< ಸಮುವೇಲನು - ಪ್ರಥಮ ಭಾಗ 15 >
1 ೧ ಸಮುವೇಲನು ಸೌಲನಿಗೆ, “ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವುದನ್ನು ಕೇಳು.
Da bi Samuel ka kyerɛɛ Saulo se, “Me na Awurade somaa me sɛ memmɛsra wo ngo sɛ Israel ɔhene. Afei tie nkra a efi Awurade nkyɛn no.
2 ೨ ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.
Asɛm a Asafo Awurade se ni, ‘Me ne Amalekfo bedi wɔ nea wɔyɛ de tiaa Israelfo bere a na wofi Misraim reba no ho.
3 ೩ ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.
Enti kɔ na kɔsɛe Amalek mantam no pasaa. Kunkum mmarima ne mmea, mmofra ne nkokoaa, anantwi ne nguan, yoma ne mfurum.’”
4 ೪ ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಜನರು ಇದ್ದರು.
Enti Saulo frɛɛ nʼakofo boaa wɔn ano wɔ Telaim. Na wɔn dodow yɛ mpem ahannu ne mpem du nso a wofi Yuda.
5 ೫ ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು.
Saulo kɔɔ Amalek kuropɔn no mu, kɔtɛw obon no mu.
6 ೬ ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.
Na ɔkraa Kenifo no se, “Mumfi nea Amalekfo no te hɔ na mansɛe mo ne wɔn, efisɛ Israelfo no fi Misraim reba no, mo ne wɔn dii no yiye.” Enti Kenifo no twee wɔn ho fi Amalekfo no ho.
7 ೭ ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು.
Na Saulo kunkum Amalekfo no fii Hawila kosii Sur wɔ Misraim apuei fam.
8 ೮ ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.
Ɔkyeree Amalekfo hene Agag anikann, nanso okunkum nnipa no nyinaa.
9 ೯ ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.
Na Saulo ne nʼakofo no anyɛ Agag bɔne biara, na mmom wɔfaa wɔn nguan pa, anantwi pa ne anantwi ne nguamma a wɔadodɔ srade ne biribiara a wɔn ani gye ho. Wɔsɛee nea so nni wɔn mfaso na enni mu nyinaa.
10 ೧೦ ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು.
Na Awurade ka kyerɛɛ Samuel se,
11 ೧೧ ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.
“Manu me ho sɛ masi Saulo ɔhene, efisɛ wanni me nokware, na afei wayɛ nʼadwene sɛ ɔrentie mʼasɛm.” Asɛm no haw Samuel, na osu frɛɛ Awurade anadwo mu no nyinaa.
12 ೧೨ ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ
Ade kyee no, Samuel sɔree ntɛm kohyiaa Saulo, nanso obi ka kyerɛɛ no se, “Saulo kɔɔ Karmel sɛ ɔrekosi nkaedum de ahyɛ ne ho anuonyam, na ofii hɔ kɔɔ Gilgal.”
13 ೧೩ ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು.
Samuel kɔtoo no no, Saulo kyiaa no anigye so se, “Awurade nhyira wo. Madi Awurade ahyɛde no so.”
14 ೧೪ ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ” ಎನ್ನಲು
Samuel bisae se, “Na dɛn ne nguan ne anantwi su a mete yi?”
15 ೧೫ ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು.
Saulo gye too mu se, “Ɛyɛ nokware sɛ asraafo no amfa wɔn nsa anka nguan pa ne anantwi pa no. Nanso wɔde eyi rebɛbɔ afɔre ama Awurade, wo Nyankopɔn. Biribiara a ɛka ho no de, yɛasɛe no.”
16 ೧೬ ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು.
Afei, Samuel ka kyerɛɛ Saulo se, “Gyae! Tie asɛm a Awurade ka kyerɛɛ me anadwo a atwa mu yi.” Saulo bisaa se, “Dɛn asɛm?”
17 ೧೭ ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.
Samuel ka kyerɛɛ no se, “Ebia wubu wo ho abomfiaa, nanso ɛnyɛ wo na wudii Israel mmusuakuw nyinaa so no? Awurade asra wo ngo sɛ ɔhene wɔ Israel so.
18 ೧೮ ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು.
Na ɔsomaa wo sɛ kodi dwuma bi ma no, na osee wo sɛ, ‘Kɔ na kɔsɛe amumɔyɛfo a ɛyɛ Amalekfo no pasapasa, kosi sɛ mobɛtɔre wɔn ase dwerɛbee.’
