< ಸಮುವೇಲನು - ಪ್ರಥಮ ಭಾಗ 24 >
1 ೧ ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿದುಬಂದಿತು.
১পরে শৌল পলেষ্টীয়দের আর তাড়া না করে ফিরে এলে লোকে তাঁকে এই খবর দিল, “দেখুন, দায়ূদ ঐন-গদীর উপত্যকায় আছে৷”
2 ೨ ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು.
২তাতে শৌল সমস্ত ইস্রায়েল থেকে নির্বাচিত তিন হাজার লোক নিয়ে বন্য ছাগলের শৈলের উপরে দায়ূদের ও তাঁর লোকদের খোঁজে গেলেন৷
3 ೩ ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಭಾಗದಲ್ಲಿ ಅಡಗಿಕೊಂಡಿದ್ದರು.
৩পথের মধ্যে তিনি মেষবাথানে উপস্থিত হলেন; সেখানে এক গুহা ছিল; আর শৌল পা ঢাকবার জন্য তার মধ্যে প্রবেশ করলেন; কিন্তু দায়ূদ ও তাঁর লোকেরা সেই গুহার একদম ভেতরে বসেছিলেন৷
4 ೪ ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.
৪তখন দায়ূদের লোকেরা তাঁকে বলল, “দেখুন, এ সেই দিন, যে দিনের র কথা সদাপ্রভু আপনাকে বলেছেন, দেখ, আমিই তোমার শত্রুকে তোমার হাতে সমর্পণ করব, তখন তুমি তার প্রতি যা ভালো বুঝবে, তাই করবে৷” তাতে দায়ূদ উঠে চুপিচুপি শৌলের কাপড়ের সামনের অংশ কেটে নিলেন৷
5 ೫ ಅನಂತರ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಚುಚ್ಚತೊಡಗಿತು.
৫তারপরে, শৌলের কাপড়ের অংশ কাটাতে দায়ূদের হৃদয় ধুকধুক করতে লাগল;
6 ೬ ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು
৬আর তিনি নিজের লোকদেরকে বললেন, “আমার প্রভুর প্রতি, সদাপ্রভুর অভিষিক্তের প্রতি এমন কাজ করতে, তাঁর বিরুদ্ধে আমার হাত তুলতে সদাপ্রভু আমাকে না দিন; কারণ তিনি সদাপ্রভুর অভিষিক্ত৷”
7 ೭ ಈ ಮಾತುಗಳಿಂದ ಅವನು ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ
৭এইরকম কথা বলে দায়ূদ নিজের লোকদেরকে শাসন করলেন, শৌলের বিরুদ্ধে যেতে দিলেন না৷ পরে শৌল উঠে গুহা থেকে বেরিয়ে গিয়ে নিজের পথে চললেন৷
8 ೮ ದಾವೀದನೂ ಹೊರಗೆ ಬಂದು, “ಅರಸನೇ ನನ್ನ ಒಡೆಯನೇ” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ,
৮তারপরে দায়ূদও উঠে গুহা থেকে বেরিয়ে এলেন এবং শৌলকে পিছন থেকে ডেকে বললেন, “হে আমার প্রভু মহারাজ,” আর শৌল পিছনের দিকে তাকালে দায়ূদ ভূমিতে মাথা নিচু করে প্রণাম করলেন৷
9 ೯ “ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ?
৯আর দায়ূদ শৌলকে বললেন, “মানুষের এমন কথা আপনি কেন শোনেন যে, ‘দেখুন, দায়ূদ আপনার ক্ষতি করার চেষ্টা করছে?’
10 ೧೦ ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆನು.
১০দেখুন, আপনি আজ নিজের চোখে দেখছেন, আজ এই গুহার মধ্যে সদাপ্রভু আপনাকে আমার হাতে সমর্পণ করেছিলেন এবং কেউ আপনাকে হত্যা করবার পরামর্শ দিয়েছিল, কিন্তু আপনার উপরে মমতা হল, আমি বললাম, ‘আমার প্রভুর বিরুদ্ধে হাত তুলব না, কারণ তিনি সদাপ্রভুর অভিষিক্ত৷’
11 ೧೧ ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.
