< ಪೇತ್ರನು ಬರೆದ ಮೊದಲನೆಯ ಪತ್ರಿಕೆ 5 >
1 ೧ ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
Zuwa ga dattawan da suke cikinku, ina roƙo a matsayin ɗan’uwanku dattijo, mashaidin shan wahalar Kiristi wanda kuma shi ma zai sami rabo cikin ɗaukakar da za a bayyana.
2 ೨ ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.
Ku zama makiyayan garken Allah da yake a ƙarƙashin kulawarku, kuna hidima kamar masu kula, ba kan dole ba, sai dai da yardar rai, yadda Allah yake so ku zama; ban da kwaɗayin kuɗi, sai dai marmarin yin hidima;
3 ೩ ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
ban da nuna iko a kan waɗanda aka danƙa muku amana, sai dai ku zama gurbi ga garken.
4 ೪ ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.
Sa’ad da kuwa Babban Makiyayin ya bayyana, za ku karɓi rawanin ɗaukaka marar koɗewa.
5 ೫ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”
Samari, ku ma, ku yi biyayya ga waɗanda suka girme ku. Dukanku, ku yafa sauƙinkai ga juna, domin, “Allah yana gāba da mai girman kai, amma yakan yi alheri ga mai sauƙinkai.”
6 ೬ ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.
Saboda haka, ku ƙasƙantar da kanku a ƙarƙashin hannun Allah mai ƙarfi, don yă ɗaukaka ku a lokacin da ya ga dama.
7 ೭ ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
Ku danƙa masa dukan damuwarku, domin shi ne yake lura da ku.
8 ೮ ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
Ku zama masu kamunkai, ku kuma zauna a faɗake. Abokin gābanku, Iblis yana kewayewa kamar zaki mai ruri, yana neman wanda zai cinye.
9 ೯ ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
Ku yi tsayayya da shi, kuna tsayawa daram cikin bangaskiya, domin kun san cewa’yan’uwanku ko’ina a duniya suna shan irin wahalolin nan.
10 ೧೦ ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. (aiōnios )
Allah mai dukan alheri, wanda ya kira ku ga madawwamiyar ɗaukaka cikin Kiristi, bayan kun sha wahala na ɗan lokaci, shi da kansa zai raya ku, yă kuma sa ku yi ƙarfi, ku kahu, ku kuma tsaya daram. (aiōnios )
11 ೧೧ ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn )
Gare shi bari iko yă tabbata har abada abadin. Amin. (aiōn )
12 ೧೨ ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.
Da taimakon Sila, wanda na ɗauka a matsayin ɗan’uwa mai aminci, na rubuta muku a taƙaice, ina ƙarfafa ku ina kuma shaida muku cewa wannan shi ne alherin Allah na gaske. Ku tsaya daram a cikinsa.
13 ೧೩ ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.
Ita wadda take a Babilon, zaɓaɓɓiya tare da ku, tana gaishe ku, haka ma ɗana Markus.
14 ೧೪ ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ.
Ku gai da juna da sumbar ƙauna. Salama gare ku duka da kuke cikin Kiristi.