझे मन व दृष्टी सतत राहील.
4 ೪ ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ,
४तुझे वडिल दावीद यांच्या प्रमाणेच चांगल्या मनाने व सरळतेने तू माझ्यासमोर चाललास व माझ्या आज्ञा नियम पाळल्यास,
5 ೫ ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. ‘ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು’ ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
५तर तुझ्या घराण्यातील व्यक्तीच नेहमी इस्राएलाच्या राजासनावर येईल. तुझे वडिल दावीद याला मी तसे वचन दिले होते. त्यांच्या वंशजांची सत्ता इस्राएलावरून कधीच खुटंणार नाही.
6 ೬ ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ
६पंरतु तू किंवा तुझ्या मुलाबाळांनी हा मार्ग सोडला व माझ्या आज्ञांचे पालन केले नाही, तुम्ही इतर दैवतांच्या भजनी लागलात,
7 ೭ ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.
७तर मात्र मी दिलेल्या या भूमीतून इस्राएलांना हुसकावून लावीन. इतर लोकात तुम्ही निंदेचा विषय होणार. हे मंदिर मी माझ्या नावासाठी पवित्र केले आहे. पण माझे आज्ञापालन केले नाहीतर ते मी नजरेआड करीन.
8 ೮ ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
८हे मंदिर नामशेष होईल; ते पाहणारे स्तंभित होतील आणि म्हणतील, ‘परमेश्वराने या देशाचा आणि या मंदिराचे असे का केले बरे?’
9 ೯ ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು.
९यावर इतर जण सांगतील, याला कारण या लोकांनी परमेश्वर देवाच्या त्याग केला. परमेश्वराने यांच्या पूर्वजांना मिसरमधून सोडवले. पण या लोकांनी इतर देव आपलेसे केले. त्या दैवतांच्या हे भजनी लागले. म्हणून परमेश्वराने हे अरिष्ट त्यांच्यावर आणले.”
10 ೧೦ ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.
१०परमेश्वराचे मंदिर आणि महाल या दोन्हींचे बांधकाम पूर्ण होण्यास राजा शलमोनाला वीस वर्षे लागली.
11 ೧೧ ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
११त्यानंतर शलमोनाने सोराचा (तायर) राजा हिराम याला गालील प्रांतातील वीस नगरे दिली. कारण हिरामने मंदिर व राजमहाल या दोन्हीच्या बांधकामांमध्ये शलमोनला खूप मदत केली होती. देवदार, गंधसरुचे लाकूड तसेच सोनेही हिरामने शलमोनाला लागेल तसे पुरवले होते.
12 ೧೨ ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.
१२शलमोनाने हिराम सोराहून (तायर) ही नगरे पाहण्यासाठी म्हणून आला. पण त्यास ती तितकीशी पसंत पडली नाहीत.
13 ೧೩ ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?” ಎಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.
१३राजा हिराम म्हणाला, “माझ्या बंधो काय ही नगरे तू मला दिलीस?” या भूभागाला हिरामने काबूल प्रांत असे नाव दिले. आजही तो भाग काबूल म्हणूनच ओळखला जातो.
14 ೧೪ ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು.
१४हिरामने राजा शलमोनाला मंदिराच्या बांधकामासाठी एकशें विस किक्कार सोने पाठवले होते.
15 ೧೫ ಸೊಲೊಮೋನನ ಬಿಟ್ಟೀ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.
१५शलमोन राजाने परमेश्वराचे मंदिर आणि महाल यांच्या बांधकामासाठी वेठबिगारीवर मजूर लावले होते. त्यांच्याकडून राजाने आणखीही वास्तू बांधून घेतल्या. मिल्लो, यरूशलेम सभोवतीचा कोट तसेच हासोर, मगिद्दो व गेजेर या नगरांची पुनर्बांधणी त्याने करवून घेतली.
16 ೧೬ ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು.
१६मिसरच्या फारो राजाने पूर्वी गेजेर हे शहर युध्दात घेऊन मग ते जाळून टाकले होते. तेथे राहणाऱ्या कनानी लोकांस त्याने ठार केले होते. या फारोच्या मुलीशी शलमोनाने लग्न केले होते. तेव्हा फाराने हे नगरही शलमोनाला लग्नातील आहेरादाखल दिले होते.
17 ೧೭ ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್,
१७शलमोनाने गेजेराखालचे बेथ-होरोनही पुन्हा बांधले.
18 ೧೮ ಯೆಹೂದದ ಅರಣ್ಯಪ್ರದೇಶದಲ್ಲಿರುವ ಬಾಲಾತ್ ಮತ್ತು ತಾಮಾರ್,
१८तसेच बालाथ, तामार ही वाळवंटातील नगरे बांधली,
19 ೧೯ ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.
१९शलमोनाने अन्नधान्य आणि इतर वस्तूंची गोदामे, त्याचे रथ आणि घोडे यांच्यासाठी वेगळ्या जागा बांधल्या. यरूशलेमामध्ये, लबानोनात आणि आपल्या अधिपत्याखालील इतर प्रदेशात जे जे त्यास हवे ते ते बांधले.
20 ೨೦ ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ,
२०इस्राएल लोकांखेरीज त्या प्रदेशात अमोरी, हित्ती, परिज्जी, हिव्वी, यबूसी हेही लोक होते.
21 ೨೧ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.
२१इस्राएल लोकांस त्यांचा पाडाव करता आलेला नव्हता. पण शलमोनाने त्यांना आपले गुलाम केले. आजही त्यांची स्थिती तशीच आहे.
22 ೨೨ ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
२२इस्राएल लोकांस मात्र शलमोनाने आपले गुलाम केले नाही. इस्राएली लोक सैनिक, सरकारी अधिकारी, कारभारी, सरदार, रथाधिपती आणि चालक अशा पदांवर होते.
23 ೨೩ ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.
२३शलमोनाने हाती घेतलेल्या कामांवर साडेपाचशे अधीक्षक होते. मजूरांवर ते देखरेख करीत.
24 ೨೪ ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.
२४फारोची कन्या आपला महाल पूर्ण झाल्यावर दावीद नगरातून तेथे राहायला गेली. नंतर शलमोनाने मिल्लो बांधले.
25 ೨೫ ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.
२५शलमोन वर्षातून तीनदा वेदीवर होमबली आणि शांत्यर्पण करीत असे. ही वेदी त्याने परमेश्वरासाठी बांधली होती. तो परमेश्वरापुढे धूपही जाळीत असे. तसेच मंदिरासाठी लागणाऱ्या वस्तू पुरवत असे.
26 ೨೬ ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
२६एसयोन-गेबेर येथे शलमोन राजाने गलबतेही बांधली. हे नगर अदोम देशात तांबड्या समुद्राच्या काठी एलोथजवळ आहे.
27 ೨೭ ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.
२७समुद्राबद्दल चांगली जाण असलेले लोक राजा हिरामच्या पदरी होते. हे खलाशी बरेचदा समुद्रावर जात. हिरामने त्यांना शलमोनाच्या आरमारात, शलमोनाच्या खलाश्यांबरोबर पाठवले.
28 ೨೮ ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.
२८शलमोनाची गलबते ओफिर येथे गेली आणि त्यांनी तेथून चारशे वीस किक्कार सोने शलमोन राजाकडे आणले.