< ಸಮುವೇಲನು - ಪ್ರಥಮ ಭಾಗ 14 >

1 ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.
하루는 사울의 아들 요나단이 자기 병기를 든 소년에게 이르되 우리가 건너편 블레셋 사람의 부대에게로 건너가자 하고 그 아비에게는 고하지 아니하였더라
2 ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,
사울이 기브아 변경 미그론에 있는 석류나무 아래 머물렀고 함께 한 백성은 육백명 가량이며
3 ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.
아히야는 에봇을 입고 거기 있었으니 그는 이가봇의 형제 아히둡의 아들이요 비느하스의 손자요 실로에서 여호와의 제사장이 되었던 엘리의 증손이었더라 백성은 요나단의 간 줄을 알지 못하니라
4 ಅವನು ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೊರಟಾಗ, ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕಡಿದಾದ ಬಂಡೆಗಳು ಇದ್ದವು.
요나단이 블레셋 사람의 부대에게로 건너가려 하는 어귀 사이 이 편에도 험한 바위가 있고 저편에도 험한 바위가 있는데 하나의 이름은 보세스요 하나의 이름은 세네라
5 ಅದರಲ್ಲಿ ಒಂದು ಬಂಡೆ ಉತ್ತರದಿಕ್ಕಿಗೆ ಎತ್ತರವಾಗಿ ಮಿಕ್ಮಾಷಿಗೂ, ಮತ್ತೊಂದು ದಕ್ಷಿಣದಿಕ್ಕಿನ ಗೆಬಕ್ಕೆ ಎದುರಾಗಿದ್ದವು.
한 바위는 북에서 믹마스 앞에 일어섰고 하나는 남에서 게바 앞에 일어섰더라
6 ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.
요나단이 자기 병기 든 소년에게 이르되 `우리가 이 할례 없는 자들의 부대에게로 건너가자 여호와께서 우리를 위하여 일하실까 하노라 여호와의 구원은 사람의 많고 적음에 달리지 아니하였느니라!'
7 ಆಯುಧಗಳನ್ನು ಹೊರುವ ಸೇವಕನು, “ನಿನ್ನ ಮನಸ್ಸಿನಂತೆ ಮಾಡು, ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ” ಅಂದನು.
병기 든 자가 그에게 이르되 `당신의 마음에 있는 대로 다 행하여 앞서 가소서 내가 당신과 마음을 같이 하여 따르리이다'
8 ಆಗ ಯೋನಾತಾನನು ಅವನಿಗೆ, “ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ.
요나단이 가로되 `보라, 우리가 그 사람들에게로 건너가서 그들에게 보이리니
9 ‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ’ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ.
그들이 만일 이같이 우리에게 이르기를 우리가 너희에게로 가기를 기다리라 하면 우리는 우리 곳에 가만히 서서 그들에게로 올라가지 말 것이요
10 ೧೦ ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ’ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆ ಎಂಬುದಕ್ಕೆ ಇದೇ ಗುರುತು ಎಂದು ತಿಳಿದು ಮೇಲೆ ಹೋಗೋಣ” ಎಂದನು.
그들이 만일 이같이 말하기를 우리에게로 올라오라 하면 우리가 올라갈 것은 여호와께서 그들을 우리 손에 붙이셨음이니 이것이 우리에게 표징이 되리라' 하고
11 ೧೧ ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಮ್ಮೊಳಗೆ ಮಾತನಾಡಿಕೊಂಡರು.
둘이 다 블레셋 사람의 부대에게 보이매 블레셋 사람이 가로되 `보라, 히브리 사람이 그 숨었던 구멍에서 나온다' 하고
12 ೧೨ ಅವರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ತೋರಿಸಿಬೇಕಾದ ಕಾರ್ಯ ಬಂದಿದೆ” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಿದನು.
그 부대 사람들이 요나단과 그 병기 든 자를 대하여 가로되 우리에게로 올라오라 너희에게 한 일을 보이리라 한지라 요나단이 자기 병기든 자에게 이르되 나를 따라 올라오라 여호와께서 그들을 이스라엘의 손에 붙이셨느니라 하고
13 ೧೩ ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.
