< ಸಮುವೇಲನು - ಪ್ರಥಮ ಭಾಗ 16 >

1 ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
Y dijo el SEÑOR a Samuel: ¿Hasta cuándo has tú de llorar a Saúl, habiéndolo yo desechado para que no reine sobre Israel? Llena tu cuerno de aceite, y ven, te enviaré a Isaí de Belén; porque de sus hijos me he provisto de rey.
2 ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.
Y dijo Samuel: ¿Cómo iré? Si Saúl lo entendiere, me matará. El SEÑOR respondió: Toma contigo una becerra, y di: A sacrificar al SEÑOR he venido.
3 ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.
Y llama a Isaí al sacrificio, y yo te enseñaré lo que has de hacer; y me ungirás al que yo te dijere.
4 ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು
Y Samuel hizo como le dijo el SEÑOR; y cuando él llegó a Belén, los ancianos de la ciudad le salieron a recibir con miedo, y dijeron: ¿Es pacífica tu venida?
5 ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.
Y él respondió: Sí, vengo a sacrificar al SEÑOR; santificaos, y venid conmigo al sacrificio. Y santificando él a Isaí y a sus hijos, los llamó al sacrificio.
6 ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.
Y aconteció que cuando ellos vinieron, él vio a Eliab, y dijo: ¿Por ventura está delante del SEÑOR su ungido?
7 ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
Y el SEÑOR respondió a Samuel: No mires a su parecer, ni a la altura de su estatura, porque yo lo desecho; porque no es lo que el hombre ve. Porque el hombre ve lo que está delante de sus ojos, mas el SEÑOR ve el corazón.
8 ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ” ಎಂದನು.
Entonces llamó Isaí a Abinadab, y le hizo pasar delante de Samuel, el cual dijo: Ni a éste ha elegido el SEÑOR.
9 ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, “ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ” ಎಂದು ಹೇಳಿದನು.
Hizo luego pasar Isaí a Sama. Y él dijo: Tampoco a éste ha elegido el SEÑOR.
10 ೧೦ ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, “ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ” ಎಂದು ನುಡಿದನು.
E hizo pasar Isaí sus siete hijos delante de Samuel; mas Samuel dijo a Isaí: el SEÑOR no ha elegido a éstos.
11 ೧೧ ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.
Entonces dijo Samuel a Isaí: ¿Se han acabado los jóvenes? Y él respondió: Aún queda el menor, que apacienta las ovejas. Y dijo Samuel a Isaí: Envía por él, porque no nos sentaremos a la mesa hasta que él venga aquí.
12 ೧೨ ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು
Envió, pues, por él, y lo introdujo; el cual era rojo, (de buen color), de hermoso parecer y de bello aspecto. Entonces el SEÑOR dijo: Levántate y úngelo, que éste es.
13 ೧೩ ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
Y Samuel tomó el cuerno del aceite, y lo ungió de entre sus hermanos; y desde aquel día en adelante el Espíritu del SEÑOR tomó a David. Y levantándose Samuel, se volvió a Ramá.
14 ೧೪ ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ
Y el Espíritu del SEÑOR se apartó de Saúl, y le atormentaba el espíritu malo de parte del SEÑOR.
15 ೧೫ ಅವನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ.
Y los criados de Saúl le dijeron: He aquí ahora, que el espíritu malo de parte de Dios te atormenta.
16 ೧೬ ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.
Diga, pues, nuestro señor a tus siervos que están delante de ti, que busquen alguno que sepa tocar el arpa; para que cuando fuere sobre ti el espíritu malo de parte de Dios, él taña con su mano, y tengas alivio.
17 ೧೭ ಸೌಲನು ಅವರಿಗೆ, “ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
Y Saúl respondió a sus criados: Buscadme, pues, ahora alguno que taña bien, y traédmelo.
18 ೧೮ ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.
Entonces uno de los criados respondió, diciendo: He aquí yo he visto a un hijo de Isaí de Belén, que sabe tocar, y es valiente y vigoroso, y hombre de guerra, prudente en sus palabras, y hermoso, y el SEÑOR es con él.
19 ೧೯ ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿಸಿದನು.
Y Saúl envió mensajeros a Isaí, diciendo: Envíame a David tu hijo, el que está con las ovejas.
20 ೨೦ ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.
Y tomó Isaí un asno cargado de pan, y un cántaro de vino y un cabrito, y lo envió a Saúl por mano de David su hijo.
21 ೨೧ ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.
Y viniendo David a Saúl, estuvo delante de él; y él lo amó mucho, y fue hecho su paje de armas.
22 ೨೨ ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.
Y Saúl envió a decir a Isaí: Yo te ruego que esté David conmigo; porque ha hallado gracia en mis ojos.
23 ೨೩ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.
Y cuando el espíritu malo de parte de Dios era sobre Saúl, David tomaba el arpa, y tañía con su mano; y Saúl tenía refrigerio, y estaba mejor, y el espíritu malo se apartaba de él.

< ಸಮುವೇಲನು - ಪ್ರಥಮ ಭಾಗ 16 >