< ಸಮುವೇಲನು - ಪ್ರಥಮ ಭಾಗ 26 >
1 ೧ ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವುದು ನಿನಗೆ ಗೊತ್ತಿಲ್ಲವೋ?” ಅಂದರು.
১পরে সীফীয়েরা গিবিয়াতে শৌলের কাছে গিয়ে বলল, “দায়ূদ কি মরুপ্রান্তের সামনের হখীলা পাহাড়ে লুকিয়ে নেই?”
2 ೨ ಆಗ ಸೌಲನು ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅದರ ಮೂಡಣದಿಕ್ಕಿನಲ್ಲಿ,
২তখন শৌল উঠলেন ও সীফ মরুপ্রান্তে দায়ূদের খোঁজে ইস্রায়েলের তিন হাজার মনোনীত লোককে সঙ্গে নিয়ে সীফ মরুপ্রান্তে নেমে গেলেন৷
3 ೩ ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯಮಾಡಿಕೊಂಡರು. ಸೌಲನು ತನ್ನನ್ನು ಹಿಡಿಯುವುದಕ್ಕೋಸ್ಕರ ಅರಣ್ಯಕ್ಕೆ ಬಂದಿದ್ದಾನೆಂಬ ವರ್ತಮಾನವು ಅಲ್ಲಿಯೇ ಇದ್ದ ದಾವೀದನಿಗೆ ತಲುಪಲು
৩আর শৌল মরুপ্রান্তের সামনের হখীলা পাহাড়ে পথের পাশে শিবির স্থাপন করলেন৷ কিন্তু দায়ূদ মরুপ্রান্তে ছিলেন; আর তিনি দেখতে পেলেন, শৌল তাঁর পরে মরুপ্রান্তে আসছেন৷
4 ೪ ಅವನು ಕೂಡಲೇ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು.
৪তখন দায়ূদ চর পাঠিয়ে শৌল সত্যিই এসেছেন, এটা জানলেন৷
5 ೫ ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ, ಸೌಲನೂ, ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ರಥಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು.
৫পরে দায়ূদ উঠে শৌলের শিবিরের জায়গায় গেলেন এবং দায়ূদ শৌলের ও তাঁর সেনাপতি, নেরের ছেলে অবনেরের শোয়ার-জায়গা দেখলেন; শৌল শকটমণ্ডলের মধ্যে শুয়েছিলেন এবং লোকেরা তাঁর চারিদিকে ছাউনি করে রেখেছিল৷
6 ೬ ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.
৬পরে দায়ূদ তখন হিত্তীয় অহীমেলক ও সরূয়ার ছেলে যোয়াবের ভাই অবীশয়কে বললেন, “ঐ শিবিরে শৌলের কাছে তোমরা কে আমার সঙ্গে যাবে?” অবীশয় বলল, “আমি যাব।”
7 ೭ ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.
৭পরে রাতের বেলা দায়ূদ ও অবীশয় শৌলের সৈন্যদের মধ্যে গেলেন। শৌল ছাউনিতে মালপত্রের মাঝখানে ঘুমিয়ে ছিলেন। তাঁর বর্শাটা তাঁর মাথার কাছে মাটিতে পোঁতা ছিল। অব্নের ও সৈন্যেরা তাঁর চারপাশে শুয়ে ছিল।
8 ೮ ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.
৮তখন অবীশয় দায়ূদকে বলল, “আজ ঈশ্বর আপনার শত্রুকে আপনার হাতে তুলে দিয়েছেন। তাই অনুরোধ করি অনুমতি দিন, আমার বর্শার এক ঘায়ে ওঁকে মাটিতে গেঁথে ফেলি। আমাকে দুই বার আঘাত করতে হবে না।”
9 ೯ ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.
৯দায়ূদ অবীশয়কে বললেন, “না, ওঁকে মেরে ফেলো না। সদাপ্রভুর অভিষেক করা লোকের উপর হাত তুলে কে নির্দোষ থাকতে পারে?”