요나단이 손발로 붙잡고 올라갔고 그 병기 든 자도 따랐더라 블레셋 사람들이 요나단 앞에서 엎드러지매 병기 든 자가 따라가며 죽였으니
14 ೧೪ ಯೋನಾತಾನನು ಅವನ ಸೇವಕನು ಮಾಡಿದ ಮೊದಲ ದಾಳಿಯಲ್ಲಿ ಸುಮಾರು ಇಪ್ಪತ್ತು ಜನರು ಅರ್ಧ ಎಕರೆ ಭೂಮಿಯಲ್ಲಿ ಸತ್ತುಹೋದರು.
요나단과 그 병기 든 자가 반일경 지단안에서 처음으로 도륙한 자가 이십인 가량이라
15 ೧೫ ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.
들에 있는 진과 모든 백성 중에 떨림이 일어났고 부대와 노략군들도 떨었으며 땅도 진동하였으니 이는 큰 떨림이었더라
16 ೧೬ ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.
베냐민 기브아에 있는 사울의 파숫군이 바라본즉 허다한 블레셋 사람이 무너져 이리저리 흩어지더라
17 ೧೭ ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿರಿ” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡಿದಾಗ ಯೋನಾತಾನನೂ, ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲವೆಂದು ತಿಳಿದುಬಂದಿತು.
사울이 자기와 함께 한 백성에게 이르되 `우리에게서 누가 나갔는지 점고하여 보라' 하고 점고한즉 요나단과 그의 병기 든 자가 없어졌더라
18 ೧೮ ಅನಂತರ ಸೌಲನು ಅಹೀಯನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.
사울이 아히야에게 이르되 `하나님의 궤를 이리로 가져오라' 하니 그 때에 하나님의 궤가 이스라엘 자손과 함께 있음이라
19 ೧೯ ಸೌಲನು ಯಾಜಕನೊಡನೆ ಮಾತನಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆಗ ಸೌಲನು ಯಾಜಕನಿಗೆ, “ನಿನ್ನ ಕೈಯನ್ನು ತೆಗೆ” ಎಂದು ಹೇಳಿ
사울이 제사장에게 말할 때에 블레셋 사람의 진에 소동이 점점 더한지라 사울이 제사장에게 이르되 `네 손을 거두라' 하고
20 ೨೦ ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು.
사울과 그와 함께한 모든 백성이 모여 전장에 가서 본즉 블레셋 사람이 각각 칼로 그 동무를 치므로 크게 혼란하였더라
21 ೨೧ ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು.
전에 블레셋 사람과 함께 하던 히브리 사람이 사방에서 블레셋 사람과 함께 와서 진에 들어왔더니 그들이 돌이켜 사울과 요나단과 함께한 이스라엘 사람과 합하였고
22 ೨೨ ಎಫ್ರಾಯೀಮಿನ ಪರ್ವತ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.
에브라임 산지에 숨었던 이스라엘 모든 사람도 블레셋 사람의 도망함을 듣고 싸우러 나와서 그들을 추격하였더라
23 ೨೩ ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು.
여호와께서 그 날에 이스라엘을 구원하시므로 전쟁이 벧아웬을 지나니라
24 ೨೪ ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.
이 날에 이스라엘 백성이 피곤하였으니 이는 사울이 백성에게 맹세시켜 경계하여 이르기를 `저녁 곧 내가 내 원수에게 보수하는 때까지 아무 식물이든지 먹는 사람은 저주를 받을지어다!' 하였음이라 그러므로 백성이 식물을 맛보지 못하고
25 ೨೫ ಸೈನ್ಯದವರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.
그들이 다 수풀에 들어간즉 땅에 꿀이 있더라
26 ೨೬ ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.
백성이 수풀로 들어갈 때에 꿀이 흐르는 것을 보고도 그들이 맹세를 두려워하여 손을 그 입에 대는 자가 없으나
27 ೨೭ ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.
요나단은 그 아비가 맹세로 백성에게 명할 때에 듣지 못하였으므로 손에 가진 지팡이 끝을 내밀어 꿀을 찍고 그 손을 돌이켜 입에 대매 눈이 밝아졌더라
28 ೨೮ ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.
