< ಸಮುವೇಲನು - ಪ್ರಥಮ ಭಾಗ 13 >
1 ೧ ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು.
শৌল ত্রিশ বছর বয়সে রাজা হলেন, এবং তিনি ইস্রায়েলের উপর বিয়াল্লিশ বছর রাজত্ব করলেন।
2 ೨ ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.
শৌল ইস্রায়েল থেকে 3,000 জনকে বেছে নিলেন; 2,000 জন তাঁর সঙ্গে মিক্মসে ও বেথেলের পার্বত্য এলাকায় ছিল, এবং 1,000 জন যোনাথনের সঙ্গে বিন্যামীন গোষ্ঠীভুক্ত গিবিয়াতে ছিল। অবশিষ্ট লোকজনকে তিনি তাদের ঘরে ফিরিয়ে দিলেন।
3 ೩ ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.
যোনাথন গেবাতে অবস্থিত ফিলিস্তিনীদের সেনা-ছাউনি আক্রমণ করলেন, এবং ফিলিস্তিনীরা তা শুনতে পেল। তখন শৌল গোটা দেশ জুড়ে শিঙা বাজিয়ে বললেন, “হিব্রু মানুষজন শুনুক!”
4 ೪ ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.
অতএব ইস্রায়েলের সব মানুষজন খবরটি শুনতে পেল: “শৌল ফিলিস্তিনীদের সেনা-ছাউনি আক্রমণ করেছেন, এবং ইস্রায়েল এখন ফিলিস্তিনীদের কাছে আপত্তিকর হয়ে গিয়েছে।” অতএব গিল্গলে শৌলের সঙ্গে যোগ দেওয়ার জন্য প্রজাদের ডেকে পাঠানো হল।
5 ೫ ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.
3,000 রথ, 6,000 সারথি, এবং সমুদ্র-সৈকতের বালুকণার মতো অসংখ্য সৈন্যসামন্ত নিয়ে ফিলিস্তিনীরা ইস্রায়েলের সঙ্গে যুদ্ধ করার জন্য সমবেত হল। তারা বেথ-আবনের পূর্বদিকে অবস্থিত মিক্মসে গিয়ে শিবির স্থাপন করল।
6 ೬ ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.
ইস্রায়েলীরা যখন দেখল যে তাদের অবস্থা খুব শোচনীয় ও তাদের সৈন্যদল চাপে পড়ে গিয়েছে, তখন তারা গুহায় ও ঝোপঝাড়ে, শিলাস্তূপের খাঁজে, এবং খাদে ও জলাধারে গিয়ে লুকিয়ে পড়ল।
7 ೭ ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.
হিব্রুদের মধ্যে কয়েকজন এমনকি জর্ডন নদী পেরিয়ে গাদ ও গিলিয়দ দেশেও চলে গেল। শৌল গিল্গলে থেকে গেলেন, এবং তাঁর সঙ্গে থাকা সব সৈন্যসামন্ত ভয়ে কাঁপছিল।
8 ೮ ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.
শমূয়েলের নির্দিষ্ট করে দেওয়া সময়ানুসারে তিনি সাত দিন অপেক্ষা করলেন; কিন্তু শমূয়েল গিল্গলে আসেননি, এবং শৌলের লোকজন ছত্রভঙ্গ হতে শুরু করল।
9 ೯ ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.
তাই তিনি বললেন, “আমার কাছে হোমবলি ও মঙ্গলার্থক-নৈবেদ্য নিয়ে এসো।” এই বলে শৌল হোমবলি উৎসর্গ করলেন।
10 ೧೦ ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು
তিনি বলি উৎসর্গ করতে না করতেই শমূয়েল সেখানে পৌঁছে গেলেন, এবং শৌল তাঁকে শুভেচ্ছা জানানোর জন্য বাইরে বেরিয়ে এলেন।
11 ೧೧ ಸಮುವೇಲನು ಅವನನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಅವನು, “ಜನರು ಚದರಿಹೋಗುವುದನ್ನೂ, ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ, ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು.
শমূয়েল জিজ্ঞাসা করলেন, “তুমি এ কী করলে?” শৌল উত্তর দিলেন, “আমি যখন দেখলাম যে লোকজন ছত্রভঙ্গ হচ্ছে, এবং আপনিও নির্দিষ্ট সময়ে এলেন না, ইত্যবসরে আবার ফিলিস্তিনীরাও মিক্মসে সমবেত হচ্ছে,
12 ೧೨ ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.
