< ಸಮುವೇಲನು - ಪ್ರಥಮ ಭಾಗ 1 >
1 ೧ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.
१एप्रैम के पहाड़ी देश के रामातैम सोपीम नगर का निवासी एल्काना नामक एक पुरुष था, वह एप्रैमी था, और सूफ के पुत्र तोहू का परपोता, एलीहू का पोता, और यरोहाम का पुत्र था।
2 ೨ ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.
२और उसकी दो पत्नियाँ थीं; एक का नाम हन्ना और दूसरी का पनिन्ना था। पनिन्ना के तो बालक हुए, परन्तु हन्ना के कोई बालक न हुआ।
3 ೩ ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.
३वह पुरुष प्रतिवर्ष अपने नगर से सेनाओं के यहोवा को दण्डवत् करने और मेलबलि चढ़ाने के लिये शीलो में जाता था; और वहाँ होप्नी और पीनहास नामक एली के दोनों पुत्र रहते थे, जो यहोवा के याजक थे।
4 ೪ ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.
४और जब जब एल्काना मेलबलि चढ़ाता था तब-तब वह अपनी पत्नी पनिन्ना को और उसके सब बेटे-बेटियों को दान दिया करता था;
5 ೫ ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.
५परन्तु हन्ना को वह दो गुना दान दिया करता था, क्योंकि वह हन्ना से प्रीति रखता था; तो भी यहोवा ने उसकी कोख बन्द कर रखी थी।
6 ೬ ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.
६परन्तु उसकी सौत इस कारण से, कि यहोवा ने उसकी कोख बन्द कर रखी थी, उसे अत्यन्त चिढ़ाकर कुढ़ाती रहती थी।
7 ೭ ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.
७वह तो प्रतिवर्ष ऐसा ही करता था; और जब हन्ना यहोवा के भवन को जाती थी तब पनिन्ना उसको चिढ़ाती थी। इसलिए वह रोती और खाना न खाती थी।
8 ೮ ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.
८इसलिए उसके पति एल्काना ने उससे कहा, “हे हन्ना, तू क्यों रोती है? और खाना क्यों नहीं खाती? और तेरा मन क्यों उदास है? क्या तेरे लिये मैं दस बेटों से भी अच्छा नहीं हूँ?”
9 ೯ ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತ್ತಿದ್ದನು.
९तब शीलो में खाने और पीने के बाद हन्ना उठी। और यहोवा के मन्दिर के चौखट के एक बाजू के पास एली याजक कुर्सी पर बैठा हुआ था।
10 ೧೦ ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ,
१०वह मन में व्याकुल होकर यहोवा से प्रार्थना करने और बिलख-बिलख कर रोने लगी।
11 ೧೧ “ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.
११और उसने यह मन्नत मानी, “हे सेनाओं के यहोवा, यदि तू अपनी दासी के दुःख पर सचमुच दृष्टि करे, और मेरी सुधि ले, और अपनी दासी को भूल न जाए, और अपनी दासी को पुत्र दे, तो मैं उसे उसके जीवन भर के लिये यहोवा को अर्पण करूँगी, और उसके सिर पर छुरा फिरने न पाएगा।”
12 ೧೨ ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.
१२जब वह यहोवा के सामने ऐसी प्रार्थना कर रही थी, तब एली उसके मुँह की ओर ताक रहा था।
13 ೧೩ ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು
१३हन्ना मन ही मन कह रही थी; उसके होंठ तो हिलते थे परन्तु उसका शब्द न सुन पड़ता था; इसलिए एली ने समझा कि वह नशे में है।
14 ೧೪ ಏಲಿಯು, “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ” ಅಂದನು.
१४तब एली ने उससे कहा, “तू कब तक नशे में रहेगी? अपना नशा उतार।”
15 ೧೫ ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.
१५हन्ना ने कहा, “नहीं, हे मेरे प्रभु, मैं तो दुःखिया हूँ; मैंने न तो दाखमधु पिया है और न मदिरा, मैंने अपने मन की बात खोलकर यहोवा से कही है।
16 ೧೬ ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು.
१६अपनी दासी को ओछी स्त्री न जान, जो कुछ मैंने अब तक कहा है, वह बहुत ही शोकित होने और चिढ़ाई जाने के कारण कहा है।”
17 ೧೭ ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.
१७एली ने कहा, “कुशल से चली जा; इस्राएल का परमेश्वर तुझे मन चाहा वर दे।”
18 ೧೮ ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.
१८उसने कहा, “तेरी दासी तेरी दृष्टि में अनुग्रह पाए।” तब वह स्त्री चली गई और खाना खाया, और उसका मुँह फिर उदास न रहा।
19 ೧೯ ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.
१९वे सवेरे उठ यहोवा को दण्डवत् करके रामाह में अपने घर लौट गए। और एल्काना अपनी स्त्री हन्ना के पास गया, और यहोवा ने उसकी सुधि ली;
20 ೨೦ ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
२०तब हन्ना गर्भवती हुई और समय पर उसके एक पुत्र हुआ, और उसका नाम शमूएल रखा, क्योंकि वह कहने लगी, “मैंने यहोवा से माँगकर इसे पाया है।”
21 ೨೧ ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು
२१फिर एल्काना अपने पूरे घराने समेत यहोवा के सामने प्रतिवर्ष की मेलबलि चढ़ाने और अपनी मन्नत पूरी करने के लिये गया।
22 ೨೨ “ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.
२२परन्तु हन्ना अपने पति से यह कहकर घर में रह गई, “जब बालक का दूध छूट जाएगा तब मैं उसको ले जाऊँगी, कि वह यहोवा को मुँह दिखाए, और वहाँ सदा बना रहे।”
23 ೨೩ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.
२३उसके पति एल्काना ने उससे कहा, “जो तुझे भला लगे वही कर जब तक तू उसका दूध न छुड़ाए तब तक यहीं ठहरी रह; केवल इतना हो कि यहोवा अपना वचन पूरा करे।” इसलिए वह स्त्री वहीं घर पर रह गई और अपने पुत्र के दूध छूटने के समय तक उसको पिलाती रही।
24 ೨೪ ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.
२४जब उसने उसका दूध छुड़ाया तब वह उसको संग ले गई, और तीन बछड़े, और एपा भर आटा, और कुप्पी भर दाखमधु भी ले गई, और उस लड़के को शीलो में यहोवा के भवन में पहुँचा दिया; उस समय वह लड़का ही था।
25 ೨೫ ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು.
२५और उन्होंने बछड़ा बलि करके बालक को एली के पास पहुँचा दिया।
26 ೨೬ ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.
२६तब हन्ना ने कहा, “हे मेरे प्रभु, तेरे जीवन की शपथ, हे मेरे प्रभु, मैं वही स्त्री हूँ जो तेरे पास यहीं खड़ी होकर यहोवा से प्रार्थना करती थी।
27 ೨೭ ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;
२७यह वही बालक है जिसके लिये मैंने प्रार्थना की थी; और यहोवा ने मुझे मुँह माँगा वर दिया है।
28 ೨೮ ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.
२८इसलिए मैं भी उसे यहोवा को अर्पण कर देती हूँ; कि यह अपने जीवन भर यहोवा ही का बना रहे।” तब उसने वहीं यहोवा को दण्डवत् किया।