< ಸಮುವೇಲನು - ಪ್ರಥಮ ಭಾಗ 10 >
1 ೧ ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
Tomando então Samuel um frasco de azeite, derramou-o sobre sua cabeça, e beijou-o, e disse-lhe: Não foi o SENHOR que te ungiu para que sejas líder sobre sua propriedade?
2 ೨ ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.
Hoje, depois que te tenhas apartado de mim, acharás dois homens junto ao sepulcro de Raquel, no termo de Benjamim, em Zelza, os quais te dirão: As asnas que havias ido a buscar, se acharam; teu pai pois há deixado já o negócio das asnas, porém está preocupado convosco, dizendo: Que farei acerca de meu filho?
3 ೩ ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.
E quando dali te fores mais adiante, e chegares à campina de Tabor, te sairão ao encontro três homens que sobem a Deus em Betel, levando o um três cabritos, e o outro três tortas de pão, e o terceiro uma vasilha de vinho:
4 ೪ ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.
Os quais, logo que te tenham saudado, te darão dois pães, os quais tomarás das mãos deles.
5 ೫ ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.
De ali virás ao morro de Deus de onde está a guarnição dos filisteus; e quando entrares ali na cidade encontrarás uma companhia de profetas que descem do alto, e diante deles saltério, e adufe, e flauta, e harpa, e eles profetizando:
6 ೬ ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.
E o espírito do SENHOR te arrebatará, e profetizarás com eles, e serás transformado em outro homem.
7 ೭ ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.
E quando te houverem sobrevindo estas sinais, faze o que te vier à mão, porque Deus é contigo.
8 ೮ ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.
E descerás antes de mim a Gilgal; e logo descerei eu a ti para sacrificar holocaustos, e imolar sacrifícios pacíficos. Espera sete dias, até que eu venha a ti, e te ensine o que hás de fazer.
9 ೯ ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು.
E foi que assim quando virou ele seu ombro para partir-se de Samuel, mudou-lhe Deus seu coração; e todas estes sinais aconteceram naquele dia.
10 ೧೦ ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.
E quando chegaram ali ao morro, eis que a companhia dos profetas que vinha a encontrar-se com ele, e o Espírito de Deus o arrebatou, e profetizou entre eles.
11 ೧೧ ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?” ಎಂದು ಮಾತನಾಡಿಕೊಳ್ಳುತ್ತಿದ್ದರು.
E aconteceu que, quando todos os que o conheciam de antes viram como profetizava com os profetas, o povo dizia o um ao outro: Que sucedeu ao filho de Quis? Saul também entre os profetas?
12 ೧೨ ಆಗ ಆ ಸ್ಥಳದವನೊಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಸಂಗತಿಯಿಂದ “ಸೌಲನು ಪ್ರವಾದಿಗಳಲ್ಲಿದ್ದಾನೆ” ಎಂಬ ವಿಷಯ ಹುಟ್ಟಿತು.
E algum dali respondeu, e disse: E quem é o pai deles? Por esta causa se tornou em provérbio: Também Saul entre os profetas?
13 ೧೩ ಅವನು ಪ್ರವಾದಿಸಿದ ನಂತರ ಬೆಟ್ಟದ ಮೇಲಿದ್ದ ಯಜ್ಞವೇದಿಯ ಬಳಿಗೆ ಬಂದನು.
E cessou de profetizar, e chegou ao alto.
14 ೧೪ ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಲು ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು” ಅಂದನು.
E um tio de Saul disse a ele e a seu criado: Aonde fostes? E ele respondeu: A buscar as asnas; e quando vimos que não apareciam, fomos a Samuel.
15 ೧೫ “ಸಮುವೇಲನು ಏನು ಹೇಳಿದನು?” ಎಂದು ಚಿಕ್ಕಪ್ಪನು ಕೇಳಲು
E disse o tio de Saul: Eu te rogo me declares que vos disse Samuel.
16 ೧೬ ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.
E Saul respondeu a seu tio: Declarou-nos expressamente que as asnas haviam aparecido. Mas do negócio do reino, de que Samuel lhe havia falado, não lhe revelou nada.
17 ೧೭ ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.
E Samuel convocou o povo ao SENHOR em Mispá;
18 ೧೮ ಆತನು ಅವರಿಗೆ, ಇಸ್ರಾಯೇಲ್ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.
E disse aos filhos de Israel: Assim disse o SENHOR o Deus de Israel: Eu tirei a Israel do Egito, e vos livre da mão dos egípcios, e da mão de todos os reinos que vos afligiram:
19 ೧೯ ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.
Mas vós rejeitastes hoje a vosso Deus, que vos guarda de todas as vossas aflições e angústias, e dissestes: Não, mas sim põe rei sobre nós. Agora pois, ponde-vos diante do SENHOR por vossas tribos e por vossos milhares.
20 ೨೦ ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.
E fazendo achegar Samuel todas as tribos de Israel, foi tomada a tribo de Benjamim.
21 ೨೧ ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.
E fez chegar a tribo de Benjamim por suas linhagens, e foi tomada a família de Matri; e dela foi tomado Saul filho de Quis. E lhe buscaram, mas não foi achado.
22 ೨೨ ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.
Perguntaram pois outra vez ao SENHOR, se havia ainda de vir ali aquele homem. E respondeu o SENHOR: Eis que ele está escondido entre a bagagem.
23 ೨೩ ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು.
Então correram, e tomaram-no dali, e posto em meio do povo, desde o ombro acima era mais alto que todo o povo.
24 ೨೪ ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.
E Samuel disse a todo o povo: Vistes ao que o SENHOR escolheu, que não há semelhante a ele em todo o povo? Então o povo clamou com alegria, dizendo: Viva o rei!
25 ೨೫ ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
Então Samuel recitou ao povo o direito do reino, e escreveu-o em um livro, o qual guardou diante do SENHOR.
26 ೨೬ ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.
E enviou Samuel a todo o povo cada um a sua casa. E Saul também se foi a sua casa em Gibeá, e foram com ele o exército, o coração dos quais Deus havia tocado.
27 ೨೭ ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.
Porém os ímpios disseram: Como nos há de salvar este? E tiveram-lhe em pouco, e não lhe trouxeram presente: mas ele dissimulou.