১১আর হে আমার পিতা, দেখুন; হ্যাঁ, আমার হাতে আপনার কাপড়ের এই অংশ দেখুন; কারণ আমি আপনার কাপড়ের সামনের অংশ কেটে নিয়েছি, তবুও আপনাকে হত্যা করি নি, এতে আপনি বিচার করে দেখবেন, আমি হিংসায় কি অধর্মে হাত তুলি না এবং আপনার বিরুদ্ধে পাপ করি নি; তবুও আপনি আমার প্রাণ কেড়ে নেবার জন্য [শিকার] মৃগয়া করছেন৷
12 ೧೨ ಯೆಹೋವನೇ ನಮ್ಮಿಬ್ಬರ ಮಧ್ಯೆ ವ್ಯಾಜ್ಯವನ್ನು ತೀರಿಸಲಿ. ಆತನೇ ನನಗೋಸ್ಕರ ನಿನಗೆ ಮುಯ್ಯಿ ತೀರಿಸಲಿ. ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
১২সদাপ্রভু আমার ও আপনার মধ্যে বিচার করবেন, আপনার করা অন্যায় থেকে আমাকে উদ্ধার করবেন, কিন্তু আমার হাত আপনার বিরুদ্ধে উঠবে না৷
13 ೧೩ ‘ಕೆಟ್ಟವರಿಂದಲೇ ಕೆಡುಕು’ ಎಂಬುದಾಗಿ ಹಿರಿಯರ ಗಾದೆಯುಂಟಷ್ಟೆ. ನಾನು ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
১৩প্রাচীনদের প্রবাদে বলে, ‘দুষ্টদের থেকেই দুষ্টতা জন্মায়,’ কিন্তু আমার হাত আপনার বিরুদ্ধ হবে না৷
14 ೧೪ ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?
১৪ইস্রায়েলের রাজা কার পিছনে বেরিয়ে এসেছেন? আপনি কার পিছনে পিছনে তাড়া করছেন? একটা মৃত কুকুরের পিছনে, একটা মাছির পিছনে৷
15 ೧೫ ಯೆಹೋವನು ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ” ಎಂದು ಹೇಳಿದನು.
১৫কিন্তু সদাপ্রভু বিচারকর্ত্তা হন, তিনি আমার ও আপনার মধ্যে বিচার করুন; আর তিনি দৃষ্টিপাত করে আমার বিবাদ শেষ করুন এবং আপনার হাত থেকে আমাকে রক্ষা করুন৷”
16 ೧೬ ದಾವೀದನ ಮಾತುಗಳು ಮುಗಿದ ನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಅಂದು ಗಟ್ಟಿಯಾಗಿ ಅತ್ತನು.
১৬দায়ূদ শৌলের কাছে এই সব কথা শেষ করলে শৌল জিজ্ঞাসা করলেন, “হে আমার সন্তান দায়ূদ, এ কি তোমার স্বর?” আর শৌল খুব জোরে কাঁদলেন৷
17 ೧೭ ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದಿ.
১৭পরে তিনি দায়ূদকে বললেন, “আমার থেকে তুমি ধার্মিক, কারণ তুমি আমার উপকার করেছ, কিন্তু আমি তোমার অপকার করেছি৷
18 ೧೮ ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು.
১৮তুমি আমার প্রতি কেমন ভালো ব্যবহার করে আসছ, তা আজ দেখালে; সদাপ্রভু আমাকে তোমার হাতে সমর্পণ করলেও তুমি আমাকে হত্যা করনি৷
19 ೧೯ ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.
১৯মানুষ নিজের শত্রুকে পেলে কি তাকে ভালোর পথে ছেড়ে দেয়? আজ তুমি আমার প্রতি যা করলে, তার প্রতিশোধে সদাপ্রভু তোমার মঙ্গল করুন৷
20 ೨೦ ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು.
২০এখন দেখ, আমি জানি, তুমি অবশ্যই রাজা হবে, আর ইস্রায়েলের রাজ্য তোমার হাতে স্থির থাকবে৷
21 ೨೧ ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು.
২১অতএব এখন সদাপ্রভুর নামে আমার কাছে দিব্যি কর যে, তুমি আমার পরে আমার বংশ বিনাশ করবে না ও আমার বাবার বংশ থেকে আমার নাম লোপ করবে না৷”
22 ೨೨ ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.
২২তখন দায়ূদ শৌলের কাছে দিব্যি করলেন৷ পরে শৌল বাড়ি চলে গেলেন, কিন্তু দায়ূদ ও তাঁর লোকেরা সুরক্ষিত জায়গায় উঠে গেলেন৷