< ಸಮುವೇಲನು - ಪ್ರಥಮ ಭಾಗ 22 >

1 ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು.
Or, David partit de là, et se sauva dans la caverne d'Adullam; et ses frères et toute la maison de son père l'apprirent, et descendirent là vers lui.
2 ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.
Et tous ceux aussi qui étaient mal dans leurs affaires, et tous ceux qui avaient des créanciers, et tous ceux qui avaient le cœur plein d'amertume, s'assemblèrent vers lui, et il fut leur chef; il y eut ainsi avec lui environ quatre cents hommes.
3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, “ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು.
Puis David s'en alla de là à Mitspé de Moab. Et il dit au roi de Moab: Je te prie, que mon père et ma mère se retirent chez vous, jusqu'à ce que je sache ce que Dieu fera de moi.
4 ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಈ ಅರಸನ ಬಳಿಯಲ್ಲಿ ವಾಸವಾಗಿದ್ದರು.
Et il les amena devant le roi de Moab, et ils demeurèrent avec lui tout le temps que David fut dans cette forteresse.
5 ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.
Or, Gad, le prophète, dit à David: Ne demeure point dans cette forteresse; va-t'en, et entre au pays de Juda. David s'en alla donc, et vint dans la forêt de Héreth.
6 ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು, ಗಿಬೆಯ ಗುಡ್ಡದ ಪಿಚುಲ ವೃಕ್ಷದ ಕೆಳಗೆ ಕುಳಿತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ತಿಳಿದುಬಂದಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.
Et Saül apprit qu'on avait découvert David, et les gens qui étaient avec lui. Or, Saül était assis sous un tamarin sur la hauteur, à Guibea, sa lance à la main; et tous ses serviteurs se tenaient devant lui.
7 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?
Et Saül dit à ses serviteurs, qui se tenaient devant lui: Écoutez, Benjamites; le fils d'Isaï vous donnera-t-il, à tous, des champs et des vignes? vous établira-t-il tous chefs de milliers et de centaines?
8 ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ” ಅಂದನು
Que vous ayez tous conspiré contre moi, et que nul ne m'avertisse que mon fils a fait alliance avec le fils d'Isaï, et que personne de vous ne soit touché de mon état, et ne m'avertisse que mon fils a soulevé mon serviteur contre moi, pour me dresser des embûches, comme il le fait aujourd'hui.
9 ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.
Alors Doëg, l'Iduméen, qui était le chef des serviteurs de Saül, répondit et dit: J'ai vu le fils d'Isaï venir à Nob, vers Achimélec, fils d'Achitub,
10 ೧೦ ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ, ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.
Qui a consulté l'Éternel pour lui, et lui a donné des vivres; il lui a aussi donné l'épée de Goliath, le Philistin.
11 ೧೧ ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನೂ, ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೆದುಕೊಂಡು ಬರುವಂತೆ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು,
Alors le roi envoya appeler Achimélec, fils d'Achitub, le sacrificateur, et toute la famille de son père, les sacrificateurs qui étaient à Nob; et ils vinrent tous vers le roi.
12 ೧೨ ಸೌಲನು, “ಅಹೀಟೂಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು.
Et Saül dit: Écoute, fils d'Achitub. Et il répondit: Me voici, mon seigneur.
13 ೧೩ ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು
Alors Saül lui dit: Pourquoi avez-vous conspiré contre moi, toi et le fils d'Isaï, quand tu lui as donné du pain et une épée, et que tu as consulté Dieu pour lui, afin qu'il s'élevât contre moi, pour me dresser des embûches, comme il le fait aujourd'hui?
14 ೧೪ ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?
Et Achimélec répondit au roi, et dit: Et qui donc, entre tous tes serviteurs, est aussi fidèle que David, gendre du roi, qui est parti sur ton ordre, et qui est honoré dans ta maison?
15 ೧೫ ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು.
Ai-je commencé aujourd'hui à consulter Dieu pour lui? Loin de moi cette pensée! Que le roi n'impute rien à son serviteur, ni à toute la maison de mon père; car ton serviteur ne sait de tout ceci aucune chose, ni petite ni grande.
16 ೧೬ ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ
Et le roi dit: Certainement, tu mourras, Achimélec, toi et toute la famille de ton père!
17 ೧೭ ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.
Alors le roi dit aux archers qui se tenaient devant lui: Tournez-vous, et faites mourir les sacrificateurs de l'Éternel; parce qu'ils ont aussi prêté la main à David, qu'ils ont bien su qu'il s'enfuyait, et ne m'en ont point averti. Mais les serviteurs du roi ne voulurent point porter la main ni se jeter sur les sacrificateurs de l'Éternel.
18 ೧೮ ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.
Alors le roi dit à Doëg: Tourne-toi, et jette-toi sur les sacrificateurs. Et Doëg, l'Iduméen, se tourna, et se jeta sur les sacrificateurs, et tua, en ce jour-là, quatre-vingt-cinq hommes portant l'éphod de lin;
19 ೧೯ ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.
Et il fit passer Nob, ville des sacrificateurs, au fil de l'épée, les hommes et les femmes, les enfants et les nourrissons; les bœufs aussi, les ânes, et le menu bétail, au fil de l'épée.
20 ೨೦ ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,
Toutefois, un des fils d'Achi-mélec, fils d'Achitub, qui s'appelait Abiathar, se sauva et s'enfuit auprès de David.
21 ೨೧ ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.
Et Abiathar rapporta à David, que Saül avait tué les sacrificateurs de l'Éternel.
22 ೨೨ ದಾವೀದನು ಎದೋಮ್ಯನಾದ ದೋಯೇಗನನ್ನು, “ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ತಿಳಿದುಕೊಂಡೆನು. ನಿನ್ನ ಸಂಬಂಧಿಕರ ಸಾವಿಗೆ ನಾನೇ ಕಾರಣನಾದೆನಲ್ಲಾ.
Et David dit à Abiathar: Je compris bien, ce jour-là, puisque Doëg, l'Iduméen, s'y trouvait, qu'il ne manquerait point de le rapporter à Saül. Je suis cause de la mort de toutes les personnes de la famille de ton père;
23 ೨೩ ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು.
Demeure avec moi; ne crains rien; car celui qui cherche ma vie, cherche la tienne; tu seras bien gardé avec moi.

< ಸಮುವೇಲನು - ಪ್ರಥಮ ಭಾಗ 22 >