때에 백성 중 하나가 고하여 가로되 `당신의 부친이 맹세로 백성에게 엄히 명하여 말씀하시기를 오늘날 식물을 먹는 사람은 저주를 받을지어다 하셨나이다 그러므로 백성이 피곤하였나이다'
29 ೨೯ ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.
요나단이 가로되 `내 부친이 이 땅으로 곤란케 하셨도다 보라, 내가 이 꿀 조금을 맛보고도 내 눈이 이렇게 밝았거든
30 ೩೦ ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ” ಅಂದನು.
하물며 백성이 오늘 그 대적에게서 탈취하여 얻은 것을 임의로 먹었더면 블레셋 사람을 살륙함이 더욱 많지 아니하였겠느냐?'
31 ೩೧ ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.
그 날에 백성이 믹마스에서부터 아얄론에 이르기까지 블레셋 사람을 쳤으므로 그들이 심히 피곤한지라
32 ೩೨ ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು ರಕ್ತದೊಡನೆ ತಿಂದರು.
백성이 이에 탈취한 물건에 달려가서 양과 소와 송아지들을 취하고 그것을 땅에서 잡아 피 있는 채 먹었더니
33 ೩೩ ಆಗ ಕೆಲವರು ಸೌಲನಿಗೆ, “ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ” ಎಂದು ತಿಳಿಸಿದರು. ಸೌಲನು ಅವರಿಗೆ, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು;
무리가 사울에게 고하여 가로되 `보소서! 백성이 고기를 피채 먹어 여호와께 범죄하였나이다' 사울이 가로되 `너희가 무신하게 행하였도다 이제 큰 돌을 내게로 굴려오라' 하고
34 ೩೪ ಜನರ ಬಳಿಗೆ ಹೋಗಿ ಅವರಿಗೆ, ‘ರಕ್ತದೊಂದಿಗೆ ಭೋಜನ ಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಬೇಡಿರಿ; ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿ ತಂದು, ಕೊಂದು ತಿನ್ನಬೇಕೆಂದು ಹೇಳಿರಿ’” ಅಂದನು. ಹಾಗೆಯೇ ಜನರೆಲ್ಲರೂ ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.
또 가로되 `너희는 백성 중에 흩어져 다니며 이르기를 사람은 각기 소와 각기 양을 이리로 끌어다가 잡아 먹되 피 있는 채 먹어서 여호와께 범죄하지 말라' 하매 그 밤에 모든 백성이 각각 자기의 소를 끌어다가 거기서 잡으니라
35 ೩೫ ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.
사울이 여호와를 위하여 단을 쌓았으니 이는 그가 여호와를 위하여 처음 쌓은 단이었더라
36 ೩೬ ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು.
사울이 가로되 `우리가 밤에 블레셋 사람을 쫓아 내려가서 동틀 때까지 그들 중에서 탈취하고 한 사람도 남기지 말자 무리가 가로되 `왕의 소견에 좋은 대로 하소서' 할 때에 제사장이 가로되 `이리로 와서 하나님께로 나아가사이다' 하매
37 ೩೭ ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿಕೊಂಡರೂ ದೇವರು ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.
사울이 하나님께 묻자오되 `내가 블레셋 사람을 쫓아 내려가리이까 주께서 그들을 이스라엘의 손에 붙이시겠나이까?' 하되 그 날에 대답지 아니하시는지라
38 ೩೮ ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ.
사울이 가로되 `너희 백성의 어른들아! 다 이리로 오라 오늘 이 죄가 뉘게 있나 알아 보자
39 ೩೯ ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು.
이스라엘을 구원하신 여호와의 사심으로 맹세하노니 내 아들 요나단에게 있다 할지라도 반드시 죽으리라' 하되 모든 백성 중 한 사람도 대답지 아니하매
40 ೪೦ ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು” ಅನ್ನಲು ಅವರು, “ನಿನ್ನ ಇಷ್ಟದಂತೆ ಆಗಲಿ” ಅಂದರು.