10 ೧೦ ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.
১০দায়ূদ আরো বললেন “জীবন্ত সদাপ্রভুর দিব্যি যে, সদাপ্রভু নিজেই ওকে শাস্তি দেবেন। হয় তিনি এমনিই মারা যাবেন, না হয় যুদ্ধে গিয়ে শেষ হয়ে যাবেন।
11 ೧೧ ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ
১১আমি যে সদাপ্রভুর অভিষেক করা লোকের উপর হাত তুলি, সদাপ্রভু এমন না করুক। কিন্তু তাঁর মাথার কাছ থেকে বর্শাটা এবং জলের পাত্রটা তুলে নিয়ে এস, পরে আমরা চলে যাব।”
12 ೧೨ ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.
১২দায়ূদ তারপর শৌলের মাথার কাছ থেকে তাঁর বর্শা ও জলের পাত্রটা নিয়ে চলে গেলেন। কেউ তা দেখল না, জানল না, কেউ জেগেও উঠল না। কারণ তারা সবাই ঘুমাচ্ছিল, কারণ সদাপ্রভু তাদের একটা গভীর ঘুমের মধ্যে ফেলে রেখেছিলেন।
13 ೧೩ ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು,
১৩পরে দায়ূদ অন্য পারে গিয়ে দূরের একটা পাহাড়ের উপরে গিয়ে দাঁড়ালেন। তাঁদের মধ্য অনেকটা দূরত্ব ছিল,
14 ೧೪ “ಅಬ್ನೇರನೇ ಕಿವಿಗೊಡುವುದಿಲ್ಲವೋ?” ಎಂದು ನೇರನ ಮಗನಾದ ಅವನಿಗೂ, ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ನೇರನು, “ಅರಸನನ್ನು ಕೂಗುವ ನೀನಾರು?” ಎಂದು ಕೇಳಿದನು.
১৪তারপর দায়ূদ সৈন্যদের এবং নেরের ছেলে অব্নেরকে ডাক দিয়ে বললেন, “অব্নের, তুমি কি কিছু বলবে না?” উত্তরে অব্নের বলল, “কে তুমি, রাজাকে ডাকাডাকি করছ?”
15 ೧೫ ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೋ? ಇಸ್ರಾಯೇಲರಲ್ಲಿ ನಿನಗೆ ಸಮಾನನಾದವನು ಯಾರು? ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ. ಜನರಲ್ಲೊಬ್ಬನು ಒಳಕ್ಕೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.
১৫দায়ূদ অব্নেরকে বললেন, “তুমি কি একজন পুরুষ না? ইস্রায়েলীয়দের মধ্যে তোমার সমান আর কে আছে? তবে তুমি কেন শত্রুর বিপক্ষে তোমার প্রভু মহারাজকে পাহারা দিয়ে কেন রাখনি? তোমার প্রভু মহারাজকে মেরে ফেলবার জন্য একজন লোক গিয়েছিল।
16 ೧೬ ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು.
১৬তুমি যা করেছ তা মোটেই ঠিক হয়নি। জীবন্ত সদাপ্রভুর দিব্যি যে, তুমি ও তোমার লোকদের মরা উচিত, কারণ আপনাদের মনিব, যিনি সদাপ্রভুর অভিষেক করা লোক, তাঁকে তোমরা শত্রুদের থেকে পাহারা দিয়ে রাখনি। তুমি একবার দেখ রাজার মাথার কাছে তাঁর যে বর্শা ও জলের পাত্র ছিল সেগুলো কোথায়?”
17 ೧೭ ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು, “ದಾವೀದನೇ ನನ್ನ ಮಗನೇ, ಇದು ನಿನ್ನ ಸ್ವರವೋ” ಎಂದು ಕೇಳಲು ಅವನು, “ಅರಸನೇ, ನನ್ನ ಒಡೆಯನೇ ಹೌದು, ನನ್ನ ಸ್ವರವೇ,
১৭শৌল দায়ূদের গলার স্বর চিনে বললেন, “হে আমার ছেলে দায়ূদ, এ কি সত্যিই তোমার গলার স্বর?” দায়ূদ বললেন, “হ্যাঁ প্রভু মহারাজ, এ আমারই গলার স্বর।”
18 ೧೮ ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೇ? ನಾನೇನು ಮಾಡಿದೆನು?
