< ಸಮುವೇಲನು - ಪ್ರಥಮ ಭಾಗ 30 >

1 ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,
Nnansa so, Dawid ne ne mmarima koduu Siklag. Na Amalekfo abɛtow ahyɛ Negeb so ahyew Siklag pasaa,
2 ಆ ಊರಿನಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು.
akyekyeree mmea ne mmofra ne mpanyin a wɔwɔ mu nyinaa. Wɔankum wɔn mu biara, mmom, wɔsoaa wɔn de wɔn kɔe.
3 ಆದರೆ ಯಾರನ್ನೂ ಕೊಂದಿರಲಿಲ್ಲ. ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಡಲ್ಪಟ್ಟಿರುವುದನ್ನೂ, ತಮ್ಮ ಹೆಂಡತಿಯರೂ ಗಂಡುಮಕ್ಕಳೂ ಸೆರೆಯಾಗಿ ಒಯ್ಯಲ್ಪಟ್ಟಿರುವುದನ್ನೂ ಕಂಡು
Bere a Dawid ne ne mmarima no huu sɛnea Siklag asɛe ne asɛm a ato wɔn abusuafo no,
4 ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು.
wotwaa agyaadwo ara kosii sɛ afei na wontumi ntwa agyaadwo no bio.
5 ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.
Dawid yerenom baanu a wɔne Yesreelni Ahinoam ne Karmelni Abigail a na ɔyɛ Nabal yere no ka wɔn a wɔsoaa wɔn kɔe no ho.
6 ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು
Dawid ho yeraw no yiye, efisɛ na mmarima no adwene ho sɛ wobesiw no abo, esiane wɔn mmabarima ne wɔn mmabea a wɔakyekyere wɔn no nti. Nanso Dawid nyaa ahoɔden wɔ Awurade, ne Nyankopɔn mu.
7 ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.
Na Dawid ka kyerɛɛ ɔsɔfo Abiatar se, “Fa asɔfotade no brɛ me.” Na Abiatar de bae.
8 ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.
Na Dawid bisaa Awurade se, “Mintiw dɔm no ana? Mɛto wɔn ana?” Awurade buaa no se, “Yiw, tiw wɔn. Na biribiara a wɔafa afi mo nkyɛn no, mo nsa bɛka ne nyinaa.”
9 ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು
Enti Dawid ne ne mmarima ahansia no sii kwan so. Ankyɛ biara na woduu Besor asuwa no so.
10 ೧೦ ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.
Nanso mmarima no mu ahannu de, na wɔabrɛbrɛ yiye nti wɔantumi antwa asu no. Ɛno nti, Dawid de asraafo ahannan a wɔaka no toaa so.
11 ೧೧ ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,
Asraafo no bi huu Misraimni barima bi wɔ wuram hɔ ma wɔde no brɛɛ Dawid. Wɔmaa no brodo sɛ onni ne nsu sɛ ɔnnom.
12 ೧೨ ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.
Wɔsan maa no borɔdɔma ɔfam sin bi ne bobe aba ɔbɔnta, efisɛ na hwee nkaa nʼano nnansa; awia ne anadwo. Ankyɛ na onyaa ahoɔden.
13 ೧೩ ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು, ಎಲ್ಲಿಯವನು?” ಎಂದು ಕೇಳಿದನು. ಅವನು “ನಾನು ಐಗುಪ್ತನು, ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡಿದ್ದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
Dawid bisaa no se, “Hena nipa ne wo, na wufi he?” Obuae se, “Meyɛ Misraimni, na Amalekni bi akoa ne me. Nnansa ni na me wura gyaw me hɔ, efisɛ na meyare.
14 ೧೪ ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.
Yɛkɔtoaa Keretifo wɔ Negeb a ɛyɛ Yudaman wɔ Kaleb asase so, na yɛhyew Siklag.”
15 ೧೫ ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.
Dawid bisaa no se, “Enti wubedi mʼanim akɔ wɔn nkyɛn?” Aberante no buae se, “Sɛ wode Onyankopɔn din bɛka ntam sɛ worenkum me anaa worensan mfa me mma me wura de a, ɛno de, medi wʼanim de wo akɔ.”
