< ಸಮುವೇಲನು - ಪ್ರಥಮ ಭಾಗ 3 >

1 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.
小撒慕爾在厄里面前服事上主;那時,上主的話少有,異象也罕見。
2 ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;
有一天,厄里睡在自己的房裏,他的眼睛漸漸昏花,已看不清了,
3 ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು.
天主的燈尚熄滅,撒慕爾睡在安放天主約櫃的上主的殿內。
4 ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,
那時,上主召叫說:「撒慕爾! 撒慕爾! 」他回答說:「我在這裏! 」
5 “ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲವೇ?” ಅಂದನು. ಆಗ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿದನು.
他就跑到厄里前說道:「你叫了我,我在這裏。」厄里說:「我沒有叫你,回去睡罷! 」他就回去睡了。
6 ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.
上主又叫撒慕爾;撒慕爾起來,走到厄里那裏說道:「你叫了我,我在這裏。」厄里對他說:「我兒,我沒有叫你,回去睡罷! 」
7 ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋಕ್ತಿಗಳನ್ನು ಹೊಂದಿರಲಿಲ್ಲ.
撒慕爾不知道是上主,因為上主的話尚未啟示給他。
8 ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ;
上主第三次又叫了撒慕爾;他起來,又走到厄里那裏說道:「你叫了我,我在這裏。」厄里於是明白,是上主叫了幼童,
9 ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.
便對撒慕爾說:「去睡罷! 假使有人再叫你,你就回答說:請上主發言,你的僕人在此靜聽。」撒慕爾就回去,仍睡在原處。
10 ೧೦ ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.
上主走近,像前幾次一樣召叫說:「撒慕爾,撒慕爾! 」撒慕爾便回答說:「請上主發言! 你的僕人在此靜聽。」
11 ೧೧ ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.
上主遂對撒慕爾說:「看! 我要在以色列行一件事,凡聽見的人,他的兩耳必要嗡嗡作響。
12 ೧೨ ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.
到那一天,我必對厄里從頭到尾實踐我論他的家族所說的一切。
13 ೧೩ ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
你傳報給他:我要處罰他的家族直到永遠,因為他原知道他的兩個兒子凌辱了天主,卻未責斥他們。
14 ೧೪ ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು.
因此,我對厄里的家族起誓:無論犧牲或供物,永不能抹去厄里一家的罪過。
15 ೧೫ ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.
撒慕爾睡到早晨起來,開了上主聖殿的門;但害怕告訴厄里他所見的異象。
16 ೧೬ ಆದರೆ ಏಲಿಯು, “ನನ್ನ ಮಗನೇ, ಸಮುವೇಲನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು.
厄里卻對撒慕爾說:「撒慕爾,我兒! 」他回答說:「我在這裏。」
17 ೧೭ ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು
厄里問說:「上主給你說了什麼話,請不要隱瞞我! 你若把上主給你說的話,給我隱瞞了一句,願天主加倍懲罰你。」
18 ೧೮ ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.
撒慕爾便把那些話全告訴了他,一句也沒有隱瞞。厄里說:「他是上主,他看著怎麼好,就怎樣行罷! 」
19 ೧೯ ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.
撒慕爾漸漸長大;上主與他同在,使他說的一切話,沒有一句落空。
20 ೨೦ ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.
於是全以色列從丹直到貝爾舍巴,都知道撒慕爾被立為上主的先知。
21 ೨೧ ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.
自從上主在史羅對撒慕爾顯現後,繼續在史羅顯現於他。

< ಸಮುವೇಲನು - ಪ್ರಥಮ ಭಾಗ 3 >