< ಪೇತ್ರನು ಬರೆದ ಮೊದಲನೆಯ ಪತ್ರಿಕೆ 4 >
1 ೧ ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.
Hessa gisho, Kiristtoosi ba ashuwan nuus waayettida gisho hintteka he qofan hinttena danccisidi minnidi eqqite. Kiristtoosa gisho gidi ba ashuwan waaye ekkida uray nagara oothike gidi qanxida asi.
2 ೨ ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.
He uray ba attida laythan Xoossaa shene oothanaw koyeesippe attin iita asho amon deenna.
3 ೩ ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.
Kase hintte ammanonna asay de7idayssada de7ideta. Hintte iita amon, laymatethan, mathon, tunatethi denthethiya yethan, pokkiya eeqa goynnon kase de7ida duussay gidana.
4 ೪ ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.
Ammanonna asaara hintte shori baynna oosuwa oothonna gisho malaalettidi hinttena cayoosona.
5 ೫ ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು.
Shin entti paxata bollanne hayqqida asaa bolla pirddanaw de7iya Xoossaas zaaro immana.
6 ೬ ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು.
Hayqqida asaas Wonggelay sabbakettiday hayssa gishossa. Entti asatho bantta ashuwan pirddettana qassi bantta ayyaanan Xoossaatho de7on daana.
7 ೭ ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.
Hiza, ubbabaas wurssethay matattis. Hessa gisho, woossanaw dandda7ettana mela woppu gida wozani de7o; maarara de7ite.
8 ೮ ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
Siiqoy daro nagara kammiya gisho, ubbaafe aathidi issoy issuwara wozanappe siiqetite.
9 ೯ ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
Zuuzummonna issoy issuwa imathatethan mokkite.
10 ೧೦ ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.
Hintte Xoossaafe dumma dumma aadho keehatethaa imota ekkidayssada hintte issoy issoy he imuwa bessiyada oykkidi issoy issuwa haggaazite.
11 ೧೧ ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್. (aiōn )
Yesuus Kiristtoosa baggara ubbaban Xoossay galatettana mela oonikka odiyabaa gidikko Xoossaafe qaala ekkidaada odo. Qassi oonikka maaddiyabaa gidikko Xoossay iyaw immiya wolqqaada maaddo. Bonchchoynne wolqqay merinaappe merinaa gakkanaw iyaw gido. Amin7i. (aiōn )
12 ೧೨ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.
Ta baggatoo, hintte tamada xuuggiya waaye paaciya giddora aadhdhiya wode oorathabay hanidaada malaalettofite.
13 ೧೩ ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ
Shin iya bonchchoy qoncciya wode hintte ufayssay gita gidana mela Kiristtoosa waayiya hintte ekkeyssan ufayttite.
14 ೧೪ ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.
Kiristtoosa sunthaa gisho asi hinttena cayaa wode, Xoossaa bonchcho Ayyaanay hintte bolla shemppiya gisho hintte anjjettidayssata.
15 ೧೫ ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.
Hinttefe waaye ekkiya oonikka shemppo wodhidaada woykko kaysotidaada woykko iita oothidaada woykko gelssonnaban gelidaada hanidi waayettofo.
16 ೧೬ ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.
Gidoshin, ammano gisho waayettiko Kiristtoosa sunthaa gisho Xoossaa galatoppe attin yeellatoppo.
17 ೧೭ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?
Pirddi Xoossaa asaa bolla doomettiya wodey gakkis. Hiza, he pirdday koyro nu bolla doomiyabaa gidikko, Xoossaa Wonggelaas Kiitettonna asaa wurssethay ay gidanee?
18 ೧೮ ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ?
Xilloy un77an attiyaabaa gidikko, makkalanchchoynne nagaranchchoy yaatin waananee?
19 ೧೯ ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.
Hessa gisho, Xoossaa sheneda waaye ekkeyssati bantta shemppuwa hadaraa banttana medhdhida, ammanthiya Xoossaas immishe lo77obaa ootho.