< ಸಮುವೇಲನು - ಪ್ರಥಮ ಭಾಗ 3 >
1 ೧ ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.
१वह बालक शमूएल एली के सामने यहोवा की सेवा टहल करता था। उन दिनों में यहोवा का वचन दुर्लभ था; और दर्शन कम मिलता था।
2 ೨ ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;
२और उस समय ऐसा हुआ कि (एली की आँखें तो धुँधली होने लगी थीं और उसे न सूझ पड़ता था) जब वह अपने स्थान में लेटा हुआ था,
3 ೩ ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು.
३और परमेश्वर का दीपक अब तक बुझा नहीं था, और शमूएल यहोवा के मन्दिर में जहाँ परमेश्वर का सन्दूक था, लेटा था;
4 ೪ ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,
४तब यहोवा ने शमूएल को पुकारा; और उसने कहा, “क्या आज्ञा!”
5 ೫ “ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲವೇ?” ಅಂದನು. ಆಗ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿದನು.
५तब उसने एली के पास दौड़कर कहा, “क्या आज्ञा, तूने तो मुझे पुकारा है।” वह बोला, “मैंने नहीं पुकारा; फिर जा लेटा रह।” तो वह जाकर लेट गया।
6 ೬ ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.
६तब यहोवा ने फिर पुकारके कहा, “हे शमूएल!” शमूएल उठकर एली के पास गया, और कहा, “क्या आज्ञा, तूने तो मुझे पुकारा है।” उसने कहा, “हे मेरे बेटे, मैंने नहीं पुकारा; फिर जा लेटा रह।”
7 ೭ ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋಕ್ತಿಗಳನ್ನು ಹೊಂದಿರಲಿಲ್ಲ.
७उस समय तक तो शमूएल यहोवा को नहीं पहचानता था, और न यहोवा का वचन ही उस पर प्रगट हुआ था।
8 ೮ ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ;
८फिर तीसरी बार यहोवा ने शमूएल को पुकारा। और वह उठकर एली के पास गया, और कहा, “क्या आज्ञा, तूने तो मुझे पुकारा है।” तब एली ने समझ लिया कि इस बालक को यहोवा ने पुकारा है।
9 ೯ ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.
९इसलिए एली ने शमूएल से कहा, “जा लेटा रह; और यदि वह तुझे फिर पुकारे, तो तू कहना, ‘हे यहोवा, कह, क्योंकि तेरा दास सुन रहा है।’” तब शमूएल अपने स्थान पर जाकर लेट गया।
10 ೧೦ ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.
१०तब यहोवा आ खड़ा हुआ, और पहले के समान पुकारा, “शमूएल! शमूएल!” शमूएल ने कहा, “कह, क्योंकि तेरा दास सुन रहा है।”
11 ೧೧ ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.
११यहोवा ने शमूएल से कहा, “सुन, मैं इस्राएल में एक ऐसा काम करने पर हूँ, जिससे सब सुननेवालों पर बड़ा सन्नाटा छा जाएगा।
12 ೧೨ ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.
१२उस दिन मैं एली के विरुद्ध वह सब कुछ पूरा करूँगा जो मैंने उसके घराने के विषय में कहा, उसे आरम्भ से अन्त तक पूरा करूँगा।
13 ೧೩ ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
१३क्योंकि मैं तो उसको यह कहकर जता चुका हूँ, कि मैं उस अधर्म का दण्ड जिसे वह जानता है सदा के लिये उसके घर का न्याय करूँगा, क्योंकि उसके पुत्र आप श्रापित हुए हैं, और उसने उन्हें नहीं रोका।
14 ೧೪ ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು.
१४इस कारण मैंने एली के घराने के विषय यह शपथ खाई, कि एली के घराने के अधर्म का प्रायश्चित न तो मेलबलि से कभी होगा, और न अन्नबलि से।”
15 ೧೫ ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.
१५और शमूएल भोर तक लेटा रहा; तब उसने यहोवा के भवन के किवाड़ों को खोला। और शमूएल एली को उस दर्शन की बातें बताने से डरा।
16 ೧೬ ಆದರೆ ಏಲಿಯು, “ನನ್ನ ಮಗನೇ, ಸಮುವೇಲನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು.
१६तब एली ने शमूएल को पुकारकर कहा, “हे मेरे बेटे, शमूएल।” वह बोला, “क्या आज्ञा।”
17 ೧೭ ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು
१७तब उसने पूछा, “वह कौन सी बात है जो यहोवा ने तुझ से कही है? उसे मुझसे न छिपा। जो कुछ उसने तुझ से कहा हो यदि तू उसमें से कुछ भी मुझसे छिपाए, तो परमेश्वर तुझ से वैसा ही वरन् उससे भी अधिक करे।”
18 ೧೮ ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.
१८तब शमूएल ने उसको रत्ती-रत्ती बातें कह सुनाईं, और कुछ भी न छिपा रखा। वह बोला, “वह तो यहोवा है; जो कुछ वह भला जाने वही करे।”
19 ೧೯ ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.
१९और शमूएल बड़ा होता गया, और यहोवा उसके संग रहा, और उसने शमूएल की कोई भी बात निष्फल होने नहीं दी।
20 ೨೦ ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.
२०और दान से बेर्शेबा तक के रहनेवाले सारे इस्राएलियों ने जान लिया कि शमूएल यहोवा का नबी होने के लिये नियुक्त किया गया है।
21 ೨೧ ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.
२१और यहोवा ने शीलो में फिर दर्शन दिया, क्योंकि यहोवा ने अपने आपको शीलो में शमूएल पर अपने वचन के द्वारा प्रगट किया।