< ಸಮುವೇಲನು - ಪ್ರಥಮ ಭಾಗ 28 >
1 ೧ ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ” ಎನ್ನಲು ದಾವೀದನು,
Ja Philistealaiset kokosivat siihen aikaan sotaväkensä menemään sotaan Israelia vastaan. Ja Akis sanoi Davidille: Sinun pitää kaiketi tietämän, että sinä ja sinun väkes pitää menemän minun kanssani sotaan.
2 ೨ “ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಆಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು” ಅಂದನು.
David vastasi Akikselle: olkoon; sinä saat nähdä, mitä sinun palvelias on tekevä. Akis sanoi Davidille: sentähden asetan minä sinun pääni vartiaksi joka päivä.
3 ೩ ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.
Niin oli Samuel kuollut, ja koko Israel oli häntä murehtinut ja haudannut hänen kaupunkiinsa Raaman. Ja Saul oli ajanut maakunnasta noidat ja velhot pois.
4 ೪ ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.
Kuin Philistealaiset kokosivat heitänsä, ja tulivat ja sioittivat itsensä Sunemiin, kokosi myös Saul kaiken Israelin, ja he sioittivat itsensä Gilboaan.
5 ೫ ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು.
Kuin Saul näki Philistealaisten sotajoukon, pelkäsi hän ja hänen sydämensä oli suuresti hämmästynyt.
6 ೬ ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.
Ja Saul kysyi Herralta, ja ei Herra mitään häntä vastannut, ei unen, eikä valkeuden, eli prophetain kautta.
7 ೭ ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.
Silloin sanoi Saul palvelioillensa: etsikäät minulle vaimo, jolla noidan henki on, mennäkseni hänen tykönsä ja kysyäkseni häneltä. Hänen palveliansa sanoivat hänelle: katso, Endorissa on vaimo, jolla on noidan henki.
8 ೮ ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು
Ja Saul muutti vaatteensa ja otti toiset päällensä, ja meni sinne, ja kaksi miestä hänen kanssansa; ja he tulivat yöllä vaimon tykö, ja hän sanoi: noidu minulle noidan hengen kautta ja nosta se ylös minulle, jonka sanon sinulle.
9 ೯ ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು.
Vaimo sanoi hänelle: katso, sinä tiedät kyllä, mitä Saul tehnyt on, kuinka hän on hävittänyt noidat ja velhot maakunnasta: miksi siis tahdot minun sieluani pauloihin, että minä kuoliaaksi lyötäisiin?
10 ೧೦ ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.
Niin Saul vannoi hänelle Herran kautta ja sanoi: niin totta kuin Herra elää, ei tämä lueta sinulle pahuudeksi.
11 ೧೧ ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು.
Niin vaimo sanoi: kenen minä nostan sinulle? Hän sanoi: nosta minulle Samuel.
12 ೧೨ ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?” ಅಂದಳು.
Kuin vaimo näki Samuelin, huusi hän suurella äänellä, ja sanoi Saulille sanoen: miksis olet minun pettänyt? sinä olet Saul.
13 ೧೩ ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಲು, “ಭೂಮಿಯೊಳಗಿಂದ ಒಬ್ಬ ದೇವನು ಬರುತ್ತಿರುವುದನ್ನು ನೋಡುತ್ತೇನೆ” ಎಂದು ಉತ್ತರ ಕೊಟ್ಟಳು.
Ja kuningas sanoi hänelle: älä pelkää! mitäs näet? Vaimo sanoi Saulille: minä näen jumalat astuvan maasta ylös.
14 ೧೪ ಅವನು ತಿರುಗಿ, “ಅವನ ರೂಪ ಹೇಗಿದೆ?” ಎಂದು ಕೇಳಲು ಆಕೆಯು, “ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ” ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.
Hän sanoi hänelle: kuinka hän on muotoansa? ja hän sanoi: vanha mies nousee ylös ja on vaatetettu hameella. Niin ymmärsi Saul sen olevan Samuelin, ja kumarsi kasvoillensa maahan ja rukoili.
15 ೧೫ ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು.
Mutta Samuel sanoi Saulille: miksis olet minua vaivannut nostaen minua? Saul sanoi: minä olen suuressa ahdistuksessa: Philistealaiset sotivat minua vastaan ja Jumala on minusta erinnyt, ja ei vastaa enää minua prophetain eikä unen kautta; sentähden olen minä antanut sinua kutsua, ilmoittamaan, mitä minun tekemän pitää.
16 ೧೬ ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?
Samuel sanoi: mitäs kysyt minulta, että Herra on sinusta erinnyt ja on sinun vihamiehekses tullut?
17 ೧೭ ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.
Herra on tekevä niinkuin hän minun kauttani puhunut on: ja Herra repäisee valtakunnan sinun kädestäs pois ja antaa lähimmäiselles Davidille,
18 ೧೮ ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ.
Ettet kuullut Herran ääntä, etkä täyttänyt hänen vihansa julmuutta Amalekia vastaan, sentähden on Herra näitä sinulle tänäpänä tehnyt.
19 ೧೯ ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು” ಎಂದು ಹೇಳಿದನು.
Ja vielä sitte antaa Herra sinun kanssas Israelin Philistealaisten käsiin: huomenna pitää sinun ja sinun poikas oleman minun tykönäni: ja Herra antaa Israelin sotajoukon Philistealaisten käsiin.
20 ೨೦ ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.
Niin Saul kaatui äkisti maahan niin pitkäksi kuin hän oli, ja peljästyi suuresti Samuelin puheen tähden, niin ettei hänessä mitään enämpi voimaa ollut, sillä ei hän ollut mitään syönyt koko sinä päivänä ja yönä.
21 ೨೧ ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.
Ja vaimo meni Saulin tykö ja näki hänen suuresti peljästyneeksi, ja sanoi hänelle: katso, sinun piikas on kuullut sinun sanas, ja minä olen pannut sieluni käteeni, niin että minä kuuliainen olin sinun sanalles, jonkas puhuit minulle;
22 ೨೨ ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು” ಎಂದು ಹೇಳಿದಳು.
Niin kuule myös nyt sinä piikas sana: minä panen etees palan leipää, ettäs söisit ja tulisit väkees jällensä, ja menisit matkaas.
23 ೨೩ ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.
Hän kielsi ja sanoi: en minä syö. Niin hänen palveliansa ja vaimo vaativat häntä syömään, ja hän totteli heidän ääntänsä, ja nousi maasta ja istui vuoteelle.
24 ೨೪ ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.
Ja vaimolla oli huoneessa lihava vasikka, ja hän kiiruhti ja teurasti sen, ja otti jauhoja ja sekoitti, ja leipoi sen happamattomiksi kyrsiksi.
25 ೨೫ ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.
Ja kantoi Saulin ja hänen palveliainsa eteen. Ja kuin he olivat syöneet, nousivat he ja matkustivat sinä yönä.