< ಸಮುವೇಲನು - ಪ್ರಥಮ ಭಾಗ 1 >

1 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.
וַיְהִי֩ אִ֨ישׁ אֶחָ֜ד מִן־הָרָמָתַ֛יִם צוֹפִ֖ים מֵהַ֣ר אֶפְרָ֑יִם וּשְׁמ֡וֹ אֶ֠לְקָנָה בֶּן־יְרֹחָ֧ם בֶּן־אֱלִיה֛וּא בֶּן־תֹּ֥חוּ בֶן־צ֖וּף אֶפְרָתִֽי׃
2 ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.
וְלוֹ֙ שְׁתֵּ֣י נָשִׁ֔ים שֵׁ֤ם אַחַת֙ חַנָּ֔ה וְשֵׁ֥ם הַשֵּׁנִ֖ית פְּנִנָּ֑ה וַיְהִ֤י לִפְנִנָּה֙ יְלָדִ֔ים וּלְחַנָּ֖ה אֵ֥ין יְלָדִֽים׃
3 ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.
וְעָלָה֩ הָאִ֨ישׁ הַה֤וּא מֵֽעִירוֹ֙ מִיָּמִ֣ים ׀ יָמִ֔ימָה לְהִֽשְׁתַּחֲוֺ֧ת וְלִזְבֹּ֛חַ לַיהוָ֥ה צְבָא֖וֹת בְּשִׁלֹ֑ה וְשָׁ֞ם שְׁנֵ֣י בְנֵֽי־עֵלִ֗י חָפְנִי֙ וּפִ֣נְחָ֔ס כֹּהֲנִ֖ים לַיהוָֽה׃
4 ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.
וַיְהִ֣י הַיּ֔וֹם וַיִּזְבַּ֖ח אֶלְקָנָ֑ה וְנָתַ֞ן לִפְנִנָּ֣ה אִשְׁתּ֗וֹ וּֽלְכָל־בָּנֶ֛יהָ וּבְנוֹתֶ֖יהָ מָנֽוֹת׃
5 ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.
וּלְחַנָּ֕ה יִתֵּ֛ן מָנָ֥ה אַחַ֖ת אַפָּ֑יִם כִּ֤י אֶת־חַנָּה֙ אָהֵ֔ב וַֽיהוָ֖ה סָגַ֥ר רַחְמָֽהּ׃
6 ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.
וְכִֽעֲסַ֤תָּה צָֽרָתָהּ֙ גַּם־כַּ֔עַס בַּעֲב֖וּר הַרְּעִמָ֑הּ כִּֽי־סָגַ֥ר יְהוָ֖ה בְּעַ֥ד רַחְמָֽהּ׃
7 ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.
וְכֵ֨ן יַעֲשֶׂ֜ה שָׁנָ֣ה בְשָׁנָ֗ה מִדֵּ֤י עֲלֹתָהּ֙ בְּבֵ֣ית יְהוָ֔ה כֵּ֖ן תַּכְעִסֶ֑נָּה וַתִּבְכֶּ֖ה וְלֹ֥א תֹאכַֽל׃
8 ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.
וַיֹּ֨אמֶר לָ֜הּ אֶלְקָנָ֣ה אִישָׁ֗הּ חַנָּה֙ לָ֣מֶה תִבְכִּ֗י וְלָ֙מֶה֙ לֹ֣א תֹֽאכְלִ֔י וְלָ֖מֶה יֵרַ֣ע לְבָבֵ֑ךְ הֲל֤וֹא אָֽנֹכִי֙ ט֣וֹב לָ֔ךְ מֵעֲשָׂרָ֖ה בָּנִֽים׃
9 ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತ್ತಿದ್ದನು.
וַתָּ֣קָם חַנָּ֔ה אַחֲרֵ֛י אָכְלָ֥ה בְשִׁלֹ֖ה וְאַחֲרֵ֣י שָׁתֹ֑ה וְעֵלִ֣י הַכֹּהֵ֗ן יֹשֵׁב֙ עַל־הַכִּסֵּ֔א עַל־מְזוּזַ֖ת הֵיכַ֥ל יְהוָֽה׃
10 ೧೦ ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ,
וְהִ֖יא מָ֣רַת נָ֑פֶשׁ וַתִּתְפַּלֵּ֥ל עַל־יְהוָ֖ה וּבָכֹ֥ה תִבְכֶּֽה׃
11 ೧೧ “ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.
