< ಸಮುವೇಲನು - ಪ್ರಥಮ ಭಾಗ 25 >
1 ೧ ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
Så døde Samuel, og hele Israel samlet sig og gråt over ham, og de begravde ham i hans hjem i Rama. Da brøt David op og drog ned til ørkenen Paran.
2 ೨ ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.
I Maon var det en mann som hadde sin buskap i Karmel. Det var en meget rik mann; han eide tre tusen får og tusen gjeter. Han holdt just på å klippe sine får i Karmel.
3 ೩ ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.
Mannens navn var Nabal, og hans hustru hette Abiga'il; hun var en forstandig og fager kvinne, men mannen var hård og ond i hele sin adferd. Han var av Kalebs ætt.
4 ೪ ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.
Mens David var i ørkenen, fikk han høre at Nabal var i ferd med å klippe sine får.
5 ೫ ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ.
Da sendte David ti av sine menn avsted og sa til dem: Gå op til Karmel, og når I kommer til Nabal, så hils ham fra mig
6 ೬ ಅವನಿಗೆ ನನ್ನ ಹೆಸರಿನಲ್ಲಿ ‘ನಿನಗೂ, ನಿನ್ನ ಕುಟುಂಬಕ್ಕೂ, ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.
og si: Lykke til! Fred være med dig, og fred med ditt hus, og fred med alt det du har!
7 ೭ ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ. ಅವರಿಗೇನೂ ನಷ್ಟವಾಗಲಿಲ್ಲ.
Jeg har hørt at du har fåreklipning. Nu har dine hyrder vært sammen med oss; vi har ikke gjort dem fortred, og der er intet kommet bort for dem i all den tid de har vært i Karmel.
8 ೮ ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.
Spør dine folk! De vil fortelle dig det. La nu oss tjenere finne nåde for dine øine! Vi er jo kommet hit på en gledesdag; gi da dine tjenere og din sønn David hvad du har forhånden!
9 ೯ ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕ್ಕಾಗಿ ಕಾಯುತ್ತಿದ್ದರು.
Da Davids menn kom dit, sa de alt dette til Nabal i Davids navn; så stod de og ventet.
10 ೧೦ ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.
Men Nabal svarte Davids tjenere og sa: Hvem er David, hvem er Isais sønn? Nu om dagene er der mange tjenere som løper bort fra sine herrer.
11 ೧೧ ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.
Skulde så jeg ta mitt brød og mitt vann og mitt slaktefe, som jeg har slaktet til dem som klipper for mig, og gi det til menn om hvem jeg ikke vet hvor de er fra?
12 ೧೨ ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ,
Davids menn vendte om og gikk sin vei, og da de kom hjem igjen, fortalte de ham alt dette.
13 ೧೩ ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.
Da sa David til sine menn: Spenn sverdet om eder, alle mann! Så spente de alle sine sverd om sig, og David spente og sverdet om sig. Og de fulgte David op; det var omkring fire hundre mann, og to hundre blev igjen ved trosset.
14 ೧೪ ನಾಬಾಲನ ಸೇವಕರಲ್ಲಿ ಒಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ಧಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು, ಧಣಿಯು ಬಂದವರನ್ನು ಬೈದನು ಕಳುಹಿಸಿದನು.
Men en av folkene fortalte det til Abiga'il, Nabals hustru, og sa: David sendte bud fra ørkenen med hilsen til vår herre; men han skjelte dem ut.
15 ೧೫ ಆ ಜನರು ನಮಗೆ ಬಹಳ ಉಪಕಾರ ಮಾಡಿದವರು. ನಾವು ಅವರೊಡನೆ ಮರುಭೂಮಿಯಲ್ಲಿದ್ದ ಕಾಲವೆಲ್ಲಾ ಅವರು ನಮಗೆ ಏನೂ ತೊಂದರೆಕೊಡಲಿಲ್ಲ, ನಾವು ನಷ್ಟಹೊಂದಲಿಲ್ಲ.
Og disse menn har vært meget gode mot oss, og ingen har gjort oss nogen fortred, og vi har ikke mistet noget i all den tid vi ferdedes sammen med dem, når vi var ute på marken.
16 ೧೬ ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲು ಗೋಡೆಯಂತಿದ್ದರು.
De var som en mur omkring oss både natt og dag i all den tid vi var sammen med dem og gjætte småfeet.
17 ೧೭ ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.
Tenk nu efter, så du vet hvad du skal gjøre! For ulykken henger over vår herre og hele hans hus, og selv er han et ondt menneske, så ingen kan tale til ham.
18 ೧೮ ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,
Da skyndte Abiga'il sig og tok to hundre brød og to skinnsekker med vin og fem får som var tillaget og fem mål ristet korn og hundre rosinkaker og to hundre fikenkaker og la dem på asenene.
19 ೧೯ ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.
Og hun sa til sine folk: Dra i forveien for mig! Jeg kommer snart efter. Men til sin mann Nabal sa hun ikke noget om dette.
20 ೨೦ ಆಕೆ ಕತ್ತೆಯ ಮೇಲೆ ಕುಳಿತುಕೊಂಡು ಗುಡ್ಡದ ಬದಿಯಲ್ಲಿ ಹೋಗುತ್ತಿರುವಾಗ, ದಾವೀದನೂ ಅವನ ಜನರೂ ಗುಡ್ಡ ಇಳಿದು ಆ ಕಡೆಯಿಂದ ಬರಲು ಆಕೆಯು ಅವರನ್ನು ಎದುರುಗೊಂಡಳು.
Mens hun nu red på asenet og kom ned i en hulvei i fjellet, fikk hun se David og hans menn, som kom ned imot henne, så hun møtte dem.
