< ಸಮುವೇಲನು - ಪ್ರಥಮ ಭಾಗ 29 >
1 ೧ ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.
E ajuntaram os philisteus todos os seus exércitos em Aphek: e acamparam-se os israelitas junto à fonte que está em Jizreel.
2 ೨ ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.
E os príncipes dos philisteus se foram para lá com centenas e com milhares: porém David e os seus homens iam com Achis na retaguarda.
3 ೩ ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.
Disseram então os príncipes dos philisteus: Que fazem aqui estes hebreus? E disse Achis aos príncipes dos philisteus: Não é este David, o criado de Saul, rei de Israel, que esteve comigo há alguns dias ou anos? e coisa nenhuma achei nele desde o dia em que se revoltou, até ao dia de hoje.
4 ೪ ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?
Porém os príncipes dos philisteus muito se indignaram contra ele; e disseram-lhe os príncipes dos philisteus: Faze voltar a este homem, e torne ao seu lugar em que tu o puseste, e não desça conosco à batalha, para que não se nos torne na batalha em adversário: porque com que aplacaria este a seu senhor? porventura não seria com as cabeças destes homens
5 ೫ ‘ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು’ ಎಂದು ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಈ ದಾವೀದನನ್ನು ಕುರಿತೇ ಅಲ್ಲವೇ?” ಅಂದರು.
Não é este aquele David, de quem uns aos outros respondiam nas danças, dizendo: Saul feriu os seus milhares, porém David as suas dezenas de milhares?
6 ೬ ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ಯೆಹೋವನಾಣೆ ನೀನು ಯಥಾರ್ಥನು. ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಾನು ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.
Então Achis chamou a David e disse-lhe: Vive o Senhor, que tu és reto, e que a tua entrada e a tua saída comigo no arraial é boa aos meus olhos; porque nenhum mal em ti achei, desde o dia em que a mim vieste, até ao dia de hoje; porém aos olhos dos príncipes não agradas.
7 ೭ ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವುದಿಲ್ಲ. ಆದ್ದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು ಅವರನ್ನು ಸಿಟ್ಟುಗೊಳಿಸಬಾರದು” ಎಂದು ಹೇಳಿದನು.
Volta pois agora, e volta em paz: para que não faças mal aos olhos dos príncipes dos philisteus.
8 ೮ ದಾವೀದನು ಆಕೀಷನಿಗೆ, “ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?” ಅಂದನು.
Então David disse a Achis: Porque? que fiz? ou que achaste no teu servo, desde o dia em que estive diante de ti, até ao dia de hoje, para que não vá e peleje contra os inimigos do rei meu senhor?
9 ೯ ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರಲ್ಲಾ.
Respondeu porém Achis, e disse a David: Bem o sei; e que na verdade aos meus olhos és bom como um anjo de Deus: porém disseram os príncipes dos philisteus: Não suba este conosco à batalha.
10 ೧೦ ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು.
Agora pois amanhã de madrugada levanta-te com os criados de teu senhor, que tem vindo contigo: e, levantando-vos pela manhã de madrugada, e havendo luz, parti.
11 ೧೧ ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.
Então David de madrugada se levantou, ele e os seus homens, para partirem pela manhã, e voltarem à terra dos philisteus: e os philisteus subiram a Jizreel.