וַתִּדֹּ֨ר נֶ֜דֶר וַתֹּאמַ֗ר יְהוָ֨ה צְבָא֜וֹת אִם־רָאֹ֥ה תִרְאֶ֣ה ׀ בָּעֳנִ֣י אֲמָתֶ֗ךָ וּזְכַרְתַּ֙נִי֙ וְלֹֽא־תִשְׁכַּ֣ח אֶת־אֲמָתֶ֔ךָ וְנָתַתָּ֥ה לַאֲמָתְךָ֖ זֶ֣רַע אֲנָשִׁ֑ים וּנְתַתִּ֤יו לַֽיהוָה֙ כָּל־יְמֵ֣י חַיָּ֔יו וּמוֹרָ֖ה לֹא־יַעֲלֶ֥ה עַל־רֹאשֽׁוֹ׃
12 ೧೨ ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.
וְהָיָה֙ כִּ֣י הִרְבְּתָ֔ה לְהִתְפַּלֵּ֖ל לִפְנֵ֣י יְהוָ֑ה וְעֵלִ֖י שֹׁמֵ֥ר אֶת־פִּֽיהָ׃
13 ೧೩ ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು
וְחַנָּ֗ה הִ֚יא מְדַבֶּ֣רֶת עַל־לִבָּ֔הּ רַ֚ק שְׂפָתֶ֣יהָ נָּע֔וֹת וְקוֹלָ֖הּ לֹ֣א יִשָּׁמֵ֑עַ וַיַּחְשְׁבֶ֥הָ עֵלִ֖י לְשִׁכֹּרָֽה׃
14 ೧೪ ಏಲಿಯು, “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ” ಅಂದನು.
וַיֹּ֤אמֶר אֵלֶ֙יהָ֙ עֵלִ֔י עַד־מָתַ֖י תִּשְׁתַּכָּרִ֑ין הָסִ֥ירִי אֶת־יֵינֵ֖ךְ מֵעָלָֽיִךְ׃
15 ೧೫ ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.
וַתַּ֨עַן חַנָּ֤ה וַתֹּ֙אמֶר֙ לֹ֣א אֲדֹנִ֔י אִשָּׁ֤ה קְשַׁת־ר֙וּחַ֙ אָנֹ֔כִי וְיַ֥יִן וְשֵׁכָ֖ר לֹ֣א שָׁתִ֑יתִי וָאֶשְׁפֹּ֥ךְ אֶת־נַפְשִׁ֖י לִפְנֵ֥י יְהוָֽה׃
16 ೧೬ ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು.
אַל־תִּתֵּן֙ אֶת־אֲמָ֣תְךָ֔ לִפְנֵ֖י בַּת־בְּלִיָּ֑עַל כִּֽי־מֵרֹ֥ב שִׂיחִ֛י וְכַעְסִ֖י דִּבַּ֥רְתִּי עַד־הֵֽנָּה׃
17 ೧೭ ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.
וַיַּ֧עַן עֵלִ֛י וַיֹּ֖אמֶר לְכִ֣י לְשָׁל֑וֹם וֵאלֹהֵ֣י יִשְׂרָאֵ֗ל יִתֵּן֙ אֶת־שֵׁ֣לָתֵ֔ךְ אֲשֶׁ֥ר שָׁאַ֖לְתְּ מֵעִמּֽוֹ׃
18 ೧೮ ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.
וַתֹּ֕אמֶר תִּמְצָ֧א שִׁפְחָתְךָ֛ חֵ֖ן בְּעֵינֶ֑יךָ וַתֵּ֨לֶךְ הָאִשָּׁ֤ה לְדַרְכָּהּ֙ וַתֹּאכַ֔ל וּפָנֶ֥יהָ לֹא־הָיוּ־לָ֖הּ עֽוֹד׃
19 ೧೯ ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.
