< ಸಮುವೇಲನು - ಪ್ರಥಮ ಭಾಗ 16 >
1 ೧ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
১যিহোৱাই চমূৱেলক ক’লে, “মই চৌলক অগ্ৰাহ্য কৰি ইস্ৰায়েলৰ ওপৰত দিয়া তেওঁৰ ৰাজপদ গুচাই দিয়া দেখি তুমি নো কিমান সময় চৌলৰ কাৰণে শোক কৰি থাকিবা? তোমাৰ শিংটো তেলেৰে পুৰ কৰি লোৱা; এতিয়া মই তোমাক বৈৎলেহেমীয়া যিচয়ৰ ওচৰলৈ পঠাওঁ; কিয়নো মই তেওঁৰ পুত্ৰ সকলৰ মাজৰ এজনক ৰজা হ’বৰ অৰ্থে বাচি ললোঁ।”
2 ೨ ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.
২চমূৱেলে ক’লে, “মই কেনেকৈ যাম? চৌলে যদি এই কথা শুনে, তেন্তে তেওঁ মোক বধ কৰিব।” যিহোৱাই ক’লে, “তুমি এজনী চেঁউৰী গৰু লগত লৈ যোৱা, আৰু ক’বা, মই যিহোৱাৰ উদ্দেশে বলিদান কৰিবলৈ আহিছোঁ।”
3 ೩ ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.
৩সেই যজ্ঞলৈ যিচয়ক নিমন্ত্ৰণ কৰিবা, আৰু তুমি কি কৰিব লাগে, মই তোমাক দেখুৱাম; মই তোমাৰ আগত যিজনৰ বিষয়ে ক’ম, তুমি মোৰ কাৰণে সেই জনকেই অভিষেক কৰিবা।”
4 ೪ ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು
৪চমূৱেলে যিহোৱাই কোৱা অনুসাৰে কৰিলে আৰু বৈৎলেহেমলৈ গ’ল। নগৰৰ বৃদ্ধসকলে তেওঁক লগ ধৰিবলৈ আহি কঁপি কঁপি তেওঁক ক’লে, “আপুনি শান্তিৰ অৰ্থে আহিছে নে?”
5 ೫ ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.
৫তেওঁ ক’লে, “শান্তি হওক; মই যিহোৱাৰ উদ্দেশে বলিদান দিবলৈ আহিছোঁ। বলিদানৰ অৰ্থে তোমালোকে নিজকে পবিত্ৰ কৰি মোৰ লগত আহাঁ।” আৰু তেওঁ যিচয়ক আৰু তেওঁৰ পুত্ৰসকলক পবিত্ৰকৃত কৰিলে আৰু বলিদানৰ কাৰণে নিমন্ত্ৰণ কৰিলে।
6 ೬ ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.
৬তাৰ পাছত তেওঁলোক যেতিয়া আহিল, তেতিয়া চমূৱেলে ইলীয়াবলৈ চাই মনতে ক’লে, “যিহোৱাৰ আগত উপস্থিত হোৱা এই মানুহেই অৱশ্যে তেওঁৰ অভিষিক্ত জন।”
7 ೭ ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
৭কিন্তু যিহোৱাই চমূৱেলক ক’লে, “তুমি তেওঁৰ বাহ্যিকতালৈ বা উচ্চতালৈ দৃষ্টি নকৰিবা; কাৰণ মই তেওঁক অগ্ৰাহ্য কৰিলোঁ। কাৰণ মানুহে যেনেকৈ চাই যিহোৱাই তেনেকৈ নাচায়; কাৰণ মানুহে, যি দেখা পায়, তালৈ চায়, কিন্তু যিহোৱাই মানুহৰ অন্তৰলৈ চায়।”
8 ೮ ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ” ಎಂದನು.
৮পাছত যিচয়ে অবীনাদবক মাতি আনিলে আৰু চমূৱেলৰ সন্মুখেদি যাবলৈ দিলে। তাতে চমূৱেলে ক’লে, “যিহোৱাই এওঁকো মনোনীত কৰা নাই।”
9 ೯ ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, “ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ” ಎಂದು ಹೇಳಿದನು.
৯তাৰ পাছত যিচয়ে চম্মাক আগেদি যাবলৈ দিলে; আৰু চমূৱেলে ক’লে, যিহোৱাই এওঁকো মনোনীত কৰা নাই।
10 ೧೦ ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, “ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ” ಎಂದು ನುಡಿದನು.
১০এইদৰে যিচয়ে তেওঁৰ সাত জন পুত্ৰক চমূৱেলৰ আগেদি যাবলৈ দিলে; কিন্তু চমূৱেলে যিচয়ক ক’লে, “যিহোৱাই এওঁলোকৰ এজনকো মনোনীত কৰা নাই।”
11 ೧೧ ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.
