< ಸಮುವೇಲನು - ಪ್ರಥಮ ಭಾಗ 12 >
1 ೧ ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.
Tiam Samuel diris al ĉiuj Izraelidoj: Jen mi obeis vian voĉon pri ĉio, kion vi diris al mi, kaj mi starigis por vi reĝon.
2 ೨ ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.
Kaj nun jen la reĝo iras antaŭ vi, kaj mi maljuniĝis kaj griziĝis, kaj miaj filoj estas ĉi tie inter vi; mi iradis antaŭ vi de mia juneco ĝis la nuna tago.
3 ೩ ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.
Jen mi estas; parolu pri mi antaŭ la Eternulo kaj antaŭ Lia sanktoleito: kies bovon mi prenis? kaj kies azenon mi prenis? kaj kontraŭ kiu mi agis maljuste? kaj kiun mi premis? kaj el kies mano mi prenis subaĉeton, por ke mi kovru miajn okulojn koncerne lin? kaj mi repagos al vi.
4 ೪ ಅವರು, “ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ” ಎಂದು ಉತ್ತರ ಕೊಟ್ಟರು.
Sed ili diris: Vi faris al ni nenian perfortaĵon nek maljustaĵon, kaj vi nenion prenis el ies mano.
5 ೫ ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು.
Kaj li diris al ili: La Eternulo estas atestanto antaŭ vi, kaj Lia sanktoleito estas atestanto hodiaŭ, ke vi nenion trovis en mia mano. Kaj ili diris: Atestanto.
6 ೬ ಆಗ ಸಮುವೇಲನು, “ನಿಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.
Tiam Samuel diris al la popolo: La Eternulo, kiu starigis Moseon kaj Aaronon, kaj kiu elkondukis viajn patrojn el la lando Egipta.
7 ೭ ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.
Nun stariĝu, kaj mi faru juĝan analizon koncerne vin antaŭ la Eternulo pri ĉiuj bonfaroj de la Eternulo, kiujn Li faris al vi kaj al viaj patroj.
8 ೮ ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.
Kiam Jakob venis en Egiptujon kaj viaj patroj ekkriis al la Eternulo, tiam la Eternulo sendis Moseon kaj Aaronon, kaj ili elkondukis viajn patrojn el Egiptujo kaj ekloĝigis ilin sur ĉi tiu loko.
9 ೯ ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.
Sed ili forgesis la Eternulon, sian Dion, kaj Li transdonis ilin en la manojn de Sisera, militestro de Ĥacor, kaj en la manojn de la Filiŝtoj kaj en la manojn de la reĝo de Moab, kiuj militis kontraŭ ili.
10 ೧೦ ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.
Tiam ili ekkriis al la Eternulo, kaj diris: Ni pekis, ĉar ni forlasis la Eternulon kaj servis al la Baaloj kaj al la Aŝtaroj; nun savu nin el la manoj de niaj malamikoj, kaj ni servos al Vi.
11 ೧೧ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.
Tiam la Eternulo sendis Jerubaalon kaj Bedanon kaj Jiftaĥon kaj Samuelon, kaj Li savis vin el la manoj de viaj malamikoj ĉirkaŭe, kaj vi restis eksterdanĝeraj.
12 ೧೨ ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.
Sed kiam vi vidis, ke Naĥaŝ, reĝo de la Amonidoj, venis kontraŭ vin, vi diris al mi: Ne, reĝo regu super ni; kaj la Eternulo, via Dio, estas ja via reĝo.
13 ೧೩ ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.
Nun jen estas la reĝo, kiun vi elektis, pri kiu vi petis; jen la Eternulo starigis reĝon super vi.
14 ೧೪ ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.
Se vi timos la Eternulon kaj servos al Li kaj obeos Lian voĉon kaj ne ribelos kontraŭ la diro de la Eternulo, tiam vi kaj ankaŭ la reĝo, kiu ekregis super vi, estos sub la defendo de la Eternulo, via Dio.
15 ೧೫ ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.
Sed se vi ne obeos la voĉon de la Eternulo kaj vi ribelos kontraŭ la diro de la Eternulo, tiam la mano de la Eternulo estos kontraŭ vi, kiel kontraŭ viaj patroj.
16 ೧೬ ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.
Eĉ nun stariĝu, kaj vidu tiun grandan faron, kiun la Eternulo faros antaŭ vi.
17 ೧೭ ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.
Ĉu ne estas nun rikolto de tritiko? sed mi ekvokos al la Eternulo, kaj Li donos tondrojn kaj pluvon, por ke vi sciu kaj vidu, kiel granda estas via malbono, kiun vi faris antaŭ la Eternulo, petante por vi reĝon.
18 ೧೮ ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು
Kaj Samuel ekvokis al la Eternulo, kaj la Eternulo donis tondrojn kaj pluvon en tiu tago; kaj forte ektimis la tuta popolo la Eternulon kaj Samuelon.
19 ೧೯ ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು
Kaj la tuta popolo diris al Samuel: Preĝu por viaj sklavoj al la Eternulo, via Dio, por ke ni ne mortu; ĉar al ĉiuj niaj pekoj ni aldonis ankoraŭ malbonagon per tio, ke ni petis por ni reĝon.
20 ೨೦ ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.
Sed Samuel diris al la popolo: Ne timu; vi faris ja tiun tutan malbonon; nur ne forturniĝu de la Eternulo, kaj servu al la Eternulo per via tuta koro.
21 ೨೧ ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.
Kaj ne forkliniĝu al la vantaĵoj, kiuj ne helpas nek savas, ĉar ili estas vantaĵo.
22 ೨೨ ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.
La Eternulo ne forlasos Sian popolon, pro Sia granda nomo; ĉar la Eternulo bonvolis fari vin Lia popolo.
23 ೨೩ ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.
Mi ankaŭ ne permesos al mi peki antaŭ la Eternulo, ĉesante preĝi por vi, kaj mi gvidados vin laŭ la vojo bona kaj ĝusta.
24 ೨೪ ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
Nur timu la Eternulon kaj servu al Li fidele per via tuta koro, ĉar vi vidas, kion grandan Li faris al vi.
25 ೨೫ ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.
Sed se vi agos malbone, tiam ambaŭ, kiel vi, tiel ankaŭ via reĝo, pereos.