< ಸಮುವೇಲನು - ಪ್ರಥಮ ಭಾಗ 30 >
1 ೧ ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,
and to be in/on/with to come (in): come David and human his Ziklag in/on/with day [the] third and Amalekite to strip to(wards) Negeb and to(wards) Ziklag and to smite [obj] Ziklag and to burn [obj] her in/on/with fire
2 ೨ ಆ ಊರಿನಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು.
and to take captive [obj] [the] woman which in/on/with her from small and till great: large not to die man: anyone and to lead and to go: went to/for way: journey their
3 ೩ ಆದರೆ ಯಾರನ್ನೂ ಕೊಂದಿರಲಿಲ್ಲ. ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಡಲ್ಪಟ್ಟಿರುವುದನ್ನೂ, ತಮ್ಮ ಹೆಂಡತಿಯರೂ ಗಂಡುಮಕ್ಕಳೂ ಸೆರೆಯಾಗಿ ಒಯ್ಯಲ್ಪಟ್ಟಿರುವುದನ್ನೂ ಕಂಡು
and to come (in): come David and human his to(wards) [the] city and behold to burn in/on/with fire and woman: wife their and son: child their and daughter their to take captive
4 ೪ ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು.
and to lift: loud David and [the] people which with him [obj] voice their and to weep till which nothing in/on/with them strength to/for to weep
5 ೫ ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.
and two woman: wife David to take captive Ahinoam [the] Jezreel and Abigail woman: wife Nabal [the] Carmelite
6 ೬ ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು
and be distressed to/for David much for to say [the] people to/for to stone him for to rebel soul all [the] people man: anyone upon (son: child his *Q(K)*) and upon daughter his and to strengthen: strengthen David in/on/with LORD God his
7 ೭ ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.
and to say David to(wards) Abiathar [the] priest son: child Ahimelech to approach: bring [emph?] please to/for me [the] ephod and to approach: bring Abiathar [obj] [the] ephod to(wards) David
8 ೮ ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.
and to ask David in/on/with LORD to/for to say to pursue after [the] band [the] this to overtake him and to say to/for him to pursue for to overtake to overtake and to rescue to rescue
9 ೯ ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು
and to go: went David he/she/it and six hundred man which with him and to come (in): come till torrent: valley [the] Besor and [the] to remain to stand: stand
10 ೧೦ ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.
and to pursue David he/she/it and four hundred man and to stand: stand hundred man which to faint from to pass [obj] torrent: valley [the] Besor
11 ೧೧ ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,
and to find man Egyptian in/on/with land: country and to take: bring [obj] him to(wards) David and to give: give to/for him food: bread and to eat and to water: drink him water
12 ೧೨ ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.
and to give: give to/for him millstone fig cake and two cluster and to eat and to return: rescue spirit his to(wards) him for not to eat food: bread and not to drink water three day and three night
13 ೧೩ ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು, ಎಲ್ಲಿಯವನು?” ಎಂದು ಕೇಳಿದನು. ಅವನು “ನಾನು ಐಗುಪ್ತನು, ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡಿದ್ದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
and to say to/for him David to/for who? you(m. s.) and where? from this you(m. s.) and to say youth Egyptian I servant/slave to/for man Amalekite and to leave: forsake me lord my for be weak: ill [the] day three
14 ೧೪ ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.
we to strip Negeb [the] Cherethite and upon which to/for Judah and upon Negeb Caleb and [obj] Ziklag to burn in/on/with fire
15 ೧೫ ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.
and to say to(wards) him David to go down me to(wards) [the] band [the] this and to say to swear [emph?] to/for me in/on/with God if: surely no to die me and if: surely no to shut me in/on/with hand: power lord my and to go down you to(wards) [the] band [the] this
16 ೧೬ ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.
and to go down him and behold to leave upon face: surface all [the] land: country/planet to eat and to drink and to celebrate in/on/with all [the] spoil [the] great: large which to take: take from land: country/planet Philistine and from land: country/planet Judah
17 ೧೭ ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
and to smite them David from [the] twilight and till [the] evening to/for morrow their and not to escape from them man: anyone that if: except if: except four hundred man youth which to ride upon [the] camel and to flee
18 ೧೮ ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.
and to rescue David [obj] all which to take: take Amalek and [obj] two woman: wife his to rescue David
19 ೧೯ ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರುಗಿ ತೆಗೆದುಕೊಂಡು ಬಂದನು.
and not to lack to/for them from [the] small and till [the] great: large and till son: child and daughter and from spoil and till all which to take: take to/for them [the] all to return: return David
20 ೨೦ ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು.
and to take: take David [obj] all [the] flock and [the] cattle to lead to/for face: before [the] livestock [the] he/she/it and to say this spoil David
21 ೨೧ ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.
and to come (in): come David to(wards) hundred [the] human which to faint from to go: follow after David and to dwell them in/on/with torrent: valley [the] Besor and to come out: come to/for to encounter: meet David and to/for to encounter: meet [the] people which with him and to approach: approach David [obj] [the] people and to ask to/for them to/for peace: greeting
22 ೨೨ ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ” ಎಂದರು.
and to answer all man bad: evil and Belial from [the] human which to go: went with David and to say because which not to go: went with me not to give: give to/for them from [the] spoil which to rescue for if: except man: anyone [obj] woman: wife his and [obj] son: child his and to lead and to go: went
23 ೨೩ ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.
and to say David not to make: do so brother: male-sibling my [obj] which to give: give LORD to/for us and to keep: guard [obj] us and to give: give [obj] [the] band [the] to come (in): come upon us in/on/with hand: power our
24 ೨೪ ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.
and who? to hear: hear to/for you to/for word: thing [the] this for like/as portion [the] to go down in/on/with battle and like/as portion [the] to dwell upon [the] article/utensil together to divide
25 ೨೫ ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.
and to be from [the] day: today [the] he/she/it and above [to] and to set: make her to/for statute: decree and to/for justice: judgement to/for Israel till [the] day: today [the] this
26 ೨೬ ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು.
and to come (in): come David to(wards) Ziklag and to send: depart from [the] spoil to/for old: elder Judah to/for neighbor his to/for to say behold to/for you blessing from spoil enemy LORD
27 ೨೭ ಬಹುಮಾನ ಹೊಂದಿದವರು ಯಾರೆಂದರೆ: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,
to/for which in/on/with Bethel Bethel and to/for which in/on/with Ramoth Negeb and to/for which in/on/with Jattir
28 ೨೮ ಅರೋಯೇರಿನವರು ಸಿಪ್ಮೋತಿನವರು ಎಷ್ಟೆಮೋವದವರು,
and to/for which in/on/with Aroer and to/for which in/on/with Siphmoth and to/for which in/on/with Eshtemoa
29 ೨೯ ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,
and to/for which in/on/with Racal and to/for which in/on/with city [the] Jerahmeelite and to/for which in/on/with city [the] Kenite
30 ೩೦ ಹೊರ್ಮದವರು, ಬೋರಾಷಾನಿನವರು, ಅತಾಕಿನವರು,
and to/for which in/on/with Hormah and to/for which in/on/with Bor-ashan Bor-ashan and to/for which (in/on/with Athach *LA(bh)*)
31 ೩೧ ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.
and to/for which in/on/with Hebron and to/for all [the] place which to go: walk there David he/she/it and human his