< ಪೇತ್ರನು ಬರೆದ ಮೊದಲನೆಯ ಪತ್ರಿಕೆ 1 >
1 ೧ ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
İsa Məsihin həvarisi mən Peterdən seçilmiş, Pont, Qalatiya, Kappadokiya, Asiya vilayəti və Bitinyaya yayılmış qəriblərə salam!
2 ೨ ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.
Ata Allahın qabaqcadan bilməsinə görə siz Ruh tərəfindən təqdis olunaraq İsa Məsihə itaət etməniz və Onun qanının üzərinizə səpilməsi üçün seçilmisiniz. Qoy lütf və sülh sizə bol-bol verilsin!
3 ೩ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
Rəbbimiz İsa Məsihin Allahına – Atasına alqış olsun! O Öz böyük mərhəmətinə görə yenidən doğulmamızı təmin etdi. İsa Məsihin ölülər arasından dirilməsi ilə bizi canlı ümidə,
4 ೪ ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.
çürüməz, ləkəsiz, solmaz bir irsə qovuşdurdu. Bu irs sizin üçün göylərdə saxlanılır.
5 ೫ ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
Siz Allahın qüdrəti ilə axır zamanda aşkar olunmağa hazır olan xilas üçün iman vasitəsilə qorunursunuz.
6 ೬ ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
Buna görə hal-hazırda qısa bir müddət cürbəcür sınaqlarda kədərə düşməyə məcbur olsanız da, hədsiz sevinirsiniz;
7 ೭ ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
belə ki imanınızın sınaqdan keçməsi İsa Məsihin zühurunda sizə tərif, izzət və şərəf gətirsin. Bu imanınız odla təmizlənsə belə, fani qızıldan daha çox dəyərlidir.
8 ೮ ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
Siz İsa Məsihi görməmisiniz, amma Onu sevirsiniz. Hətta siz Onu indi də görmürsünüz, lakin Ona iman edib təsvirolunmaz və izzətli sevinclə hədsiz sevinirsiniz.
Çünki imanınızın nəticəsində canınızın xilasına nail olursunuz.
10 ೧೦ ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
Sizə göstəriləcək lütf barəsində əvvəlcədən xəbər verən peyğəmbərlər bu xilasa dair araşdırma və tədqiqatlar aparardı.
11 ೧೧ ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
Onların daxilində olan Məsihin Ruhu Məsihin əzabları və onlardan sonrakı izzəti barədə əvvəlcədən şəhadət edirdi. Bunların necə və nə vaxt gələcəyi barədə Ruhun nə göstərdiyini araşdırdılar.
12 ೧೨ ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
Bu şeyləri elan edərək özlərinə deyil, sizə xidmət etdikləri onlara açıqca göstərildi. Müjdəni göydən göndərilmiş Müqəddəs Ruh vasitəsilə sizə yayanlar indi həmin xəbəri sizə bildirdilər. Mələklər də bu şeyləri yaxından tanımaq arzusundadırlar.
13 ೧೩ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
Buna görə ağlınızı toplayıb ayıq durun. Ümidinizi bütünlüklə İsa Məsihin zühurunda sizə veriləcək lütfə bağlayın.
14 ೧೪ ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
İtaətkar uşaqlar kimi cahil ikən qapıldığınız əvvəlki ehtiraslara uymayın.
15 ೧೫ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
Amma sizi çağıran Allah müqəddəs olduğuna uyğun olaraq siz də bütün həyat tərzinizdə müqəddəs olun,
16 ೧೬ ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.
necə ki yazılıb: «Müqəddəs olun, çünki Mən müqəddəsəm».
17 ೧೭ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
Tərəfkeşlik etmədən öz əməlinə görə hər kəsi mühakimə edən Allahı «Ata» deyə çağırdığınız üçün bu qürbət dünyadakı vaxtınızı Allah qorxusunda keçirin.
18 ೧೮ ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
Bildiyiniz kimi, siz ata-babalarınızdan irs olaraq aldığınız puç həyat tərzindən qızıl ya gümüş kimi fani şeylərlə deyil,
19 ೧೯ ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
qüsursuz və ləkəsiz quzuya bənzəyən Məsihin qiymətli qanı bahasına satın alınmısınız.
20 ೨೦ ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
Dünya yaranmazdan əvvəl tanınmış Məsih bu axır zamanda sizə görə zühur etdi.
21 ೨೧ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
Məsih vasitəsilə siz Onu ölülər arasından dirildib izzətləndirən Allaha iman edirsiniz. Beləliklə, imanınız və ümidiniz Allaha bağlıdır.
22 ೨೨ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
Həqiqətə itaət edərək ürəklərinizi saflaşdırıb riyasız qardaşlıq məhəbbətinə sahib oldunuz. Buna görə bir-birinizi var gücünüzlə səmimi qəlbdən sevin.
23 ೨೩ ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. (aiōn )
Çünki siz çürüyən toxumdan deyil, çürüməzdən, Allahın canlı, davamlı olan kəlamı vasitəsilə yenidən doğulmusunuz. (aiōn )
24 ೨೪ ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
Ona görə ki «Bütün bəşər ota bənzər, Onun bütün gözəlliyi çöl çiçəyi kimidir. Ot quruyar, çiçək tökülər,
25 ೨೫ ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. (aiōn )
Amma Rəbbin sözü əbədi qalar». Sizə vəz olunan Müjdə sözü budur. (aiōn )