< ಸಮುವೇಲನು - ಪ್ರಥಮ ಭಾಗ 27 >
1 ೧ ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.
Konsa, David te di nan tèt li: “Alò, yon jou mwen va peri nan men Saül. Nanpwen anyen k ap pi bon pou mwen pase pou m chape ale nan peyi Filisten yo. Konsa, Saül va dekouraje nan chache mwen toujou sou tout teritwa Israël la, e mwen va chape nan men li.”
2 ೨ ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.
Konsa, David te leve e te travèse, li menm avèk sis-san òm ki te avè l yo, kote Akisch, fis a Maoc la, wa a Gath la.
3 ೩ ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.
Epi David te viv avèk Akisch nan Gath, li menm avèk mesye pa li yo, chak moun avèk tout moun lakay yo. David te avèk de madanm pa li yo, Achinoam Jizreyelit la ak Abigaïl, Kamelit la, vèv a Nabal la.
4 ೪ ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಹುಡುಕಲೇ ಇಲ್ಲ.
Alò, sa te pale a Saül ke David te sove ale Gath. Konsa, li pa t chache li ankò.
5 ೫ ಒಂದು ದಿನ ದಾವೀದನು ಆಕೀಷನಿಗೆ, “ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರು ಒಂದು ಪಟ್ಟಣದಲ್ಲಿ ನನಗೆ ಸ್ಥಳಕೊಡು. ನಾನು ಅಲ್ಲಿ ವಾಸಮಾಡುವೆನು” ಅಂದನು.
Alò, David te di a Akisch: “Si koulye a, mwen jwenn favè nan zye ou, kite yo ban mwen yon plas nan youn nan vil andeyò yo, pou m kapab viv la. Paske poukisa sèvitè ou ta viv nan vil wayal la avèk ou?”
6 ೬ ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ.
Konsa, Akisch te bay li Tsiklag nan jou sa a. Konsa, Tsiklag te devni pou wa Juda yo jis rive jodi a.
7 ೭ ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳೂ ವಾಸವಾಗಿದ್ದನು.
Nonb de jou ke David te viv nan peyi a Filisten yo se te 1 nan, kat mwa.
8 ೮ ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.
Alò, David avèk mesye pa li yo te monte pou te fè atak sou Gechouryen, Gizyen avèk Amalekit yo; paske se yo menm ki te mèt tè sa a depi nan tan ansyen yo, nan wout soti Schur, menm pou rive nan peyi Égypte la.
9 ೯ ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.
David te atake peyi a, e pa t kite yon gason ni yon fanm vivan. Li te pran tout mouton, bèf, bourik, chamo, avèk rad. Apre, li te retounen kote Akisch.
10 ೧೦ ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.
Alò, Akisch te di: “Se kibò ou te atake jodi a?” Epi David te reponn: “Kont Negev la nan Juda e kont Negev a Kenyen yo.”
11 ೧೧ ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.
David pa t kite yon mesye ni yon fanm vivan pou mennen yo nan Gath. Li te di: “Otreman, yo va pale afè nou, e di: ‘Se konsa David te fè e se konsa li aji pandan tout tan ke li rete nan peyi Filisten yo.’”
12 ೧೨ ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.
Konsa, Akisch te kwè David, Li te di: “Anverite, li vin fè tèt li rayisab pami pèp Israël pa l la. Konsa, li va sèvitè pa m jis pou tout tan.”