21 ೨೧ ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.
Men David hadde sagt: Til ingen nytte har jeg vernet om alt det denne mann hadde i ørkenen, så det ikke er kommet bort noget av alt det som tilhørte ham; men han har gjengjeldt mig godt med ondt.
22 ೨೨ ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.
Så sant Gud vil la det gå Davids fiender ille både nu og siden: Jeg vil ikke la en eneste mann av alle dem som hører ham til, bli i live til imorgen!
23 ೨೩ ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಿಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.
Da Abiga'il fikk se David, skyndte hun sig og steg ned av asenet, og hun falt på sitt ansikt for David og bøide sig mot jorden.
24 ೨೪ ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, “ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು.
Og hun falt ned for hans føtter og sa: Det er jeg, herre, det er jeg som har skylden; men la din tjenerinne få lov til å tale til dig, og hør på din tjenerinnes ord!
25 ೨೫ ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.
Herre, akt ikke på denne onde mann Nabal! For som han heter, så er han; Nabal heter han, og full av dårskap er han. Men jeg din tjenerinne har ikke sett de menn som du, herre, hadde sendt.
26 ೨೬ ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.
Og nu, herre, så sant Herren lever, og så sant du selv lever, har Herren hindret dig fra å pådra dig blodskyld og fra å ta dig selv til rette; og nu skal dine fiender og de som søker å volde min herre ulykke, bli som Nabal.
27 ೨೭ ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.
Og denne gave som din tjenestekvinne har hatt med til min herre, la nu den bli gitt til de menn som er i min herres følge!
28 ೨೮ ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.
Forlat din tjenerinne hvad hun har gjort ille! For Herren vil bygge min herre et hus som står fast; for det er Herrens kriger du fører, herre, og ondt er ikke funnet hos dig fra den dag du blev til.
29 ೨೯ ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.
Og om nogen står frem, som forfølger dig og står dig efter livet, da skal min herres liv være gjemt blandt de levendes flokk hos Herren din Gud; men dine fienders liv skal han slynge bort som en sten av slyngen.
30 ೩೦ ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ,
Når da Herren gjør mot dig alt det gode han har lovt dig, herre, og setter dig til fyrste over Israel,
31 ೩೧ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.
så skal ikke dette bli dig til anstøt eller volde dig samvittighetsnag, herre, at du har utøst uskyldig blod og tatt dig selv til rette, herre. Og når Herren gjør vel mot dig, herre, så kom din tjenerinne i hu!
32 ೩೨ ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.
Da sa David til Abiga'il: Lovet være Herren, Israels Gud, som idag har sendt mig dig i møte!
33 ೩೩ ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.
Og velsignet være din klokskap, og velsignet være du selv, som idag har holdt mig tilbake fra å pådra mig blodskyld og ta mig selv til rette!
34 ೩೪ ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.
Men så sant Herren, Israels Gud, lever, han som har holdt mig tilbake fra å gjøre dig ondt: Hadde du ikke skyndt dig å komme mig i møte, da skulde ikke en eneste mann være blitt tilbake for Nabal til imorgen.
35 ೩೫ ಅವನು ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ “ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ” ಅಂದನು.
Så tok David imot de gaver hun hadde hatt med til ham, og han sa til henne: Dra hjem i fred! Jeg har merket mig dine ord og opfylt din bønn.
36 ೩೬ ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.
Da Abiga'il kom hjem til Nabal, var det nettop gjestebud i huset, et gjestebud som hos en konge, og Nabal var lystig og hadde drukket sterkt. Hun fortalte ham intet, hverken smått eller stort, før det blev morgen.
37 ೩೭ ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು.
Men da Nabal om morgenen var våknet av sitt rus, fortalte hans hustru ham alt sammen. Da stivnet hjertet i hans bryst, og han blev som en sten.
38 ೩೮ ಸುಮಾರು ಹತ್ತು ದಿನಗಳಾದನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.
Og omkring ti dager efter slo Herren Nabal, så han døde.
39 ೩೯ ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.
Da David fikk høre at Nabal var død, sa han: Lovet være Herren, som har hevnet min vanære på Nabal og holdt sin tjener tilbake fra å gjøre ondt - Herren, som lot Nabals ondskap komme tilbake på hans eget hode! Så sendte David bud og beilet til Abiga'il for å få henne til hustru.
40 ೪೦ ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ” ಅಂದರು.
Davids tjenere kom til Abiga'il i Karmel, og de bar frem sitt ærend og sa: David har sendt oss til dig for å få dig til hustru.
41 ೪೧ ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು,
Da stod hun op og bøide sig med ansiktet mot jorden og sa: Se, her er din tjenerinne, ferdig til å være din tjenestekvinne og tvette min herres tjeneres føtter.
42 ೪೨ ಬೇಗನೇ ಒಂದು ಕತ್ತೆಯನ್ನು ಹತ್ತಿ, ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟು ಹೋಗಿ ಅವನ ಹೆಂಡತಿಯಾದಳು.
Og Abiga'il skyndte sig og gjorde sig ferdig og satte sig på sitt asen, hun og hennes fem piker, som fulgte henne; og hun drog avsted med de menn David hadde sendt, og blev hans hustru.
43 ೪೩ ಇದಲ್ಲದೆ ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.
Dessuten giftet David sig med Akinoam fra Jisre'el og de blev begge hans hustruer.
44 ೪೪ ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಪುನಃ ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು.
Men Saul hadde gitt sin datter Mikal, Davids hustru, til Palti, sønn av La'is, som var fra Gallim.