১১তাৰ পাছত চমূৱেলে যিচয়ক ক’লে, “তোমাৰ সকলো পুত্ৰ ইয়াতে আছে নে?” তেওঁ উত্তৰ দি ক’লে, “সকলোতকৈ সৰুজন ইয়াত নাই কিন্তু তেওঁ মেৰ-ছাগৰ ৰখীয়া হৈ মেৰ-ছাগ চৰাই আছে।” চমূৱেলে যিচয়ক ক’লে, “মানুহ পঠিয়াই তেওঁক মাতি আনা; কাৰণ তেওঁ নহালৈকে আমি নবহোঁ।”
12 ೧೨ ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು
১২যিচয়ে মানুহ পঠিয়াই তেওঁক মাতি অনালে। তেওঁ স্ৱাস্থ্যৱান, সুনয়ন, আৰু দেখিবলৈ সুদৰ্শন আছিল। যিহোৱাই ক’লে, “উঠা, তেওঁক অভিষেক কৰা; কাৰণ এওঁৱেই সেই জন।”
13 ೧೩ ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
১৩তেতিয়া চমূৱেলে তেল ভৰোৱা শিংটো ল’লে, আৰু ককায়েকসকলৰ আগত তেওঁকেই অভিষেক কৰিলে; সেই দিনাৰ পৰা যিহোৱাৰ আত্মা দায়ূদত স্থিতি হ’ল। তাৰ পাছত চমূৱেল উঠি ৰামালৈ গ’ল।
14 ೧೪ ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ
১৪তাৰ পাছত যিহোৱাৰ আত্মা চৌলৰ পৰা আঁতৰি গ’ল আৰু তাৰ পৰিবৰ্তে যিহোৱাৰ পৰা অহা এক অনিষ্ট কাৰক আত্মাই আহি তেওঁক ব্যাকুল কৰিবলৈ ধৰিলে।
15 ೧೫ ಅವನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ.
১৫চৌলৰ দাসবোৰে তেওঁক ক’লে, “চাওক, ঈশ্বৰৰ পৰা অহা এক অনিষ্ট কাৰক আত্মাই আপোনাক ব্যাকুল কৰিছে।
16 ೧೬ ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.
১৬এই হেতুকে আমাৰ প্ৰভুৱে আপোনাৰ আগত থকা দাসবোৰক এজন নিপূণ বীণা বজাওঁতা বিচাৰিবলৈ আজ্ঞা কৰক; পাছত যি সময়ত ঈশ্বৰৰ পৰা অহা সেই আত্মাই আপোনাক ধৰিব সেই সময়ত সেই মানুহে হাতেৰে বীণা বজালে আপুনি উপশম পাব।”
17 ೧೭ ಸೌಲನು ಅವರಿಗೆ, “ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
১৭তেতিয়া চৌলে তেওঁৰ দাসবোৰক আজ্ঞা কৰিলে, “ভালকৈ বীণা বজাব পৰা এজন লোক বিচাৰি যোৱা আৰু মোৰ ওচৰলৈ আনা।”
18 ೧೮ ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.
১৮দাসবোৰৰ এজনে ক’লে, “চাওক, বৈৎলেহেমীয়া যিচয়ৰ এজন পুতেকক দেখিলোঁ; তেওঁ বীণা বজোৱাত পাৰ্গত, পৰাক্ৰমী বীৰ, যুদ্ধাৰু, কথা কোৱাত বিবেচক, ৰূপৱান আৰু যিহোৱা তেওঁৰ লগত আছে।”
19 ೧೯ ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿಸಿದನು.
১৯সেয়ে চৌলে যিচয়ৰ ওচৰলৈ বার্তাবাহকক পঠিয়াই কোৱালে, “দায়ুদ নামেৰে তোমাৰ যি পুত্ৰই মেৰ-ছাগ চৰাই আছে, তেওঁক মোৰ ওচৰলৈ পঠাই দিয়া।”
20 ೨೦ ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.
২০যিচয়ে এটা গাধৰ পিঠিত পিঠা, এক বটল দ্ৰাক্ষাৰস, আৰু এটা ছাগলী পোৱালি বোজাই দি তেওঁৰ পুত্ৰ দায়ূদৰ হাতত দিলে আৰু তেওঁক চৌলৰ ওচৰলৈ পঠাই দিলে।
21 ೨೧ ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.
২১দায়ুদ চৌলৰ ওচৰলৈ আহি তেওঁৰ কামত যোগ দিলে, তেওঁ দায়ূদক অতিশয় ভাল পাবলৈ ধৰিলে; আৰু দায়ুদ তেওঁৰ অস্ত্ৰবাহক হ’ল।
22 ೨೨ ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.
২২তাৰ পাছত চৌলে যিচয়ক কৈ পঠালে, “মই বিনয় কৰোঁ, দায়ূদক মোৰ লগত থাকিবলৈ দিয়া; কাৰণ তেওঁ মোৰ দৃষ্টিত অনুগ্ৰহপ্ৰাপ্ত হ’ল।”
23 ೨೩ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.
২৩সেয়ে ঈশ্বৰৰ পৰা অহা অনিষ্ট কাৰক আত্মাই যেতিয়া চৌলক ধৰে, তেতিয়া দায়ূদে বীণা লৈ হাতেৰে বজায়; তাতে চৌল সুস্থ হয়, আৰু উপশম পায়, আৰু সেই অনিষ্ট কাৰক আত্মা তেওঁৰ পৰা আঁতৰি যায়।