< ಪೇತ್ರನು ಬರೆದ ಮೊದಲನೆಯ ಪತ್ರಿಕೆ 5 >

1 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
Starszych, którzy są wśród was, proszę, jako również starszy i świadek cierpień Chrystusa oraz uczestnik chwały, która ma się objawić:
2 ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.
Paście stado Boga, które jest wśród was, doglądając go nie z przymusu, ale dobrowolnie, nie dla brudnego zysku, ale z ochotą;
3 ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
I nie jak ci, którzy panują nad dziedzictwem [Pana], lecz jako wzór dla stada.
4 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.
A gdy się objawi Najwyższy Pasterz, otrzymacie niewiędnącą koronę chwały.
5 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”
Podobnie młodsi, bądźcie poddani starszym. Wszyscy zaś wobec siebie bądźcie poddani. Przyobleczcie się w pokorę, gdyż Bóg pysznym się sprzeciwia, a pokornym łaskę daje.
6 ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.
Uniżcie się więc pod potężną ręką Boga, aby was wywyższył w [odpowiednim] czasie.
7 ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
Wszystkie wasze troski przerzućcie na niego, gdyż on troszczy się o was.
8 ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
Bądźcie trzeźwi, czuwajcie, bo wasz przeciwnik, diabeł, jak lew ryczący krąży, szukając, kogo by pożreć.
9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
Przeciwstawiajcie się mu, mocni w wierze, wiedząc, że te same cierpienia są udziałem waszych braci na świecie.
10 ೧೦ ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. (aiōnios g166)
A Bóg wszelkiej łaski, ten, który nas powołał do swojej wiecznej chwały w Chrystusie Jezusie, po krótkotrwałych cierpieniach waszych niech uczyni was doskonałymi, utwierdzi, umocni i ugruntuje. (aiōnios g166)
11 ೧೧ ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn g165)
Jemu chwała i moc na wieki wieków. Amen. (aiōn g165)
12 ೧೨ ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.
Przez Sylwana, wiernego wam brata, jak sądzę, napisałem krótko, napominając i świadcząc, że to jest prawdziwa łaska Boga, w której trwacie.
13 ೧೩ ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.
Pozdrawia was [kościół] w Babilonie, razem z wami wybrany, i Marek, mój syn.
14 ೧೪ ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ.
Pozdrówcie się nawzajem pocałunkiem miłości. Pokój wam wszystkim, którzy jesteście w Chrystusie Jezusie. Amen.

< ಪೇತ್ರನು ಬರೆದ ಮೊದಲನೆಯ ಪತ್ರಿಕೆ 5 >