< ಪೇತ್ರನು ಬರೆದ ಮೊದಲನೆಯ ಪತ್ರಿಕೆ 3 >
1 ೧ ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.
Ngokunjalo, bafazi zehliseni kubomkenu ukuze kuthi lanxa abanye babo bengalikholwa ilizwi, baphenduke ngokuziphatha kwabomkabo kungekho kukhuluma,
lapho bebona ukuhlanzeka lenhlonipho yokuphila kwenu.
3 ೩ ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.
Ubuhle benu kabungaveli ekuziceciseni kwangaphandle, okunjengenwele ezelukiweyo lokugqiza izigqizo zegolide kanye lokugqoka izigqoko ezinhle.
4 ೪ ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.
Kodwa kumele bube ngobangaphakathi kwenu, ubuhle obungapheliyo bomoya omnene lothuleyo, oligugu elikhulu emehlweni kaNkulunkulu.
5 ೫ ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.
Ngoba le yiyo indlela abesifazane abangcwele bakudala ababethembe uNkulunkulu bejayele ukuzicola ngayo. Babezehlisa kubomkabo,
6 ೬ ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.
njengoSara owalalela u-Abhrahama wambiza ngokuthi yinkosi yakhe. Lingamadodakazi kaSara nxa lisenza okulungileyo njalo lingavumeli ukwesaba.
7 ೭ ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
Ngokufanayo, madoda ekuphileni kwenu labomkenu wobani lozwelo, libaphathe ngenhlonipho njengababuthakathaka labazindlalifa kanye lani zesipho sokuphila esomusa, ukuze kungabi lalutho oluzavimbela imikhuleko yenu.
8 ೮ ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.
Okokucina lonke hlalisanani ngokuthula; wobani lozwelo, lithandane njengabazalwane, libe lesihawu kanye lokuthobeka.
9 ೯ ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.
Lingaphindiseli okubi ngokubi loba inhlamba ngenhlamba, kodwa ngesibusiso, ngoba labizelwa ukuze lizuze ilifa lokubusiswa.
10 ೧೦ ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.
Ngoba, “Lowo othanda ukuphila abone lensuku ezinhle kumele anqande ulimi lwakhe kokubi lezindebe zakhe ekukhulumeni inkohliso.
11 ೧೧ ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.
Kumele batshiye ububi benze okulungileyo; kumele bafune ukuthula njalo bakunxwanele.
12 ೧೨ ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”
Ngoba amehlo kaThixo akhangele abalungileyo lezindlebe zakhe ziyezwa, imikhuleko yabo, kodwa ubuso bukaJehova bumelana lalabo abenza okubi.”
13 ೧೩ ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
Ngubani ozalilimaza nxa litshisekela ukwenza okulungileyo na?
14 ೧೪ ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.
Kodwa lanxa lingahlupheka ngenxa yokulungileyo, libusisekile. “Lingakwesabi lokho abakwesabayo; kalingethuswa.”
15 ೧೫ ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.
Kodwa yamukelani uKhristu ezinhliziyweni zenu njengeNkosi engcwele. Hlalani lilungele ukuphendula loba ngubani olibuza isizatho ngethemba elilalo.
16 ೧೬ ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.
Kodwa lokhu kwenzeni ngobumnene langenhlonipho, lilesazela esihle, ukuze kuthi labo abakhuluma okubi ngokuziphatha kwenu okuhle kuKhristu bayangeke ngokuhlambaza kwabo.
17 ೧೭ ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.
Ngoba kungcono nxa kuyintando kaNkulunkulu, ukuhlupheka ngenxa yokwenza okulungileyo kulokwenza okubi.
18 ೧೮ ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
Ngoba uKhristu wafela izono zenu kwaba kanye, olungileyo efela abangalunganga, ukuze alise kuNkulunkulu. Wabulawa emzimbeni, kodwa wavuswa nguMoya,
19 ೧೯ ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು.
wahamba ngaye wayatshumayela emimoyeni eyayisentolongweni yona
20 ೨೦ ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.
engalalelanga kudala lapho uNkulunkulu alinda khona ngokubekezela ensukwini zikaNowa umkhumbi usakhiwa. Phakathi kwawo abantu abalutshwana nje kuphela, abayisificaminwembili bebonke, basindiswa ngamanzi,
21 ೨೧ ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.
njalo amanzi la afanekisa umbhaphathizo osusilisa lani futhi, kungayisikho kususa ingcekeza emzimbeni kodwa kuyisibambiso sesazela esihle kuNkulunkulu. Siyalisilisa ngokuvuka kwabafileyo kukaJesu Khristu,
22 ೨೨ ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.
oseye ezulwini njalo usesandleni sokunene sikaNkulunkulu, lezingilosi, leziphathamandla kanye lezikhulu ekuzehliseni kuye.