< ಸಮುವೇಲನು - ಪ್ರಥಮ ಭಾಗ 19 >
1 ೧ ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.
Mluvil pak Saul k Jonatovi synu svému a ke všechněm služebníkům svým, aby zamordovali Davida, ale Jonata syn Saulův liboval sobě Davida velmi.
2 ೨ ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.
I oznámil to Jonata Davidovi, řka: Usiluje Saul otec můj, aby tě zabil; protož nyní šetř se, prosím, až do jitra, a usadě se v skrytě, schovej se.
3 ೩ ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು.
Ale jáť vyjdu a státi budu při boku otci svému na poli, kdež ty budeš, a budu mluviti o tobě s otcem svým, a čemuž vyrozumím, oznámím tobě.
4 ೪ ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.
I mluvil Jonata o Davidovi dobře Saulovi otci svému, a řekl: Nechť nehřeší král proti služebníku svému Davidovi, nebť jest nic tobě neprovinil, nýbrž správa jeho jest tobě velmi užitečná.
5 ೫ ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.
Nebo se opovážil života svého a zabil Filistinského, a učinil Hospodin vysvobození veliké všemu Izraeli. Viděls to a radoval jsi se. Pročež bys tedy hřešil proti krvi nevinné, chtěje zabiti Davida bez příčiny?
6 ೬ ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, “ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣಮಾಡಿದನು.
I uposlechl Saul řeči Jonatovy a přisáhl Saul, řka: Živť jest Hospodin, žeť nebude zabit.
7 ೭ ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.
Tedy Jonata povolal Davida, a oznámil jemu Jonata všecka slova tato. A přivedl Jonata Davida k Saulovi, i byl před ním jako i prvé.
8 ೮ ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು.
Vznikla pak opět válka; a vytáh David, bojoval proti Filistinským, a porazil je porážkou velikou, a utekli před ním.
9 ೯ ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.
V tom duch Hospodinův zlý napadl Saule, kterýž v domě svém seděl, maje kopí své v ruce své, a David hrál rukou před ním.
10 ೧೦ ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.
Ale Saul chtěl prohoditi Davida kopím až do stěny; kterýž uhnul se mu, a udeřilo kopí v stěnu. A tak David utekl a vynikl z nebezpečenství té noci.
11 ೧೧ ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ
Potom poslal Saul posly k domu Davidovu, aby ho střáhli a zabili jej ráno. I oznámila to Davidovi Míkol manželka jeho, řkuci: Jestliže se neopatříš noci této, zítra zabit budeš.
12 ೧೨ ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು.
A protož spustila Míkol Davida oknem, kterýž odšed, utekl a vynikl z nebezpečenství.
13 ೧೩ ಅನಂತರ ಆಕೆಯು ಮನೆಯಲ್ಲಿದ್ದ ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು.
Vzala pak Míkol obraz a vložila na lůže, a polštář kozí položila v hlavách jeho a přikryla šaty.
14 ೧೪ ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು.
Tedy Saul poslal posly, aby vzali Davida. I řekla: Jest nemocen.
15 ೧೫ ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು.
Opět poslal Saul posly, aby pohleděli na Davida, řka: Přineste ho na lůži ke mně, ať ho zabiji.
16 ೧೬ ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು.
A když přišli poslové, a aj, obraz ležel na lůži a polštář kozí v hlavách jeho.
17 ೧೭ ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು.
I řekl Saul k Míkol: Proč jsi mne tak podvedla a pustilas nepřítele mého, aby ušel? Odpověděla Míkol Saulovi: On mi řekl: Propusť mne, sic jinak zabiji tě.
18 ೧೮ ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.
David tedy utíkaje, vynikl z nebezpečenství, a přišed k Samuelovi do Ráma, oznámil jemu všecko, co mu Saul učinil. I odšel on i Samuel, a bydlili v Náiot.
19 ೧೯ ದಾವೀದನು ರಾಮದ ನಯೋತಿನಲ್ಲಿರುವುದು ಸೌಲನಿಗೆ ಗೊತ್ತಾಗಲು,
Oznámeno pak bylo Saulovi, řka: Aj, David jest v Náiot v Ráma.
20 ೨೦ ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.
I poslal Saul posly, aby jali Davida. Kteříž když viděli zástup proroků prorokujících, a Samuele jim představeného, an stojí, sstoupil také na posly Saulovy Duch Boží, a prorokovali i oni.
21 ೨೧ ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು.
To když oznámili Saulovi, poslal jiné posly, a prorokovali také i oni; a opět poslal Saul třetí posly, a i ti prorokovali.
22 ೨೨ ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ದಾವೀದರು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಆಗ ಜನರು, “ರಾಮದ ನಯೋತಿನಲ್ಲಿ ಇರುತ್ತಾರೆ” ಎಂದು ಉತ್ತರಕೊಟ್ಟರು.
Šel tedy již sám do Ráma a přišel až k čisterni veliké, kteráž jest v Socho, a zeptal se, řka: Kde jest Samuel a David? I řekl někdo: Aj, jsou v Náiot v Ráma.
23 ೨೩ ಅವನು ಅಲ್ಲಿಂದ ರಾಮದ ನಯೋತಿಗೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವ ತನಕ ಪ್ರವಾದಿಸುತ್ತಾ ಹೋದನು.
I šel tam do Náiot v Ráma; a sstoupil i na něj Duch Boží, a jda dále, prorokoval, až i přišel do Náiot v Ráma.
24 ೨೪ ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು.
Kdežto svlékl také sám roucho své a prorokoval i on před Samuelem, a padna, ležel svlečený celý ten den a noc. Odkudž se říká: Zdali také Saul mezi proroky?