이에 그가 온 이스라엘에게 이르되 `너희는 저편에 있으라 나와 내 아들 요나단은 이편에 있으리라' 백성이 사울에게 말하되 `왕의 소견에 좋은대로 하소서' 하니라
41 ೪೧ ಅನಂತರ ಸೌಲನು, “ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು” ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು.
이에 사울이 이스라엘의 하나님 여호와께 아뢰되 `원컨대 실상을 보이소서' 하였더니 요나단과 사울이 뽑히고 백성은 면한지라
42 ೪೨ ಸೌಲನು ಪುನಃ, “ನಮ್ಮಿಬ್ಬರೊಳಗೆ ಚೀಟು ಹಾಕಿರಿ” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು.
사울이 가로되 `나와 내 아들 요나단 사이에 뽑으라' 하였더니 요나단이 뽑히니라
43 ೪೩ ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದಿ, ಹೇಳು” ಎಂದು ಕೇಳಲು ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ” ಎಂದು ಉತ್ತರಕೊಟ್ಟನು.
사울이 요나단에게 가로되 `너의 행한 것을 내게 고하라' 요나단이 고하여 가로되 `내가 다만 내 손에 가진 지팡이 끝으로 꿀을 조금 맛보았을 뿐이오나 내가 죽을 수 밖에 없나이다'
44 ೪೪ ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.
사울이 가로되 `요나단아! 네가 반드시 죽으리라! 그렇지 않으면 하나님이 내게 벌을 내리시고 또 내리시기를 원하노라'
45 ೪೫ ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.
백성이 사울에게 말하되 `이스라엘에 이 큰 구원을 이룬 요나단이 죽겠나이까 결단코 그렇지 아니하니이다 여호와의 사심으로 맹세하옵나니 그의 머리털 하나도 땅에 떨어지지 아니할 것은 그가 오늘 하나님과 동사하였음이니이다' 하여 요나단을 구원하여 죽지않게 하니라
46 ೪೬ ಸೌಲನು ಆ ಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತ್ಯಕ್ಕೆ ಹೋದರು.
이 블레셋 사람 따르기를 그치고 올라가매 블레셋 사람이 자기 곳으로 돌아가니라
47 ೪೭ ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.
사울이 이스라엘 왕위에 나아간 후에 사방에 있는 모든 대적 곧 모압과 암몬 자손과 에돔과 소바의 왕들과 블레셋 사람을 쳤는데 향하는 곳마다 이기었고
48 ೪೮ ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು.
용맹 있게 아말렉 사람을 치고 이스라엘을 그 약탈하는 자의 손에서 건졌더라
49 ೪೯ ಸೌಲನ ಗಂಡು ಮಕ್ಕಳು - ಯೋನಾತಾನ, ಇಷ್ವಿ ಮತ್ತು ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್ ಮತ್ತು ಮೀಕಲ್.
사울의 아들은 요나단과, 리스위와, 말기수아요, 그 두 딸의 이름은 이러하니 맏딸의 이름은 메랍이요, 작은 딸의 이름은 미갈이며
50 ೫೦ ಅಹೀಮಾಚನ ಮಗಳಾದ ಅಹೀನೋವಮಳು ಸೌಲನ ಹೆಂಡತಿ. ನೇರನ ಮಗನಾದ ಅಬ್ನೇರನು ಅವನ ಸೇನಾಪತಿ. ನೇರನು ಸೌಲನು ಚಿಕ್ಕಪ್ಪನು.
사울의 아내의 이름은 아히노암이니 아히마아스의 딸이요, 그 군장의 이름은 아브넬이니 사울의 숙부 넬의 아들이며
51 ೫೧ ಸೌಲನ ತಂದೆಯಾದ ಕೀಷನೂ, ಅಬ್ನೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು.
사울의 아비는 기스요 아브넬의 아비는 넬이니 아비엘의 아들이었더라
52 ೫೨ ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧವಾಗುತ್ತಿದ್ದುದ್ದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ, ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.
사울의 사는 날 동안에 블레셋 사람과 큰 싸움이 있었으므로 사울이 힘 있는 자나 용맹 있는 자를 보면 그들을 불러 모았더라

< ಸಮುವೇಲನು - ಪ್ರಥಮ ಭಾಗ 14 >