16 ೧೬ ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.
Na Misraimni no dii wɔn anim kɔɔ Amalekfo no atenae. Bere a Dawid ne ne mmarima no duu hɔ no, na Amalekfo no ahwete wɔ sare no so a wɔredidi nom na wɔde ahosɛpɛw resaw, efisɛ na wɔanya asade bebree afi Filistifo nkyɛn ne Yuda asase so.
17 ೧೭ ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
Dawid ne ne mmarima to hyɛɛ wɔn so, kunkum wɔn wɔ afoa ano anadwo mu no nyinaa, kosii adekyee no anwummere. Amalekfo no mu biara antumi anguan, gye mmarima ahannan a wɔtenatenaa yoma so guanee no.
18 ೧೮ ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.
Dawid gyee biribiara a Amalekfo no fae, san gyee ne yerenom baanu no.
19 ೧೯ ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರುಗಿ ತೆಗೆದುಕೊಂಡು ಬಂದನು.
Biribiara anyera; sɛ ɛyɛ akumaa anaa ɔpanyin, abarimaa anaa abeawa anaa biribiara a wɔfae sɛ asade no, Dawid de ne nyinaa san bae.
20 ೨೦ ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು.
Nʼakofo no kaa nguan ne anantwi no de wɔn bae. Na wɔkae se, “Eyinom nyinaa yɛ Dawid asade.”
21 ೨೧ ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.
Na woduu Besor asuwa no so no, wohuu mmarima ahannu a ɔbrɛ dodow nti, wɔantumi ne wɔn ankɔ no. Dawid kyiaa wɔn anigye so.
22 ೨೨ ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ” ಎಂದರು.
Nanso Dawid mmarima no mu asɛmpɛfo bi kae se, “Wɔne yɛn ankɔ nti, wɔrennya asade no bi. Momfa wɔn yerenom ne wɔn mma mma wɔn, na monka nkyerɛ wɔn se, womfi yɛn ani so nkɔ.”
23 ೨೩ ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.
Nanso Dawid kae se, “Dabi, anuanom! Monnyɛ nea Awurade de ama yɛn no ho pɛsɛmenkominya. Wakora yɛn so, aboa yɛn ama yɛadi yɛn atamfo so nkonim.
24 ೨೪ ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.
Mugye di sɛ sɛ moka no saa a, obi betie mo? Sɛ yɛrekyɛ a, momma yɛnkyɛ no pɛ mma wɔn a wɔkɔ ɔsa ne wɔn a wɔhwɛ akode so nyinaa.”
25 ೨೫ ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.
Efi saa bere no, Dawid yɛɛ eyi mmara, maa Israel nyinaa na wɔda so di so saa ara de besi nnɛ.
26 ೨೬ ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು.
Bere a Dawid duu Siklag no, ɔsoma ma wɔde asade no bi kɔmaa Yuda mpanyimfo a na wɔyɛ ne nnamfonom kae se, “Mo akyɛde a yɛfa fi Awurade atamfo nsam ni.”
27 ೨೭ ಬಹುಮಾನ ಹೊಂದಿದವರು ಯಾರೆಂದರೆ: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,
Wɔde akyɛde no kɔmaa wɔn a wɔwɔ Bet-El, Ramot a ɛwɔ anafo fam ne Yatir;
28 ೨೮ ಅರೋಯೇರಿನವರು ಸಿಪ್ಮೋತಿನವರು ಎಷ್ಟೆಮೋವದವರು,
wɔn a wɔwɔ Aroer, Sifmot, Estemoa
29 ೨೯ ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,
ne Rakal ne wɔn a wɔwɔ Yerahmeelfo nkurow mu ne Kenifo kurow mu,
30 ೩೦ ಹೊರ್ಮದವರು, ಬೋರಾಷಾನಿನವರು, ಅತಾಕಿನವರು,
ne wɔn a wɔwɔ Horma, Bor-Asan, Atak,
31 ೩೧ ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.
Hebron ne mmeaemmeae a Dawid ne ne mmarima kyinkyinii hɔ nyinaa.

< ಸಮುವೇಲನು - ಪ್ರಥಮ ಭಾಗ 30 >