তখন আমি ভাবলাম, ‘এবার ফিলিস্তিনীরা গিল্গলে আমার বিরুদ্ধে চড়াও হবে, আর আমি সদাপ্রভুর অনুগ্রহও প্রার্থনা করিনি।’ তাই বাধ্য হয়েই আমাকে হোমবলি উৎসর্গ করতে হল।”
13 ೧೩ ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.
শমূয়েল তাঁকে বললেন, “তুমি মূর্খের মতো কাজ করেছ। তোমার ঈশ্বর সদাপ্রভু তোমাকে যে আজ্ঞা দিয়েছিলেন, তা তুমি পালন করোনি; যদি তুমি তা করতে, তবে তিনি চিরতরে ইস্রায়েলের উপর তোমার রাজত্ব স্থায়ী করে দিতেন।
14 ೧೪ ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.
কিন্তু এখন তোমার রাজত্ব আর স্থায়ী হবে না; সদাপ্রভু তাঁর মনের মতো এক মানুষ খুঁজে নিয়েছেন এবং তাকে তাঁর প্রজাদের শাসনকর্তারূপে নিযুক্ত করেছেন, কারণ তুমি সদাপ্রভুর আজ্ঞা পালন করোনি।”
15 ೧೫ ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು.
পরে শমূয়েল গিল্গল ছেড়ে বিন্যামীন প্রদেশের গিবিয়াতে চলে গেলেন, এবং শৌল তাঁর সঙ্গে থাকা লোকজনের সংখ্যা গণনা করলেন। তাদের সংখ্যা হল প্রায় 600।
16 ೧೬ ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರು ನೂರು ಪುರುಷರಿದ್ದರು. ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.
শৌল ও তাঁর ছেলে যোনাথন এবং তাঁদের সঙ্গে থাকা লোকজন বিন্যামীন প্রদেশের গিবিয়াতে ছিলেন, অন্যদিকে ফিলিস্তিনীরা মিক্মসে শিবির স্থাপন করেছিল।
17 ೧೭ ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ನಾಡಿಗೂ,
ফিলিস্তিনীদের শিবির থেকে আক্রমণকারী সৈন্যরা তিন দলে বিভক্ত হয়ে বেরিয়ে এল। একদল সৈন্য শূয়াল এলাকায় অবস্থিত অফ্রার দিকে গেল,
18 ೧೮ ಇನ್ನೊಂದು ಗುಂಪು ಬೇತ್ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.
অন্য দলটি গেল বেথ-হোরোণের দিকে, এবং তৃতীয় দলটি মরুপ্রান্তরের দিকে দৃষ্টি রেখে সিবোয়িম উপত্যকা লক্ষ্য করে সীমান্ত এলাকার দিকে গেল।
19 ೧೯ ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
গোটা ইস্রায়েল দেশে কোনও কামার পাওয়া যাচ্ছিল না, কারণ ফিলিস্তিনীরা বলেছিল, “পাছে হিব্রুরা তরোয়াল বা বর্শা তৈরি করে!”
20 ೨೦ ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.
তাই ইস্রায়েলের সব লোকজন তাদের লাঙলের ফাল, কোদাল, কুড়ুল ও কাস্তে ধার করার জন্য ফিলিস্তিনীদের কাছে যেত।
21 ೨೧ ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು.
লাঙলের ফাল ও কোদাল ধার করার জন্য দিতে হত এক শেকলের দুই-তৃতীয়াংশ রুপো এবং কাঁটা-বেলচা ও কুড়ুল ধার করার তথা অঙ্কুশ শান দেওয়ার জন্য দিতে হত এক শেকলের এক-তৃতীয়াংশ রুপো।
22 ೨೨ ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.
তাই যুদ্ধের দিনে শৌল ও যোনাথনের সঙ্গে থাকা একজনও সৈনিকের হাতে কোনও তরোয়াল বা বর্শা ছিল না; শুধু শৌল ও যোনাথনের হাতেই সেগুলি ছিল।
23 ೨೩ ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.
ইতিমধ্যে ফিলিস্তিনী সৈন্যদলের একটি অংশ মিক্মসের সংকীর্ণ গিরিপথে চলে গিয়েছিল।