19 ೧೯ ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.
Adɛn nti na woantie Awurade? Adɛn nti na mopere fom nneɛma, na moyɛɛ nea Awurade kaa se monnyɛ?”
20 ೨೦ ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.
Saulo nso kaa no denneennen se, “Mitiee Awurade. Nea ɔkyerɛɛ me sɛ menyɛ no, meyɛe. Mede ɔhene Agag san bae. Na wɔn a aka no de, mesɛee wɔn nyinaa.
21 ೨೧ ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು” ಎಂದು ಉತ್ತರಕೊಟ್ಟನು.
Na mʼakofo no nso de nguan pa, anantwi pa ne asade bae sɛ wɔde rebɛbɔ afɔre ama Awurade, wo Nyankopɔn wɔ Gilgal.”
22 ೨೨ ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.
Na Samuel buae se, “Nea ɛwɔ he na ɛsɔ Awurade ani: sɛ wobɛbɔ ɔhyew afɔre ne okum afɔre, anaasɛ wobɛyɛ osetie ama Awurade nne? Osetie ye sen afɔrebɔ. Sɛ wubetie no no ye sen sɛ wode adwennini akɛse srade bɛma.
23 ೨೩ ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.
Atuatew te sɛ bayi, na asoɔden nso te sɛ ahonisom. Esiane sɛ woapo Awurade asɛm no nti, ɔno nso apo wʼahenni.”
24 ೨೪ ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.
Na Saulo ka kyerɛɛ Samuel se, “Mayɛ bɔne. Manni Awurade ahyɛde ne wo nkyerɛkyerɛ so. Na misuro nnipa no nti na meyɛɛ wɔn apɛde maa wɔn no.
25 ೨೫ ನೀನು ದಯವಿಟ್ಟು ನನ್ನ ಪಾಪವನ್ನು ಕ್ಷಮಿಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಅವನನ್ನು ಬೇಡಿಕೊಂಡನು.
Enti mesrɛ wo, fa me bɔne kyɛ me na wo ne me nkɔsom Awurade.”
26 ೨೬ ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು
Samuel ka kyerɛɛ no se, “Merensan ne wo nkɔ. Woapo Awurade ahyɛde enti Awurade nso apo wʼahenni!”
27 ೨೭ ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.
Samuel yɛɛ sɛ ɔrekɔ no, Saulo soo nʼatade mu pɛɛ sɛ ɔsan no, na atade no mu suanee.
28 ೨೮ ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.
Samuel ka kyerɛɛ no se, “Hwɛ efi nnɛ, Awurade atew Israel ahemman mu afi wo ho de ama obi foforo a oye sen wo.
29 ೨೯ ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.
Nea ɔyɛ Israel Anuonyam no nni atoro na ɔnsesa nʼadwene; efisɛ ɔnyɛ onipa na wasesa nʼadwene.”
30 ೩೦ ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.
Saulo srɛɛ bio se, “Minim sɛ mayɛ bɔne. Na mesrɛ wo sɛ, hyɛ me anuonyam wɔ me mpanyimfo ne me nkurɔfo anim; wo ne me nkɔsom Awurade, wo Nyankopɔn.”
31 ೩೧ ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು. ಆಗ ಸೌಲನು ದೇವರನ್ನು ಆರಾಧಿಸಿದನು.
Enti Samuel pene ne Saulo san kɔe, na Saulo som Awurade.
32 ೩೨ ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.
Afei, Samuel kaa se, “Fa ɔhene Agag brɛ me.” Agag baa ne nkyɛn gyidi mu, susuw sɛ ɛhɔ a wakɔ no de, owu apare no.
33 ೩೩ ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.
Nanso Samuel kae se, “Sɛnea wʼafoa akum mmea bi mmabarima no, wo nso wo na bɛyɛ ɔbea a onni ba.” Enti Samuel twitwaa Agag mu nketenkete Awurade anim wɔ Gilgal.
34 ೩೪ ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.
Na Samuel fi hɔ kɔɔ Rama na Saulo nso kɔɔ ne fi wɔ Gibea.
35 ೩೫ ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.
Samuel anhyia Saulo bio nanso odii ne ho yaw bebree. Na Awurade nuu ne ho sɛ osii Saulo hene wɔ Israel so.