וַיַּשְׁכִּ֣מוּ בַבֹּ֗קֶר וַיִּֽשְׁתַּחֲווּ֙ לִפְנֵ֣י יְהוָ֔ה וַיָּשֻׁ֛בוּ וַיָּבֹ֥אוּ אֶל־בֵּיתָ֖ם הָרָמָ֑תָה וַיֵּ֤דַע אֶלְקָנָה֙ אֶת־חַנָּ֣ה אִשְׁתּ֔וֹ וַיִּֽזְכְּרֶ֖הָ יְהוָֽה׃
20 ೨೦ ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
וַיְהִי֙ לִתְקֻפ֣וֹת הַיָּמִ֔ים וַתַּ֥הַר חַנָּ֖ה וַתֵּ֣לֶד בֵּ֑ן וַתִּקְרָ֤א אֶת־שְׁמוֹ֙ שְׁמוּאֵ֔ל כִּ֥י מֵיְהוָ֖ה שְׁאִלְתִּֽיו׃
21 ೨೧ ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು
וַיַּ֛עַל הָאִ֥ישׁ אֶלְקָנָ֖ה וְכָל־בֵּית֑וֹ לִזְבֹּ֧חַ לַֽיהוָ֛ה אֶת־זֶ֥בַח הַיָּמִ֖ים וְאֶת־נִדְרֽוֹ׃
22 ೨೨ “ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.
וְחַנָּ֖ה לֹ֣א עָלָ֑תָה כִּֽי־אָמְרָ֣ה לְאִישָׁ֗הּ עַ֣ד יִגָּמֵ֤ל הַנַּ֙עַר֙ וַהֲבִאֹתִ֗יו וְנִרְאָה֙ אֶת־פְּנֵ֣י יְהוָ֔ה וְיָ֥שַׁב שָׁ֖ם עַד־עוֹלָֽם׃
23 ೨೩ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.
וַיֹּ֣אמֶר לָהּ֩ אֶלְקָנָ֨ה אִישָׁ֜הּ עֲשִׂ֧י הַטּ֣וֹב בְּעֵינַ֗יִךְ שְׁבִי֙ עַד־גָּמְלֵ֣ךְ אֹת֔וֹ אַ֛ךְ יָקֵ֥ם יְהוָ֖ה אֶת־דְּבָר֑וֹ וַתֵּ֤שֶׁב הָֽאִשָּׁה֙ וַתֵּ֣ינֶק אֶת־בְּנָ֔הּ עַד־גָּמְלָ֖הּ אֹתֽוֹ׃
24 ೨೪ ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.
וַתַּעֲלֵ֨הוּ עִמָּ֜הּ כַּאֲשֶׁ֣ר גְּמָלַ֗תּוּ בְּפָרִ֤ים שְׁלֹשָׁה֙ וְאֵיפָ֨ה אַחַ֥ת קֶ֙מַח֙ וְנֵ֣בֶל יַ֔יִן וַתְּבִאֵ֥הוּ בֵית־יְהוָ֖ה שִׁל֑וֹ וְהַנַּ֖עַר נָֽעַר׃
25 ೨೫ ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು.
וַֽיִּשְׁחֲט֖וּ אֶת־הַפָּ֑ר וַיָּבִ֥יאוּ אֶת־הַנַּ֖עַר אֶל־עֵלִֽי׃
26 ೨೬ ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.
וַתֹּ֙אמֶר֙ בִּ֣י אֲדֹנִ֔י חֵ֥י נַפְשְׁךָ֖ אֲדֹנִ֑י אֲנִ֣י הָאִשָּׁ֗ה הַנִּצֶּ֤בֶת עִמְּכָה֙ בָּזֶ֔ה לְהִתְפַּלֵּ֖ל אֶל־יְהוָֽה׃
27 ೨೭ ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;
אֶל־הַנַּ֥עַר הַזֶּ֖ה הִתְפַּלָּ֑לְתִּי וַיִּתֵּ֨ן יְהוָ֥ה לִי֙ אֶת־שְׁאֵ֣לָתִ֔י אֲשֶׁ֥ר שָׁאַ֖לְתִּי מֵעִמּֽוֹ׃
28 ೨೮ ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.
וְגַ֣ם אָנֹכִ֗י הִשְׁאִלְתִּ֙הוּ֙ לַֽיהוָ֔ה כָּל־הַיָּמִים֙ אֲשֶׁ֣ר הָיָ֔ה ה֥וּא שָׁא֖וּל לַֽיהוָ֑ה וַיִּשְׁתַּ֥חוּ שָׁ֖ם לַיהוָֽה׃ פ

< ಸಮುವೇಲನು - ಪ್ರಥಮ ಭಾಗ 1 >