< ಸಮುವೇಲನು - ಪ್ರಥಮ ಭಾಗ 11 >
1 ೧ ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
И было спустя около месяца, пришел Наас Аммонитянин и осадил Иавис Галаадский. И сказали все жители Иависа Наасу: заключи с нами союз, и мы будем служить тебе.
2 ೨ ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.
И сказал им Наас Аммонитянин: я заключу с вами союз, но с тем, чтобы выколоть у каждого из вас правый глаз и тем положить бесчестие на всего Израиля.
3 ೩ ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
И сказали ему старейшины Иависа: дай нам сроку семь дней, чтобы послать нам послов во все пределы Израильские, и если никто не поможет нам, то мы выйдем к тебе.
4 ೪ ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
И пришли послы в Гиву Саулову и пересказали слова сии вслух народа; и весь народ поднял вопль и заплакал.
5 ೫ ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
И вот, пришел Саул позади волов с поля и сказал: что сделалось с народом, что он плачет? И пересказали ему слова жителей Иависа.
6 ೬ ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
И сошел Дух Божий на Саула, когда он услышал слова сии, и сильно воспламенился гнев его;
7 ೭ ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.
и взял он пару волов, и рассек их на части, и послал во все пределы Израильские чрез тех послов, объявляя, что так будет поступлено с волами того, кто не пойдет вслед Саула и Самуила. И напал страх Господень на народ, и выступили все, как один человек.
8 ೮ ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
Саул осмотрел их в Везеке, и нашлось сынов Израилевых триста тысяч и мужей Иудиных тридцать тысяч.
9 ೯ ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
И сказали пришедшим послам: так скажите жителям Иависа Галаадского: завтра будет к вам помощь, когда обогреет солнце. И пришли послы и объявили жителям Иависа, и они обрадовались.
10 ೧೦ ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
И сказали жители Иависа Наасу: завтра выйдем к вам, и поступайте с нами, как вам угодно.
11 ೧೧ ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
В следующий день Саул разделил народ на три отряда, и они проникли в средину стана во время утренней стражи и поразили Аммонитян до дневного зноя; оставшиеся рассеялись, так что не осталось из них двоих вместе.
12 ೧೨ ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
Тогда сказал народ Самуилу: кто говорил: “Саулу ли царствовать над нами”? дайте этих людей, и мы умертвим их.
13 ೧೩ ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
Но Саул сказал: в сей день никого не должно умерщвлять, ибо сегодня Господь совершил спасение в Израиле.
14 ೧೪ ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು
И сказал Самуил народу: пойдем в Галгал, и обновим там царство.
15 ೧೫ ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.
И пошел весь народ в Галгал, и поставили там Саула царем пред Господом в Галгале, и принесли там мирные жертвы пред Господом. И весьма веселились там Саул и все Израильтяне.