১৮তারপর তিনি আরও বললেন, “কেন আমার মনিব তাঁর দাসের পিছনে তাড়া করে বেড়াচ্ছেন? আমি কি করেছি? কি অন্যায় করেছি?
19 ೧೯ ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.
১৯আমার মহারাজ, আমার প্রভু, এখন দয়া করে আপনার দাসের কথা শুনুন। যদি সদাপ্রভুই আপনাকে আমার বিরুদ্ধে দাঁড় করিয়ে থাকেন তবে আমার করা উৎসর্গ তাঁর কাছে গ্রহণযোগ্য হোক। কিন্তু যদি মানুষ তা করে থাকে তবে তাদের উপর যেন সদাপ্রভুর অভিশাপ নেমে আসে, কারণ তারা আজ সদাপ্রভুর দেওয়া সম্পত্তিতে আমার যে ভাগ আছে তা থেকে আমাকে তাড়িয়ে দেবার চেষ্টা করছে। তারা বলছে, ‘চলে যাও, দেব-দেবতার পূজা কর গিয়ে।’
20 ೨೦ ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ” ಅಂದನು.
২০কিন্তু আপনার কাছে আমার এই মিনতি যে, সদাপ্রভু নেই এমন দূরের কোন জায়গায় যেন আমার রক্তপাত না হয়। লোকে পাহাড়ে যেমন করে তিতির পাখী ধরতে যায় ইস্রায়েলীয়দের রাজা তেমনি করে একটা পোকার খোঁজে বের হয়ে এসেছেন।”
21 ೨೧ ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು
২১তখন শৌল বললেন, “আমি পাপ করেছি। বত্স দায়ূদ, তুমি ফিরে এস। কারণ আজ প্রাণ তোমার দৃষ্টিতে মূল্যবান ছিল; দেখ আমি বোকার মত কাজ করেছি।”
22 ೨೨ ದಾವೀದನು ಅರಸನಿಗೆ, “ಅರಸನೇ, ಇಗೋ ನಿನ್ನ ಬರ್ಜಿ ಇಲ್ಲಿದೆ, ಸೇವಕರಲ್ಲೊಬ್ಬನು ಬಂದು ಅದನ್ನು ತೆಗೆದುಕೊಂಡು ಹೋಗಲಿ.
২২উত্তরে দায়ূদ বললেন, “মহারাজ, এই যে সেই বর্শা, আপনার কোন লোক এসে ওটা নিয়ে যাক।
23 ೨೩ ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.
২৩সদাপ্রভু প্রত্যেক লোককে তার বিশ্বস্ততা ও সততার পুরষ্কার দেন। সদাপ্রভু আজ আপনাকে আমার হাতে তুলে দিয়েছিলেন, কিন্তু আমি সদাপ্রভুর অভিষেক করা লোকের উপর হাত তুলতে চাই নি।
24 ೨೪ ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.
২৪আজ আমার কাছে আপনার জীবন যেমন মহামূল্যবান হল তেমনি সদাপ্রভুর কাছেও যেন আমার জীবন মহামূল্যবান হয়। তিনি যেন সমস্ত বিপদ থেকে আমাকে উদ্ধার করেন।”
25 ೨೫ ಆಗ ಸೌಲನು ದಾವೀದನಿಗೆ, “ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು.
২৫তখন শৌল দায়ূদকে বললেন, “বত্স দায়ূদ, তুমি ধন্য! তুমি অবশ্যই অনেক বড় বড় কাজ করবে আর জয়ী হবে।” এর পর দায়ূদ তাঁর পথে চলে গেলেন আর শৌলও তাঁর নিজের জায়গায় ফিরে গেলেন।